“ಸೈನ್ಯದಲ್ಲಿ ಯುವತಿಯರಿಗೆ ಸಾಕಷ್ಟು ಅವಕಾಶ’
ಕಟೀಲು ಕಾಲೇಜಿನಲ್ಲಿ ಉಪನ್ಯಾಸ
Team Udayavani, Jul 14, 2019, 5:58 AM IST
ಕಟೀಲು: ಭೂ ಸೇನೆ, ನೌಕಾ ಸೇನೆ ಹಾಗೂ ವಾಯು ಸೇನೆಗಳಲ್ಲಿ ಯುವತಿಯರಿಗೆ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ದೇಶ ಸೇವೆ ಸಲ್ಲಿಸಲು ಅತ್ಯುತ್ತಮ ವೇದಿಕೆಯಾಗಿದೆ ಎಂದು ಭಾರತೀಯ ನೌಕಾಪಡೆಯ ಕರ್ನಾಟಕದ ಮೊದಲ ಮಹಿಳಾ ಕಮಾಂಡರ್, ಕಾರವಾರ ಸೈನಿಕ ಕಲ್ಯಾಣ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಕಮಾಂಡರ್ ಇಂದು ಪ್ರಭಾ ವಿ. ಹೇಳಿದರು.
ಜು. 13 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಸಂಘ, ಮಾನವಿಕ ಸಂಘಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈನ್ಯದಲ್ಲಿ ಮಹಿಳೆಯರು ಕುರಿತಾಗಿ ಅವರು ಉಪನ್ಯಾಸ ನೀಡಿದರು.
ಸೈನ್ಯದಲ್ಲಿ ಹಿಂದೆ ಮಹಿಳೆಯರ ಸಂಖ್ಯೆ ತೀರಾ ಕಡಿಮೆಯಾಗಿತ್ತು. ಈಗ ಅವರ ಸಾಧನೆ, ಪ್ರತಿಭೆಗಳನ್ನು ಗಮನಿಸಿ ಶಾಶ್ವತ ಸೇವೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಸೇನೆಯ ಯುದ್ಧ ವಿಮಾನಗಳಲ್ಲಿ ಪೈಲೆಟ್‌ಗಳಾಗಿಯೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಗ್ರಾಮೀಣದ ಯುವತಿಯರೂ ಸೇನೆಯ ನಾನಾ ವಿಭಾಗಗಳಲ್ಲಿ ಸೇವೆ ಸಲ್ಲಿಸಲು ಮುಂದಾಗಬೇಕು. ಯುವಕರಿಗೂ ಸೇನೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಸಾಧನೆ, ದೇಶ ಸೇವೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ವಿದ್ಯಾರ್ಥಿ ಜೀವನದಲ್ಲೇ ಈ ಬಗ್ಗೆ ಆಸಕ್ತರಾಗಬೇಕು ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ| ಕೃಷ್ಣ ಸ್ವಾಗತಿಸಿದರು. ಉಪನ್ಯಾಸಕಿ ಸುಶ್ಮೀತಾ ಸ್ವಾಗತಿಸಿದರು. ನಿವೇದಿತಾ ವಂದಿಸಿದರು. ಸನ್ನಿಧಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.