“ಬೀಚ್‌ ಸ್ವಚ್ಛತೆಯೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ’

ಸ್ವಚ್ಛ ಸುಂದರ ಬೀಚ್‌ - ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

Team Udayavani, Jan 1, 2023, 10:59 PM IST

“ಬೀಚ್‌ ಸ್ವಚ್ಛತೆಯೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ’

ಪಣಂಬೂರು: ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ ಈ ನಿಟ್ಟಿನಲ್ಲಿ ಬೀಚ್‌ಗಳ ಸ್ವತ್ಛತೆ ಹಾಗೂ ಸೂಕ್ತ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಎಂ.ಆರ್‌.ರವಿಕುಮಾರ್‌ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗ ಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಶಕ್ತಿ ನಗರದ ಶಕ್ತಿ ಶಿಕ್ಷಣ ಸಮೂಹ ಸಂಸ್ಥೆಗಳ ಪಣಂಬೂರು ಬೀಚ್‌ನಲ್ಲಿ ಸ್ವತ್ಛ ಸುಂದರ ಬೀಚ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವತ್ಛತಾ ಕಾರ್ಮಿಕರ ಪಾತ್ರ ಹಿರಿದಾಗಿದೆ. ಈ ನಿಟ್ಟಿನಲ್ಲಿ ಅವರಿಗೆ ಉತ್ತಮ ಆರೋಗ್ಯ ನೀಡುವ ಸಲುವಾಗಿ ವೈದ್ಯಕೀಯ ತಪಾಸಣೆ ವ್ಯವಸ್ಥೆ ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕ್ರೆಡೆ„ ಮಂಗ ಳೂರು ಅಧ್ಯಕ್ಷ ಪುಷ್ಪರಾಜ್‌ ಜೈನ್‌, ಪ್ರಧಾನ ಕಾರ್ಯದರ್ಶಿ ಪ್ರಶಾಂತ್‌ ಸನಿಲ್‌, ಕೆಐಒಸಿಎಲ್‌ ಅಧಿಕಾರಿ ಮುರುಗೇಶ್‌, ಪಣಂಬೂರು ಬೀಚ್‌ ಟೂರಿಸಂ ಇದರ ಪಾಲುದಾರ ಲಕ್ಷ್ಮೀಶ ಭಂಡಾರಿ, ಡಾ|ರಾಜೇಶ್‌ ಹುಕ್ಕೇರಿ, ಶಕ್ತಿ ಶಿಕ್ಷಣ ಸಮೂಹ ಸಂಸ್ಥೆ ಗಳ ಆಡಳಿತಾಧಿಕಾರಿ ರಮೇಶ್‌, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್‌ ಬಿ.ಎನ್‌., ಉಪಾಧ್ಯಕ್ಷ ಭಾಸ್ಕರ್‌ ರೈ ಕಟ್ಟ,ಕಾರ್ಯ ಕಾರಿ ಸಮಿತಿ ಸದಸ್ಯರಾದ ರಾಜೇಶ್‌ ದಡ್ಡಂಗಡಿ, ಆರೀಫ್‌ ಪಡುಬಿದ್ರಿ, ಸುಖ್‌ ಪಾಲ್‌ ಪೊಳಲಿ, ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್‌ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಇನ್ನರ್‌ ವೀಲ್‌ ಮಂಗಳೂರು ನಾರ್ತ್‌ನ ಅಧ್ಯಕ್ಷೆ ವಸಂತಿ ಕಾಮತ್‌, ಕಾರ್ಯದರ್ಶಿ ಗೀತಾ ರೈ, ಶಕ್ತಿ ಶಾಲೆಯ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಕ್ರಮದ ಎಚ್ಚರಿಕೆ
ಆಹಾರ ಮಳಿಗೆ ಮಾಲಕರು, ನೌಕರ ರಿಗೆ ಜಿಲ್ಲಾಧಿಕಾರಿ ಸ್ವಚ್ಚತೆಯ ಕ್ಲಾಸ್‌ ತೆಗೆದು ಕೊಂಡರು. ಮಳಿಗೆ ಬಳಿಗೆ ತೆರಳಿ ಗ್ರಾಹಕರು ಆಹಾರ ತಿಂದು ಅಲಲ್ಲಿ ಪೊಟ್ಟಣ ಬಿಸಾಡಿದರೆ ಏನು ಮಾಡುವಿರಿ, ನಿಮ್ಮ ತರಕಾರಿ ತ್ಯಾಜ್ಯ ಎಲ್ಲಿ ಬಿಸಾಡುವಿರಿ ಎಂದು ಪ್ರಶ್ನಿಸಿದರಲ್ಲದೆ, ಪ್ರವಾಸಿಗರಿಗೆ ಶುಚಿತ್ವ ಅರಿವು ಮೂಡಿಸುವ ಕೆಲಸ ನಿಮ್ಮಿಂದಾಗಬೇಕೆಂದರು. ಮಳಿಗೆ ಸುತ್ತಮುತ್ತ ಶುಚಿತ್ವ ಕಾಪಾಡುವ ಹೊಣೆಗಾರಿಕೆ ವಹಿಸದೆ ವ್ಯವಸ್ಥೆಯಿಲ್ಲ, ಮಾಡಿಕೊಟ್ಟಿಲ್ಲ ಎಂದು ದೂರಿದ ಅಂಗಡಿ ಮಾಲಕರಿಗೊಬ್ಬರಿಗೆ ಕ್ಲಾಸ್‌ ತೆಗೆದುಕೊಂಡರಲ್ಲದೆ ನೀವಾಗಿ ಜವಾಬ್ದಾರಿ ಮೆರೆಯಬೇಕೆಂದು ಸಲಹೆ ನೀಡಿದರು. ಸರಿಯಾಗಿ ಶುಚಿತ್ವ ಕಾಪಾಡಿ ಕೊಳ್ಳದಿದ್ದರೆ ಮಾಲಿನ್ಯ ನಿಯಂತ್ರಣ ವಿಭಾಗದ ಅಧಿಕಾರಿಗಳು ಕ್ರಮ ತೆಗೆದು ಕೊಳ್ಳಬೇಕಾಗುತ್ತದೆ ಇದಕ್ಕೆ ಆಸ್ಪದ ಕೊಡಬೇಡಿ ಎಂದು ಎಚ್ಚರಿಸಿದರು.

ಸಾಂಸ್ಕೃತಿಕ ಪರಂಪರೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶ ಹಾಗೂ ನದಿ,ಕಡಲ ತೀರವನ್ನು ಹೊಂದಿದೆ. ತುಳುನಾಡಿನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಜಿಲ್ಲೆಯ ಬೀಚ್‌ಗಳು ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದುದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಹೂಡಿಕೆಗೆ ಸರಕಾರ ಅವಕಾಶ ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿ ಬೀಚ್‌ ಗಳ ಸತ್ಛತೆಗಾಗಿ ಸಾಮೂಹಿಕ ಸಹಭಾಗಿತ್ವದಲ್ಲಿ ಸಂಘವು ತೊಡಗಿಸಿ ಕೊಂಡಿರುವುದು ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.