ಪಾರ್ಟ್ಟೈಂ ಉದ್ಯೋಗ ನೆಪ: 5.43 ಲಕ್ಷ ರೂ. ವಂಚನೆ
Team Udayavani, Jul 11, 2023, 7:05 AM IST
ಮಂಗಳೂರು: ಟೆಲಿಗ್ರಾಂ ಖಾತೆಯಿಂದ ಲಿಂಕ್ ಕಳುಹಿಸಿ ಪಾರ್ಟ್ ಟೈಂ ಉದ್ಯೋಗ ನೀಡುವುದಾಗಿ 5.43 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ.29ರಂದು ದೂರುದಾರರಿಗೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿ ಅನಂತರ ಟಾಸ್ಕ್ಗಳನ್ನು ನೀಡಿದ್ದಾನೆ. ಟಾಸ್ಕ್ಗಳನ್ನು ಪೂರ್ಣಗೊಳಿಸಿದರೆ ಹಣ ನೀಡುವುದಾಗಿ ನಂಬಿಸಿದ್ದಾನೆ. ಮೊದಲ ಟಾಸ್ಕ್ಗೆ ಹಣ ಹೂಡಿಕೆ ಮಾಡಿಸಿ ಅನಂತರ 1,237 ರೂ.ಗಳನ್ನು ದೂರುದಾರರ ಖಾತೆಗೆ ವರ್ಗಾಯಿಸಿದ್ದಾನೆ. ಇದನ್ನು ನಂಬಿದ ದೂರುದಾರರು ಇನ್ನಷ್ಟು ಲಾಭ ಗಳಿಸುವ ಉದ್ದೇಶದಿಂದ ಮುಂದಿನ ಟಾಸ್ಕ್ಗಳನ್ನು ಮಾಡಿದ್ದಾರೆ. ಅಪರಿಚಿತ ವ್ಯಕ್ತಿ ದೂರುದಾರರ ಖಾತೆಯಿಂದ ಜು. 4ರಿಂದ ಜು. 8ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 5,43,151 ರೂ.ಗಳನ್ನು ಹಣ ವರ್ಗಾಯಿಸಿಕೊಂಡು ಯಾವುದೇ ಹಣ ವಾಪಸ್ ನೀಡದೆ ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.