ರಾಜಕೀಯ ಕಾರಣಕ್ಕಾಗಿ ವಿಪಕ್ಷ ಪ್ರತಿಭಟನೆ: ಬಿಜೆಪಿ ಟೀಕೆ
Team Udayavani, Dec 20, 2019, 5:30 AM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ನಾಗರಿಕರಿಗೆ ಯಾವುದೇ ತೊಂದರೆ ಇಲ್ಲ. ಈ ಸತ್ಯ ಗೊತ್ತಿದ್ದರೂ ವಿಪಕ್ಷಗಳು ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿವೆ. ಈ ಕಾಯ್ದೆ ದೇಶದ ಒಳಿತಾಗಿ ಇರುವುದು ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ತಿಳಿಸಿದ್ದಾರೆ.
ಮಂಗಳೂರಿನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಬಗ್ಗೆ ತಪ್ಪು ತಿಳಿವಳಿಕೆ ಹೊಂದಿರುವ ಕಾರಣಕ್ಕೆ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ನಡೆಯುತ್ತಿದೆ. ಈ ಕಾಯ್ದೆಯನ್ನು ಅನುಷ್ಠಾನಗೊಳಿಸದಂತೆ ತಡೆಯುವುದೇ ವಿಪಕ್ಷಗಳ ಉದ್ದೇಶವಾಗಿದೆ ಎಂದು ಟೀಕಿಸಿದರು.
ಖಾದರ್ ಹೇಳಿಕೆಗೆ ತಿರುಗೇಟು
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಶಾಸಕ ಯು.ಟಿ. ಖಾದರ್ ಅಡ್ಡ ಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಜಿತೇಂದ್ರ ಕೊಟ್ಟಾರಿ ಟೀಕಿಸಿದರು.
ಖಾದರ್ ಒಂದು ಕಡೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದರೆ, ಇನ್ನೊಂದೆಡೆ ಈ ಕಾಯ್ದೆಯ ಹಿಂದೆ ಬಿಜೆಪಿಯ ಹಿಡನ್ ಅಜೆಂಡಾ ಇದೆ, ಇದು ಸಂವಿಧಾನಬಾಹಿರ ಎಂದೆಲ್ಲ ಗೊಂದಲದ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ ಅವರು, ಬಿಜೆಪಿಯ ಹಿಡನ್ ಅಜೆಂಡಾ ಏನೆಂಬುದನ್ನು ಖಾದರ್ ತಿಳಿಯಪಡಿಸಬೇಕೆಂದು ಆಗ್ರಹಿಸಿದರು.
ಎನ್‌ಆರ್‌ಸಿ ಮಸೂದೆಯು ಮುಸ್ಲಿಂ ವಿರೋಧಿ ಅಲ್ಲ; 350 ಮಂದಿ ಸಂಸದರು ಸೇರಿ ನಿರ್ಧರಿಸಿ ಅಂಗೀಕಾರ ನೀಡಿದ ಈ ಮಸೂದೆಯನ್ನು ದೇಶದ ಎಲ್ಲ ರಾಜ್ಯಗಳೂ ಅನುಷ್ಠಾನಗೊಳಿಸಬೇಕಾಗುತ್ತದೆ ಎಂಬುದನ್ನು ಮಾಜಿ ಸಚಿವರೂ ಶಾಸಕರೂ ಆಗಿರುವ ಯು.ಟಿ. ಖಾದರ್ ಅರ್ಥಮಾಡಿಕೊಳ್ಳಬೇಕು. ಮಸೂದೆಯನ್ನು ಕಡೆಗಣಿಸುವುದು ಕೀಳು ಮಟ್ಟದ ರಾಜಕಾರಣ ಎಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ನಿತಿನ್ ಕುಮಾರ್, ಸತೀಶ್ ಪ್ರಭು, ಸಂದೇಶ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಶಾಸಕ ಖಾದರ್ ವಿರುದ್ಧ ದೂರು
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಬಹಿರಂಗವಾಗಿ ಶಾಸಕ ಯು.ಟಿ.ಖಾದರ್ ನೀಡಿರುವ ಹೇಳಿಕೆ ವಿರುದ್ಧ ದ.ಕ. ಬಿಜೆಪಿ ಯುವ ಮೋರ್ಚಾ ಘಟಕವು ನಗರದ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ. ದಾಖಲೆ ಸಮೇತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಂತಿ ಕದಡುವ ರೀತಿಯ ಹೇಳಿಕೆ ನೀಡಿರುವ ಖಾದರ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಲಾಗಿದೆ ಎಂದು ಯುವ ಮೋರ್ಚಾ ಮುಖಂಡ ಸಂದೇಶ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.