Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು
Team Udayavani, Nov 25, 2024, 3:38 AM IST
ಮೂಡುಬಿದಿರೆ: ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಶ್ಯಾಮಲಾ ಭಟ್ (61) ಮತ್ತು ಅವರ ಪುತ್ರಿ ಕಣ್ಮಣಿ ರಾವ್ (36) ಅವರಿಗೆ ದ.ಕ. ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32), ತನ್ನ ಪತ್ನಿ ಪ್ರಿಯಾಂಕಾ (28) ಮತ್ತು ನಾಲ್ಕು ವರ್ಷದ ಮಗು ಹೃದಯ್ನನ್ನು ಕೊಲೆ ಮಾಡಿ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ನ. 9ರಂದು ಬೆಳಕಿಗೆ ಬಂದಿತ್ತು.
ಘಟನೆಗೆ ತನ್ನ ತಾಯಿ ಮತ್ತು ಸಹೋದರಿಯ ಕಿರುಕುಳವೇ ಕಾರಣವೆಂದು ಕಾರ್ತಿಕ್ ತನ್ನ ಡೆತ್ನೋಟ್ನಲ್ಲಿ ಉಲ್ಲೇಖೀಸಿದ್ದ. ಈ ಬಗ್ಗೆ ಮೂಲ್ಕಿ ಪೊಲೀಸರು ಕಾರ್ತಿಕ್ ಭಟ್ ಅವರ ಪತ್ನಿ ಪ್ರಿಯಾಂಕಾಳ ತಾಯಿ ನೀಡಿದ ದೂರಿನ ಆಧಾರದಲ್ಲಿ ತಾಯಿ ಶ್ಯಾಮಲಾ ಭಟ್ ಮತ್ತು ಕಣ್ಮಣಿಯನ್ನು ಬಂಧಿಸಿ ಮೂಡುಬಿದಿರೆ ಕೋರ್ಟಿಗೆ ಹಾಜರುಪಡಿಸಿದ್ದರು.
ಆರೋಪಿಗಳ ಪರ ಮೂಡುಬಿದಿರೆಯ ಶರತ್ ಶೆಟ್ಟಿ ಅವರು ಜಿಲ್ಲಾ ಸೆಶನ್ಸ್ ಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.