ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಜನಪರ ಯೋಜನೆಗೆ ಸಂದ ಜಯ: ಬಿಜೆಪಿ
Team Udayavani, Mar 17, 2017, 2:38 PM IST
ಬೆಳ್ತಂಗಡಿ : ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ಕ್ರಾಂತಿಕಾರಿ ಯೋಜನೆಗಳು ಮತ್ತು ಜನಪರ ಯೋಜನೆಗಳಿಗೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಗೆ ಸಂದ ಜಯವಾಗಿದೆ. ಕಾಂಗ್ರೆಸ್ ಹಾಗೂ ಇತರೆಲ್ಲ ಪಕ್ಷಗಳ ಅಪಪ್ರಚಾರದ ಮಧ್ಯೆಯೂ ಪ್ರಧಾನ ಮಂತ್ರಿಯವರ ಸಬ್ ಕೆ ಸಾಥ್ – ಸಬ್ ಕೆ ವಿಕಾಸ್ ಘೋಷಣೆಯಡಿ ಎಲ್ಲ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ.
ವಿಶೇಷವಾಗಿ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾಕರು, ಬಿಜೆಪಿಯನ್ನು ಬೆಂಬಲಿಸಿದ್ದು, ಕಾಂಗ್ರೆಸ್ ಹಾಗೂ ಇತರೆಲ್ಲ ಪಕ್ಷಗಳ ನಿಜಬಣ್ಣ ಬಯಲಾಗಿದೆ. ಕಾಂಗ್ರೆಸ್ ಮುಕ್ತ ಭಾರತದ ಗುರಿಯೆಡೆಗೆ, ಇಡೀ ರಾಷ್ಟ್ರದ ಜನತೆ ಜಾಗೃತಿಯಾಗಿರುವುದಕ್ಕೆ ಈ ಫಲಿತಾಂಶ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ್ ಬಿ.ಎಸ್., ಪ್ರಭಾಕರ ಶೆಟ್ಟಿ ಉಪ್ಪಡ್ಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶಾರದಾ ರೈ, ಜಿಲ್ಲಾ ಕಾರ್ಯದರ್ಶಿ ಕೊರಗಪ್ಪ ನಾಯ್ಕ, ತಾ. ಪಂ. ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Punjalkatte: ಗುಂಡಿಗಳು ಸಾರ್ ಗುಂಡಿಗಳು
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.