BJP: ನನ್ನಂಥವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಋಣಿ: ಕಿಶೋರ್ ಕುಮಾರ್
Team Udayavani, Oct 4, 2024, 1:12 AM IST
ಮಂಗಳೂರು: ಹಣಬಲ, ಜಾತಿ ಬಲ ಇಲ್ಲದ ನನ್ನಂಥವರಿಗೂ ಮಹತ್ವದ ಜವಾಬ್ದಾರಿ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬಡ ಕೃಷಿ ಕುಟುಂಬದಲ್ಲಿ ಹುಟ್ಟಿದ ನನಗೆ ಈ ಅವಕಾಶ ಕೊಟ್ಟಿರುವುದಕ್ಕೆ ಋಣಿ. ನನ್ನಿಂದಾಗಿ ಪಕ್ಷಕ್ಕೆ ಯಾವುದೇ ಕಪ್ಪು ಚುಕ್ಕೆಬಾರದಂತೆ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಹೇಳಿದರು.
ನಾಮಪತ್ರ ಸಲ್ಲಿಕೆಗೆ ಮೊದಲು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲ ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವೆ ಎಂದರು.
ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತ ನಾಡಿ, ಬಿಜೆಪಿಯು ಕಾರ್ಯಕರ್ತರ ಪಕ್ಷ ಎಂಬುದಕ್ಕೆ ಈಗ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಸಾಕ್ಷಿ. ಪಕ್ಷ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಕಿಶೋರ್ ಕುಮಾರ್ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವುದಾಗಿ ಹೇಳಿದರು.
ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಈ ಕ್ಷೇತ್ರದಿಂದ ಗೆದ್ದು ಮೇಲ್ಮನೆಗೆ ಹೋದ ಕೋಟ ಶ್ರೀನಿವಾಸ ಪೂಜಾರಿ ಜನಪ್ರತಿನಿಧಿಯಾಗಿ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳಿಗೆ ವಿಶೇಷ ಕೊಡುಗೆ ನೀಡುವುದರೊಂದಿಗೆ ಪಂಚಾಯತ್‌ರಾಜ್ ವ್ಯವಸ್ಥೆ ಹಾಗೂ ಜನರ ಭಾವನೆಗಳನ್ನು ಸಮರ್ಥವಾಗಿ ಅರ್ಥ ಮಾಡಿಕೊಂಡವರು. ಅವರ ಸ್ಥಾನಕ್ಕೆ ಕಿಶೋರ್ ಕುಮಾರ್ ಒಬ್ಬ ಸಮರ್ಥ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದರು.
ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಅಭ್ಯರ್ಥಿಯ ಗೆಲುವಿಗಾಗಿ ಪ್ರತಿ ಮಂಡಲದ ಪ್ರತಿ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರರನ್ನು ಭೇಟಿಯಾಗಲಿದ್ದೇವೆ. ಪಕ್ಷದ ನಿಗದಿತ ಮತಗಳಿಂದಲೂ ಹೆಚ್ಚು ಮತ ಬರುವಂತೆ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಜೇಶ್ ನಾೖಕ್, ಯಶಪಾಲ್ ಸುವರ್ಣ, ಪ್ರಮೋದ್ ಮಧ್ವರಾಜ್, ಪ್ರತಾಪಸಿಂಹ ನಾಯಕ್, ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ ಮತ್ತಿತರು ಉಪಸ್ಥಿತರಿದ್ದರು.
ಕಿಶೋರ್ ಗೆಲುವು ನಿಶ್ಚಿತ: ನಳಿನ್
ಮಂಗಳೂರು : ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಂತ ಹೆಚ್ಚಿನ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಪಕ್ಷ ಯುವಕರಿಗೆ ಆದ್ಯತೆ ನೀಡಿದ್ದು, ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ, ರಾಷ್ಟ್ರ ಮಟ್ಟದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು ಎಂದಿದ್ದಾರೆ.
ಬಿಜೆಪಿಗೆ ದೊಡ್ಡ ಅಂತರದ ಜಯ: ಕೋಟ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಪ್ರಮಾಣದ ಮತಗಳಿದ್ದು, ಭಾರೀ ಅಂತರದ ಜಯ ನಿಶ್ಚಿತ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ 6,037 ಒಟ್ಟು ಮತದಾರರ ಪೈಕಿ ಬಿಜೆಪಿ ಮತಗಳು 3,500ರಷ್ಟಿವೆ ಎಂದರು.ಸಣ್ಣ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದ ಕಿಶೋರ್ ಕುಮಾರ್ ಅವರಿಗೆ ಸ್ಪರ್ಧಿಸಲು ಪಕ್ಷ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.ಆ ಮೂಲಕ ಬಿಜೆಪಿಯು ಕಾರ್ಯಕರ್ತರ ಪಕ್ಷ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಿದೆ ಎಂದು ಅವರು ಹೇಳಿದರು.
ಪಕ್ಷದ ಎಲ್ಲ ಹಂತದ ನಾಯಕರು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.