ಯೇನೆಪೊಯ:ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
Team Udayavani, Jul 11, 2017, 2:10 AM IST
ಬಲ್ಮಠ : ಇಲ್ಲಿನ ಯೇನೆಪೊಯ ಕಾಲೇಜಿನಲ್ಲಿ ಪ್ರಥಮಬಿ.ಕಾಂ., ಬಿ.ಕಾಂ – ಎಸಿಸಿಎ ಮತ್ತು ಬಿ.ಎಚ್.ಎಸ್. ಹಾಸ್ಪಿಟಾಲಿಟಿ ಸಯನ್ಸ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ (ಪ್ರೇರಣಾ) ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿದ್ದ ಯೇನೆಪೊಯ ವಿವಿ ಕುಲಸಚಿವ ಜಿ.ಶ್ರೀಕುಮಾರ್ ಮೆನನ್ ಅವರು ವಿದ್ಯಾರ್ಥಿಗಳಿಗೆ ಬಿ.ಕಾಂ. ಮತ್ತು ಬಿ.ಕಾಂ.- ಎಸಿಸಿಎ, ಹೊಟೇಲ್ ಮ್ಯಾನೇಜ್‌ಮೆಂಟ್ ಕೋರ್ಸಿನ ಮಹತ್ವ ಹಾಗೂ ಉದ್ಯೋಗ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಯೇನೆಪೋಯ ಸಂಸ್ಥೆಯ ಮಾರಾಟ ಮತ್ತು ಸರಕು ಖರೀದಿ ವಿಭಾಗದ ನಿರ್ದೇಶಕ ಯೇನೆಪೊಯ ಮೊದಿನ್‌ಖುರ್ಷಿದ್, ಸಂಸ್ಥೆಯ ಫುಡ್ ಆ್ಯಂಡ್ ಬಿವೆರೆಜಸ್ ಜನರಲ್ ಮ್ಯಾನೇಜರ್ ರವಿ ಎನ್. ಖಂಡಿಗೆ ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ|ಜೊಬಿ ಇ.ಸಿ. ಮಾತನಾಡಿ, ಪೋಷಕರು ಹಾಗೂ ಉಪನ್ಯಾಸಕರ ಸಹಕಾರದಿಂದ ವಿದ್ಯಾರ್ಥಿಗಳ ಸರ್ವರ್ತೋಮುಖ ಬೆಳವಣಿಗೆ ಸಾಧ್ಯ ಎಂದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಚೈತ್ರಾ ಕಾಲೇಜಿನ ನೀತಿನಿಯಮಗಳನ್ನು ವಿವರಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಕಾವ್ಯಾ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾರತಿ ಇವರು ಅತಿಥಿಗಳನ್ನು ಪರಿಚಯಿಸಿದರು. ಮಾನವ ಸಂಪನ್ಮೂಲ ವಿಭಾಗದ ಉಪನ್ಯಾಸಕಿ ನೀಕ್ಷಿತಾ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳ ಪೋಷಕರು, ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್.. ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.