“ಕಾಂಗ್ರೆಸ್‌ನಿಂದ ಮಾತ್ರ ಬಡವರಿಗೆ ನಿವೇಶನ’
Team Udayavani, Aug 8, 2017, 6:25 AM IST
ಪುಂಜಾಲಕಟ್ಟೆ : ಕಾಂಗ್ರೆಸ್ ಪಕ್ಷದ ಆಡಳಿತ ಮಾತ್ರ ಮಾತ್ರ ಬಡವರಿಗೆ ನಿವೇಶನ, ಸೂರು ಕೊಡುವ ಕೆಲಸ ಮಾಡಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಬಂಟ್ವಾಳ ತಾ| ಇರ್ವತ್ತೂರು ಗ್ರಾ.ಪಂ. ಸಭಾಂಗಣದಲ್ಲಿ ಇರ್ವತ್ತೂರು ಮತ್ತು ಮೂಡುಪಡುಕೋಡಿ ಗ್ರಾಮಗಳ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.
ಇಂದಿರಾ ಗಾಂಧಿಯವರ ದೂರದರ್ಶಿತ್ವದಿಂದ ಭೂಮಸೂದೆ ಕಾಯ್ದೆಯಿಂದ ಬಡಜನತೆ ಪಟ್ಟಾದಾರಿಕೆ ಹೊಂದಿದ್ದಾರೆ .
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ ಯೋಜನೆಗಳಿಂದ ಮೆಚ್ಚುಗೆ ಗಳಿಸಿದೆ ಎಂದರು.
ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ತಾಲೂಕು ಅಕ್ರಮ -ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ತಾ.ಪಂ. ಸದಸ್ಯ ರಮೇಶ್ ಕುಡೆ¾àರ್, ಗ್ರಾ.ಪಂ. ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್, ಸದಸ್ಯ ಪ್ರಶಾಂತ್ ಕೋಟ್ಯಾನ್, ಎಪಿಎಂಸಿ ಸದಸ್ಯೆ ಭಾರತಿ, ಪಂ.ಅ. ಅಧಿಕಾರಿ ಗಣೇಶ್ ಶೆಟ್ಟಿಗಾರ್, ಗ್ರಾಮಕರಣಿಕ ಕುಮಾರ್‌ಟಿ.ಸಿ., ಗ್ರಾಮಸಹಾಯಕ ಸಂತೋಷ್, ಸುಧೀರ್ ಶೆಟ್ಟಿ , ಗುರುಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಚಿವರನ್ನು ಸಮ್ಮಾನಿಸಲಾಯಿತು.
84 ಫಲಾನುಭವಿಗಳಿಗೆ ಹಕ್ಕುಪತ್ರ, 5ಮಂದಿಗೆ ಸಹಾಯಧನ, 4 ಮಂದಿಗೆ ವಸತಿ ನಿರ್ಮಾಣ ಮಂಜೂರು ಪತ್ರ ವಿತರಿಸಲಾಯಿತು. Ó ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ, ಎಸ್. ಅಬ್ದುಲ್ ರಹಿಮಾನ್ ಎಡೂ¤ರು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.