ಪಾಣಾಜೆ: ಅಟ್ಟ ಏರಿದ್ದ‌ ಬಡಗಿ “ಆಘಾತ ‘ದಿಂದ ಸಾವು


Team Udayavani, Dec 15, 2017, 10:58 AM IST

15-9.jpg

ಪುತ್ತೂರು: ಪರಿಚಿತರೊಬ್ಬರ ಮನೆಯ ಅಟ್ಟಕ್ಕೆ ಹತ್ತಿದ್ದ ಬಡಗಿಯೊಬ್ಬರು ಆಘಾತಕ್ಕೆ ಒಳಗಾಗಿ ಹೃದಯಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಕೀಲಂಪಾಡಿಯಲ್ಲಿ ಬುಧವಾರ ಸಂಭವಿಸಿದೆ.

ಕಾಟುಕುಕ್ಕೆ ಒಡ್ಯ ನಿವಾಸಿ ಪ್ರಭಾಕರ ಆಚಾರ್ಯ (48) ಮೃತ ವ್ಯಕ್ತಿ. ಅವರು ಎಂಟು ವರ್ಷಗಳಿಂದ ಪರಿಚಿತರಾಗಿರುವ ಅವ್ವಮ್ಮ ಅವರ ಮನೆಯ ಅಟ್ಟದಲ್ಲಿದ್ದ ರಟ್ಟಿನ ಪೆಟ್ಟಿಗೆ ತೆಗೆಯಲೆಂದು ಹತ್ತಿದ್ದವರು ಅಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದರು. ಬುಧವಾರ ತಡ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಘಾತದಿಂದ ಸಾವು ಸಂಭವಿಸಿರುವುದಾಗಿ ವರದಿ ಯಲ್ಲಿ ಉಲ್ಲೇಖೀಸಲಾಗಿದೆ.

ಘಟನೆ ವಿವರ
ಬಡಗಿ ಪ್ರಭಾಕರ ಆಚಾರ್ಯ ಅವರು ಬೊಳ್ಳಿಂಬಲದ ಮನೆಯೊಂದರ ಕೊಟ್ಟಿಗೆ ಛಾವಣಿಗೆ ಸಂಬಂಧಿಸಿ ಮಂಗಳವಾರದಿಂದ ಕೆಲಸಕ್ಕೆ ಬಂದಿದ್ದರು. ಬುಧವಾರ ಸಂಜೆ 5 ಗಂಟೆಗೆ ಕೆಲಸ ಮುಗಿಸಿ ತೆರಳಿದ್ದ ಇವರು, ಅಲ್ಲಿಂದ ನಾಲ್ಕು ಕಿ.ಮೀ. ದೂರದಲ್ಲಿರುವ ತನ್ನ ಪರಿಚಿತ ಮನೆಯಾದ ಅವ್ವಮ್ಮ ಅವರ ಮನೆಗೆ ತೆರಳಿದ್ದರು. ಘಟನೆ ನಡೆದ ಮನೆ ನಿವಾಸಿಗಳು ಹೇಳುವ ಪ್ರಕಾರ, ಪ್ರಭಾಕರ ಆಚಾರ್ಯ ಅವರು ಈಟಿನ ಕೋಲು ಬೇಕೆಂದು ಕೇಳಿದ್ದು, ಅದಕ್ಕಾಗಿ ಮನೆಗೆ ಬಂದಿದ್ದರು. ಆ ವೇಳೆ ಅಟ್ಟದಲ್ಲಿದ್ದ ರಟ್ಟಿನ ಪೆಟ್ಟಿಗೆ ತೆಗೆದುಕೊಡುವಂತೆ ಅವ್ವಮ್ಮ ಅವರ ಪುತ್ರಿ ಹೇಳಿದ ಮೇರೆಗೆ ಪ್ರಭಾಕರ ಆಚಾರ್ಯ ಅಟ್ಟ ಹತ್ತಿದ್ದಾರೆ. ಅಲ್ಲಿಂದ ರಟ್ಟಿನ ಪೆಟ್ಟಿಗೆ ತೆಗೆದು ಸುಮಾರು ಹೊತ್ತು ಕಳೆದರೂ ಕೆಳಗೆ ಬಾರದೇ ಇರುವುದನ್ನು ಕಂಡು ಅವ್ವಮ್ಮ ಮತ್ತು ಮಗಳು ಅಟ್ಟ ಹತ್ತಿ ನೋಡಿದ್ದಾರೆ. ಆಗ ಮೃತಪಟ್ಟ ಸ್ಥಿತಿಯಲ್ಲಿ ಇರುವುದನ್ನು ಕಂಡು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕೊಲೆ ವದಂತಿ: ಉದ್ವಿಗ್ನ ಸ್ಥಿತಿ
ಘಟನೆ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆ ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಿಂದೂ ಬಡಗಿಯ ಕೊಲೆ ಎಂಬಂರ್ಥದಲ್ಲಿ ವದಂತಿಗಳು ಹಬ್ಬಿ ಕೆಲ ಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಅವ್ವಮ್ಮ ಅವರ ಮನೆ ಬಳಿ ನೂರಾರು ಜನರು ಜಮಾಯಿಸಿದ್ದು, ಅನಂತರ ಹೃದಯಾ ಘಾತದಿಂದ ಸಾವು ಎಂಬ ವಿಚಾರ ಹಬ್ಬಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಗಿತ್ತು. 

ಎಸ್ಪಿ ಆಗಮನ
ಘಟನಾ ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ  ಸುಧೀರ್‌  ಕುಮಾರ್‌ ರೆಡ್ಡಿ ಆಗಮಿಸಿದ್ದರು. ಮರಣದ ಬಗ್ಗೆ ಸಂಶಯ ಹೊಂದಿದ್ದರೆ ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಹಾಜರಿರುವಂತೆ ಸೂಚನೆ ನೀಡಿದ್ದರು. ಮೃತರು ಮರದ ಕೆಲಸ ಮಾಡುತ್ತಿದ್ದ ಮನೆಗೂ ಭೇಟಿ ನೀಡಿ, ಕೆಲಸ ನಿರ್ವಹಿಸಿದ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಸಹಾಯಕ ಆಯುಕ್ತ ರಘುನಂದನ್‌ ಮೂರ್ತಿ, ಡಿವೈಎಸ್‌ಪಿ ಶ್ರೀನಿವಾಸ್‌, ವೃತ್ತ ನಿರೀಕ್ಷಕ ಗೋಪಾಲ ನಾಯ್ಕ, ಗ್ರಾಮಾಂತರ ಪೊಲೀಸ್‌ ಠಾಣಾ ಎಸ್‌.ಐ. ಅಬ್ದುಲ್‌ ಖಾದರ್‌, ನಗರ ಠಾಣಾ ಎಸ್‌ಐ ಮಹೇಶ್‌ ಪ್ರಸಾದ್‌, ಎಸ್‌.ಐ. ಒಮನಾ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣೆಯಲ್ಲಿ ತರಚು  ಗಾಯ!
ಪ್ರಭಾಕರ ಆಚಾರ್ಯ ಅವರ ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ  ಮಂಗಳೂರು ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಮರಣೋತ್ತರ ಪರೀಕ್ಷೆಯ ವರ ದಿಯಲ್ಲಿ ಆಘಾತದಿಂದ ಹೃದ ಯಾಘಾತಕ್ಕೊಳ ಗಾಗಿ  ಸಾವು ಸಂಭವಿಸಿದೆ ಎಂದು ತಿಳಿಸಲಾಗಿದೆ. ಮೃತರ ಹಣೆಯಲ್ಲಿ ತರಚು ಗಾಯಗಳು ಕಂಡುಬಂದಿದ್ದು,  ಅದು ಕೆಲಸದ ಸಂದರ್ಭದಲ್ಲಿ ಆಗಿರಬಹುದು ಎಂದು ಊಹಿಸಲಾಗಿದೆ. ದೇಹದ ಇತರ ಭಾಗದಲ್ಲಿ ಯಾವುದೇ ಗಾಯಗಳು ಕಂಡು ಬಂದಿಲ್ಲ ಎಂದು ಗ್ರಾಮಾಂತರ ಪೊಲೀಸರು ಮಾಹಿತಿ ನೀಡಿ ದ್ದಾರೆ. ತಹಶೀಲ್ದಾರ್‌ ಉಪಸ್ಥಿತಿಯಲ್ಲಿ ಮೃತ ದೇಹವನ್ನು ಸಂಬಂಧಿಕರಿಗೆ ನೀಡಲಾಗಿದೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.