ಪಚ್ಚನಾಡಿ-ಮಂದಾರ: ಮುಖ್ಯಕಾರ್ಯದರ್ಶಿ ಭೇಟಿ
ಘನತ್ಯಾಜ್ಯ ನಿರ್ವಹಣೆಗೆ ಪರ್ಯಾಯ ಸ್ಥಳ
Team Udayavani, Jan 30, 2020, 6:08 AM IST
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಮಾಡುವ ಪಚ್ಚನಾಡಿ ಘಟಕದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಸ್ಥಳ ಹುಡುಕುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸೂಚಿಸಿ¨ªಾರೆ.
ಪಚ್ಚನಾಡಿ ತ್ಯಾಜ್ಯ ನಿರ್ವಹಣ ಘಟಕಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಅಧಿಕಾರಿ ಗಳೊಂದಿಗೆ ಸಮಾ ಲೋಚಿಸಿದರು. ಪಚ್ಚನಾಡಿ ಯಲ್ಲಿ ಮುಂದಿನ ದಿನಗಳಲ್ಲಿ ತ್ಯಾಜ್ಯ ನಿರ್ವಹಣೆ ತಾಂತ್ರಿಕವಾಗಿ ಸೂಕ್ತವಲ್ಲ. ಈ ನಿಟ್ಟಿನಲ್ಲಿ ಪರ್ಯಾಯ ಜಾಗ ಪರಿಶೀಲಿಸಬೇಕು ಎಂದರು.
ಕಲ್ಲು ಕೋರೆ ನಡೆಸಿ ಪಾಳು ಬಿದ್ದಿರುವ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸೂಕ್ತವಾಗಿದೆ. ಈ ಬಗ್ಗೆಯೂ ಗಮನಿಸಬೇಕು. ಇಂತಹ ಸ್ಥಳ ದೂರ ಇದ್ದರೂ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಎಂದರು.
ಜನವಸತಿ ಪ್ರದೇಶಕ್ಕೆ ತ್ಯಾಜ್ಯ
ಜಿÇÉಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿ, ಕಳೆದ ಮಳೆಗಾಲದಲ್ಲಿ ಪಚ್ಚನಾಡಿ ತ್ಯಾಜ್ಯ ಘಟಕದಿಂದ 8 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ತ್ಯಾಜ್ಯ ಮಂದಾರದ ಜನವಸತಿ ಪ್ರದೇಶಕ್ಕೆ ನುಗ್ಗಿದೆ.
ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಒದಗಿಸಲಾಗಿದೆ. ಪಚ್ಚನಾಡಿ ತ್ಯಾಜ್ಯ ಘಟಕದ ವಿನ್ಯಾಸವು ವಿಲೇವಾರಿಗೆ ಸೂಕ್ತವಾಗಿಲ್ಲ ಎಂದು ಉನ್ನತ ತಾಂತ್ರಿಕ ತಂಡ ತಿಳಿಸಿದೆ. ಅಲ್ಲದೇ ಘಟಕದಲ್ಲಿರುವ ತ್ಯಾಜ್ಯವನ್ನು ಬಯೋಮೈನಿಂಗ್ ಮೂಲಕ ವಿಲೇವಾರಿಗೆ ಸೂಚಿಸಿದೆ ಎಂದರು.
ವಿಜಯ ಭಾಸ್ಕರ್ ಅವರು ಮಂದಾರ ಪ್ರದೇಶದ ಜನರ ಅಹವಾಲು ಆಲಿಸಿ ಸೂಕ್ತ ಪರಿಹಾರ ಒದಗಿಸುವ ಸಂಬಂಧ ಜಿÇÉಾಡಳಿತದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ನಿರಾಶ್ರಿತರಿಗೆ ತ್ವರಿತವಾಗಿ ಸ್ಪಂದಿಸಬೇಕಾಗಿದೆ ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ| ಸೆಲ್ವಮಣಿ, ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಉಪ ಆಯುಕ್ತೆ ಗಾಯತ್ರಿ ನಾಯಕ್, ಮಾಜಿ ಮೇಯರ್ ಭಾಸ್ಕರ್ ಕೆ. ಉಪಸ್ಥಿತರಿದ್ದರು.
ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ
ತುಂಬೆ ವೆಂಟೆಡ್ ಡ್ಯಾಂನ ನೀರು ಸಂಗ್ರಹ ಮಟ್ಟವನ್ನು ವೀಕ್ಷಿಸಿದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಮುಂದಿನ ಬೇಸಗೆಯಲ್ಲಿ ನಗರದಲ್ಲಿ ಯಾವುದೇ ರೀತಿ ನೀರಿನ ಕೊರತೆಯಾಗದಂತೆ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿದರು.
ಪಚ್ಚನಾಡಿಗೆ 8 ಕೋ.ರೂ.
ಪಚ್ಚನಾಡಿಯಲ್ಲಿ ತ್ಯಾಜ್ಯ ಕುಸಿತ ಉಂಟಾಗಿ ಮಂದಾರ ವ್ಯಾಪ್ತಿಯಲ್ಲಿ ಹರಡಿರುವ ಕಾರಣದಿಂದ ಮುಂದೆ ಕೈಗೊಳ್ಳಬೇಕಾಗಿರುವ “ಘನತ್ಯಾಜ್ಯ ನಿರ್ವಹಣೆ ಸಂಬಂಧಿತ ಕಾರ್ಯಕ್ರಮಗಳಿಗಾಗಿ’ 8 ಕೋ.ರೂ.ಗಳನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.