‘ನಮ್ಮ ಗ್ರಾಮ ನಮ್ಮ ಯೋಜನೆ ‘ ಅತ್ಯುತ್ತಮ ಅನುಷ್ಠಾನ 


Team Udayavani, Oct 1, 2018, 12:07 PM IST

1-october-8.gif

ಕಡಬ: 2016-17ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದ್ದ ರಾಮಕುಂಜ ಗ್ರಾ.ಪಂ.ಗೆ ‘ನಮ್ಮ ಗ್ರಾಮ ನಮ್ಮ ಯೋಜನೆ’ಯನ್ನು 2016-17ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಅನುಷ್ಠಾನ ಮಾಡಿರುವುದಕ್ಕಾಗಿ 10 ಲಕ್ಷ ರೂ. ಪ್ರೋತ್ಸಾಹ ಧನ ಲಭಿಸಿದೆ.

ರಾಜ್ಯದ ಪಂಚಾಯತ್‌ ಸಂಸ್ಥೆಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಶೀಘ್ರತೆಯನ್ನು ತರುವ ಉಪಕ್ರಮವಾಗಿ ‘ನಮ್ಮ ಗ್ರಾಮ ನಮ್ಮ ಯೋಜನೆ’ಯನ್ನು ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ ರಾಜ್ಯದ 100 ಗ್ರಾಮ ಪಂಚಾಯತ್‌ಗಳಿಗೆ ತಲಾ ರೂ. 10 ಲಕ್ಷಗಳ ಪ್ರೋತ್ಸಾಹಧನ ಪುರಸ್ಕಾರವನ್ನು 2017-18ನೇ ಸಾಲಿನ ಬಜೆಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಘೋಷಿಸಿದ್ದರು. ಇದರ ಅನ್ವಯ 2016-17ನೇ ಸಾಲಿಗೆ ದ.ಕ. ಜಿಲ್ಲೆಯಲ್ಲಿ 4 ಗ್ರಾ.ಪಂ.ಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಲಾಗಿದ್ದು, ಪುತ್ತೂರು ತಾಲೂಕಿನಲ್ಲಿ ರಾಮಕುಂಜ ಗ್ರಾ.ಪಂ.ಗೆ 10 ಲಕ್ಷ ರೂ. ಪ್ರೋತ್ಸಾಹಧನ ಪುರಸ್ಕಾರ ಲಭಿಸಿದೆ.

ಅತ್ಯುತ್ತಮ ಅನುಷ್ಠಾನ
ದ.ಕ. ಜಿಲ್ಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಎಕ್ಕಾರು, ಬಂಟ್ವಾಳ ತಾಲೂಕಿನಲ್ಲಿ ಕೋಳ್ನಾಡು, ಸುಳ್ಯ ತಾಲೂಕಿನಲ್ಲಿ ಕನಕಮಜಲು ಗ್ರಾಮ ಪಂಚಾಯತ್‌ ಪ್ರೋತ್ಸಾಹಧನ ಪುರಸ್ಕಾರಕ್ಕೆ ಆಯ್ಕೆಗೊಂಡಿವೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪಂಚಾಯತ್‌ ಅಧ್ಯಕ್ಷ ಪ್ರಶಾಂತ್‌ ಆರ್‌.ಕೆ. ಅವರು, ‘ನಮ್ಮ ಗ್ರಾಮ ನಮ್ಮ ಯೋಜನೆ’ಯನ್ನು ರಾಮಕುಂಜ ಗ್ರಾ.ಪಂ.ನಲ್ಲಿ ಅತ್ಯುತ್ತಮವಾಗಿ ಅನುಷ್ಠಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಡಿ ದೂರದೃಷ್ಟಿತ್ವದ ಯೋಜನೆಯನ್ನು ಸಿದ್ದಪಡಿಸಬೇಕಾಗಿರುತ್ತದೆ. ಪಂಚವಾರ್ಷಿಕ ಯೋಜನೆ ಸಿದ್ದಪಡಿಸಿಕೊಂಡು ಗ್ರಾಮಸಭೆಗಳಲ್ಲಿ ಜನರಿಂದ ಬಂದ ಬೇಡಿಕೆಗಳಿಗೆ ಅನುಗುಣವಾಗಿ ಕ್ರೀಯಾಯೋಜನೆ ಸಿದ್ಧಪಡಿಸಿ ಕಾಮಗಾರಿ ಅನುಷ್ಠಾನ ಮಾಡಲಾಗಿದೆ. ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರಕಾರದಿಂದ ಬರುವ ಅನುದಾನಗಳನ್ನು ಸಮರ್ಪಕವಾಗಿ ವಿನಿಯೋಗಿಸಲಾಗಿದೆ. ಇವೆಲ್ಲವನ್ನೂ ಪರಿಗಣಿಸಿ ಪ್ರೋತ್ಸಾಹಧನ ಪುರಸ್ಕಾರಕ್ಕೆ ರಾಮಕುಂಜ ಗ್ರಾ.ಪಂ. ಅನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾರ್ಗಸೂಚಿ
ಪ್ರಶಸ್ತಿ ಪಡೆದ ಗ್ರಾಮ ಪಂಚಾಯತ್‌ ಗಳು 10 ಲಕ್ಷ ರೂ. ಅನುದಾನವನ್ನು ನಮ್ಮ ಗ್ರಾಮ ನಮ್ಮ ಯೋಜನೆಯಡಿ ಪ್ರತ್ಯೇಕವಾಗಿ ಖಾತೆಯನ್ನು ತೆರೆದು ಆ ಖಾತೆಯ ಮೂಲಕ ವಿನಿಯೋಗಿಸಲು ಸೂಚಿಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಸರಕಾರಿ ಶಾಲೆಗಳ ಆಟದ ಮೈದಾನಗಳಿಗೆ ಫ್ಲಡ್ ಲೈಟ್‌ ಅಳವಡಿಸುವುದು, ಗ್ರಾಮ ಪಂಚಾಯತ್‌ ಸಭೆಗಳ ನಡಾವಳಿಗಳ ನೇರ ಪ್ರಸಾರ ಮಾಡುವ ವ್ಯವಸ್ಥೆ ಕಲ್ಪಿಸುವುದು (ಲೋಕಲ್‌ ಕೇಬಲ್‌ ಟಿ.ವಿ.ಯಲ್ಲಿ ಪ್ರಸಾರ), ಸೋಲಾರ್‌ ಬೀದಿ ದೀಪ ಅಳವಡಿಸುವುದು, ಗ್ರಾಮೀಣ ಗೌರವ ಯೋಜನೆ, ಸಮುದಾಯ ಶೌಚಾಲಯ ಸಂಕೀರ್ಣ ನಿರ್ಮಾಣ, ಕಸ ಸಂಸ್ಕರಣ ಘಟಕ ಸ್ಥಾಪನೆ, ಕಡಿಮೆ ದುಡ್ಡಿನಲ್ಲಿ ಮಾಡಬಹುದಾದ ಚಟುವಟಿಕೆಗಳು, ದಾನಿಗಳಿಂದ ಮಾಡಬಹುದಾದ ಚಟುವಟಿಕೆಗಳು ಹಾಗೂ ಸರಕಾರದ ವಿವಿಧ ಯೋಜನೆಗಳ ಸಂಯೋಜನೆಯೊಂದಿಗೆ ಮಾಡಬಹುದಾದ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವುದು, ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವುದು, ಗ್ರಾಮ ಪಂಚಾಯತ್‌ ಕಚೇರಿಗೆ ಸಿಸಿ ಟಿವಿ ಅಳವಡಿಸುವುದು, ಡಿಜಿಟಲ್‌ ಲೈಬ್ರರಿಗಳ ಸ್ಥಾಪನೆಗೆ ಅನುದಾನ ವಿನಿಯೋಗಿಸಬಹುದಾಗಿದೆ.

ಪ್ರೋತ್ಸಾಹ ಧನಕ್ಕೆ ನಿಗದಿಪಡಿಸಿದ ಮಾರ್ಗಸೂಚಿಗಳನ್ವಯ ಕ್ರಿಯಾಯೋಜನೆ ತಯಾರಿಸಿಕೊಳ್ಳಬೇಕು. ಕ್ರೀಯಾ ಯೋಜನೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದು ನಿಯಮಾನುಸಾರ ವೆಚ್ಚ ಮಾಡಲು ಸೂಚಿಸಲಾಗಿದೆ.

ಕರ್ತವ್ಯ ಇಮ್ಮಡಿಗೊಂಡಿದೆ
ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆ, ಹೊಂದಾಣಿಕೆ ಇದ್ದಲ್ಲಿ ಅಭಿವೃದ್ಧಿ ಕೆಲಸಗಳನ್ನು ವೇಗವಾಗಿ ಅನುಷ್ಠಾನಗೊಳಿಸಲು ಸಾಧ್ಯ. ನಮ್ಮಲ್ಲಿ ಪಂಚಾಯತ್‌ ಸದಸ್ಯರ, ಅಧಿಕಾರಿಗಳ, ಸಿಬಂದಿ ಹಾಗೂ ಗ್ರಾಮಸ್ಥರ ಸಹಕಾರದಿಂದ ಹಲವಾರು ಅಭಿವೃದ್ಧಿ ಕೆಲಸ ನಡೆದಿದೆ. ಸರಕಾರದಿಂದ ಬರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುತ್ತಿದ್ದೇವೆ. 2016-17ರಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದ್ದು, ಅದರಲ್ಲಿ 5 ಲಕ್ಷ ರೂ. ಅನುದಾನ ಬಂದಿದೆ. ಇದೀಗ ನಮ್ಮ ಗ್ರಾಮ ನಮ್ಮ ಯೋಜನೆ ಅತ್ಯುತ್ತಮ ನಿರ್ವಹಣೆಗಾಗಿ ಲಭಿಸಿದ 10 ಲಕ್ಷ ರೂ. ಪ್ರೋತ್ಸಾಹಧನವು ನಮ್ಮ ಕರ್ತವ್ಯವನ್ನು ಇಮ್ಮಡಿಗೊಳಿಸಿದೆ. 
ಪ್ರಶಾಂತ್‌ ಆರ್‌.ಕೆ.
ಅಧ್ಯಕ್ಷರು, ರಾಮಕುಂಜ ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.