ಮನೆಯಂಗಳದಲ್ಲಿ ಸಾವಯವ ತರಕಾರಿ ಕೃಷಿ


Team Udayavani, Oct 25, 2018, 10:45 AM IST

25-october-3.gif

ಅರಂತೋಡು: ತೊಡಿಕಾನ ಗ್ರಾಮದ ಪ್ರೇಮಾ ವಸಂತ ಭಟ್‌ ಅವರು ಮನೆಯಂಗಳದಲ್ಲಿಯೇ ಸಾವಯವ ತರಕಾರಿ ಕೃಷಿ ಮಾಡಿ ಕೈ ತುಂಬಾ ಆದಾಯ ಗಳಿಸುತ್ತಿದ್ದಾರೆ. ಘಟ್ಟ ಪ್ರದೇಶದ ತರಕಾರಿಗಳು ಈ ಪರಿಸರದ ಮಾರುಕಟ್ಟೆಗೆ ಸಾಕಷ್ಟು ಬರುತ್ತಿವೆ. ಸಾವಯವ ತರಕಾರಿ ಬಹಳ ರುಚಿಕರ. ಧಾರಣೆ ಜಾಸ್ತಿಯಾದರೂ ಊರಿನ ತರಕಾರಿಯನ್ನು ಜನರು ಮಾರುಕಟ್ಟೆಯಿಂದ ಖರೀದಿಸುತ್ತಾರೆ.

ಸಾಮಾಜಿಕ ಕ್ಷೇತ್ರದಲ್ಲೂ ಸೈ
ತೊಡಿಕಾನ ಗ್ರಾಮದ ದೊಡ್ಡಡ್ಕ ಉರಿಮಜಲು ಮನೆತನದ ಪ್ರಗತಿಪರ ಕೃಷಿಕ ವಸಂತ ಭಟ್‌ ಅವರ ಪತ್ನಿ ಪ್ರೇಮಾ ಅವರು ಕೆ.ಎಂ.ಎಫ್. ಮಂಗಳೂರು ಒಕ್ಕೂಟದ ನಿರ್ದೇಶಕಿಯಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ. ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ, ಸ್ಥಳೀಯ ಪಯಸ್ವಿನಿ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ತೊಡಿಕಾನ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಉನ್ನತಿಯತ್ತ ಮುನ್ನಡೆಸಿದ್ದಾರೆ. ಅವರ ಅವಧಿಯಲ್ಲಿ ಇಲ್ಲಿ ಹಾಲು ಸಂಗ್ರಹಕ್ಕೆ ಶೀತಲಿಕರಣ ಘಟಕ ಅಳವಡಿಸಲಾಗಿದೆ. ಇದೀಗ ಅವರು ಹಾಲು ಉತ್ಪಾದಕರ ಸಹಕಾರಿ ಕೇಂದ್ರದ ಸದಸ್ಯೆಯಾಗಿದ್ದು, ದಿನನಿತ್ಯ 15 ಲೀ. ಹಾಲನ್ನು ಡೈರಿಗೆ ಸರಬರಾಜು ಮಾಡುತ್ತಿದ್ದಾರೆ. ಸಹಕಾರ, ಸಾಮಾಜಿಕ ರಂಗಳಲ್ಲಿದ್ದರೂ ಆಸಕ್ತಿಯಿಂದ ಕೈತೋಟದಲ್ಲಿ ಸಾವಯವ ಕೃಷಿ ಕೈಗೊಂಡಿದ್ದಾರೆ.

ಬಗೆಬಗೆಯ ತರಕಾರಿಗಳು 
ಘಟ್ಟದ ಮೇಲೆ ಜಾಸ್ತಿಯಾಗಿ ಬೆಳೆಯುವ ಮಗೆ ಸೌತೆ, ಅಲಸಂಡೆ, ಬೆಂಡೆಕಾಯಿ, ಮುಳ್ಳು ಸೌತೆ, ಪಡುವಲಕಾಯಿ, ಹೀರೆಕಾಯಿ, ಕುಂಬಳವನ್ನು ಮನೆಯಂಗಳದ ಸುಮಾರು 10 ಸೆಂಟ್ಸ್‌  ಜಾಗದಲ್ಲಿ ಬೆಳೆದಿದ್ದಾರೆ. ಒಂದು ಮಗೆ ಸೌತೆ 4ರಿಂದ 8 ಕೆ.ಜಿ. ತೂಗುತ್ತದೆ. ಫ‌ಸಲು ಚೆನ್ನಾಗಿದೆ. ತರಕಾರಿ ಕೃಷಿಗೆ ಜೀವಾಮೃತ, ಸಗಣಿ, ಇತರ ಸಾವಯವ ಗೊಬ್ಬರ ನೀಡುತ್ತಾರೆ. ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಅಂಗಳದ ಸುತ್ತಲೂ ನೆಟ್ಟಿದ್ದಾರೆ. ಇದರಲ್ಲಿ ಮುಖ್ಯವಾಗಿ 8 ತಳಿಯ ಪೇರಳೆ ಹಣ್ಣಿನ ಗಿಡ, ಮಾವು, ವಿವಿಧ ತಳಿಯ ಹಲಸು, ಸ್ಟ್ರಾಬೆರಿ ಗಿಡ – ಹೀಗೆ ಅನೇಕ ಹಣ್ಣಿನ ಗಿಡಗಳು ಬೆಳೆದು ನಿಂತಿವೆ. ಇತರರಿಗೆ ಪ್ರೇರಣೆಯಾಗುವಂತೆ ಅವರ ಕಾರ್ಯ ಸಾಗುತ್ತಲಿದೆ.

ಮನೆಗೇ ಬಂದು ಖರೀದಿಸುತ್ತಾರೆ
ಸಾವಯವ ಪದ್ಧತಿಯಲ್ಲಿ ಬೆಳೆದ ತರಕಾರಿಗೆ ಉತ್ತಮ ಬೇಡಿಕೆ ಇದೆ. ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ಸಿಗುತ್ತದೆ. ಕೆಲವರು ಮನೆಗೆ ಬಂದು ತರಕಾರಿ ಖರೀದಿಸಿಕೊಂಡು ಹೋಗುತ್ತಾರೆ. ಉತ್ತಮ ಆದಾಯದ ಜತೆಗೆ ತರಕಾರಿ ಕೃಷಿ ಮಾನಸಿಕವಾಗಿಯೂ ನೆಮ್ಮದಿ ನೀಡುತ್ತಿದೆ. ಸಾವಯವ ತರಕಾರಿಯನ್ನು ಸೇವಿಸುವುದರಿಂದ ನಮ್ಮೆಲ್ಲರ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬಹುದು.
 – ಪ್ರೇಮಾ ವಸಂತ್‌ ಭಟ್‌,
   ತೊಡಿಕಾನ 

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.