ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮವಿಭೂಷಣ,ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಇಂದು ಪ್ರದಾನ
Team Udayavani, Nov 8, 2021, 6:50 AM IST
ಮಂಗಳೂರು/ಉಡುಪಿ: ದಿಲ್ಲಿಯಲ್ಲಿ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಹಾಜಬ್ಬ ದಿಲ್ಲಿಗೆ ಪಯಣ
ಹಾಜಬ್ಬ ಅವರು ನ. 7ರಂದು ಮಂಗಳೂರು ವಿಮಾನನಿಲ್ದಾಣದಿಂದ ಬೆಂಗಳೂರಿಗೆ ತೆರಳಿ ಅಲ್ಲಿಂದ ಹೊಸದಿಲ್ಲಿಗೆ ಮಧ್ಯಾಹ್ನ ತಲುಪಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಿಂದ ಸಂಸದ ನಳಿನ್ ಕುಮಾರ್ ಕಟೀಲು ಅವರ ದಿಲ್ಲಿ ಕಚೇರಿಯ ಅಪ್ತಸಹಾಯಕ ಹೊಟೇಲ್ ಅಶೋಕಕ್ಕೆ ಕರೆದುಹೋಗಿದ್ದು ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಹಾಜಬ್ಬರ ಜತೆ ಅವರ ಸಹೋದರನ ಪುತ್ರ ತೆರಳಿದ್ದಾರೆ. ಹಾಜಬ್ಬ ಅವರು ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಸೋಮವಾರವೇ ದಿಲ್ಲಿಯಿಂದ ಹೊರಟು ಬೆಂಗಳೂರು ಮೂಲಕ ಮಂಗಳೂರಿಗೆ ಮಂಗಳವಾರ ಆಗಮಿಸಲಿದ್ದಾರೆ. ಅವರ ಎಲ್ಲ ಖರ್ಚುವೆಚ್ಚಗಳನ್ನು ಕೇಂದ್ರ ಸರಕಾರ ಭರಿಸುತ್ತಿದೆ.
ಹಾಜಬ್ಬ ಅವರು ರವಿವಾರ ವಿಮಾನ ನಿಲ್ದಾಣಕ್ಕೆ ತೆರಳಲು ದ.ಕ. ಜಿಲ್ಲಾಡಳಿತ ವಾಹನ ವ್ಯವಸ್ಥೆ ಮಾಡಿತ್ತು. ಮಂಗಳವಾರ ಬೆಳಗ್ಗೆಯೂ ಜಿಲ್ಲಾಡಳಿತವೇ ವಾಹನ ವ್ಯವಸ್ಥೆ ಮಾಡಲಿದೆ. ಸಮಾರಂಭಕ್ಕೆ ತೆರಳುವ ಮುಂಚಿತವಾಗಿ ಕೋವಿಡ್ ಪರೀಕ್ಷೆ ಅಗತ್ಯವಾಗಿದ್ದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಹಾಜಬ್ಬರ ಮನೆಗೆ ಕಳುಹಿಸಿ ಆರ್‌ಟಿಪಿಸಿಆರ್ ತಪಾಸಣೆ ನಡೆಸಿ ವರದಿ ಶೀಘ್ರ ದೊರಕು ವಂತೆ ವ್ಯವಸ್ಥೆ ಮಾಡಿದ್ದರು.
ಇದನ್ನೂ ಓದಿ:ಮುಸ್ಲಿಮೇತರರಿಗೆ ಕೌಟುಂಬಿಕ ಕಾನೂನು ಸವಲತ್ತು : ಅಬುಧಾಬಿ ಸರ್ಕಾರದಿಂದ ಮಹತ್ವದ ನಿರ್ಧಾರ
ಶ್ರೀ ವಿಶ್ವಪ್ರಸನ್ನತೀರ್ಥರಿಂದ ಪ್ರಶಸ್ತಿ ಸ್ವೀಕಾರ
ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರ ವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರ ಪರವಾಗಿ ಅವರ ಪಟ್ಟಶಿಷ್ಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸ್ವೀಕರಿಸಲಿದ್ದಾರೆ.
ರವಿವಾರ ಉಡುಪಿ ಶ್ರೀಕೃಷ್ಣ ಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದ ಶ್ರೀಪಾದರು, ಸಂಜೆ ಗೋಶಾಲೆಯಲ್ಲಿ ಪೂಜೆ ಮುಗಿಸಿ ರಾತ್ರಿ ಬೆಂಗಳೂರಿಗೆ ತೆರಳಿದರು. ಸೋಮವಾರ ಬೆಳಗ್ಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಪಟ್ಟದ ದೇವರ ಪೂಜೆ ಮುಗಿಸಿ ದಿಲ್ಲಿಗೆ ತೆರಳುವರು. ಅವರೊಂದಿಗೆ ಮಠದ ದಿವಾನರಾದ ರಘುರಾಮ ಆಚಾರ್ಯರು ತೆರಳುವರು. ಸೋಮವಾರ ರಾತ್ರಿ ದಿಲ್ಲಿ ವಸಂತಕುಂಜ್‌ನಲ್ಲಿರುವ ಪೇಜಾವರ ಮಠ ದಲ್ಲಿದ್ದು ಮಂಗಳವಾರ ಬೆಳಗ್ಗೆ ವಿದ್ಯಾಪೀಠಕ್ಕೆ ಆಗಮಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.