ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ದೊಡ್ಡ ಜಯ

Team Udayavani, Sep 17, 2017, 10:10 AM IST

kreede.jpg

ಮಂಗಳೂರು: ಕ್ರೀಡೆಯಲ್ಲಿ ಯಾವುದೇ ಸಂದರ್ಭದಲ್ಲಿ ಕ್ರೀಡಾಸ್ಫೂರ್ತಿಯನ್ನು ಮರೆಯಬಾರದು. ಇಲ್ಲಿ ಸೋಲು-ಗೆಲುವಿಗಿಂತಲೂ ಭಾಗವಹಿಸುವಿಕೆಯೇ ದೊಡ್ಡ ಜಯವಾಗಿದೆ ಎಂದು ಶಾಸಕ ಜೆ.ಆರ್‌.ಲೋಬೊ ಹೇಳಿದರು. 
ಅವರು ಶನಿವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2017-18ನ್ನು ಉದ್ಘಾಟಿಸಿದರು. 

ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಮೊದಿನ್‌ ಬಾವಾ ಮಾತನಾಡಿ, ಕ್ರೀಡೆಯು ಜಾತಿ-ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ಮಾಡುವ ಜತೆಗೆ ನಮ್ಮ ವ್ಯಕ್ತಿತ್ವ ನಿರ್ಮಾಣ ಮಾಡುವ ಕಾರ್ಯವನ್ನು ಮಾಡುತ್ತದೆ. ಜತೆಗೆ ನಮ್ಮ ಜಿಲ್ಲೆಯ ಶಾಂತಿ, ಸುವ್ಯವಸ್ಥೆಗೆ ಕ್ರೀಡೆ ಮಹತ್ತರ ಪಾತ್ರ ವಹಿಸುತ್ತದೆ ಎಂದರು. 

ದ.ಕ.ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆ ವಹಿಸಿದ್ದರು. ಮೇಯರ್‌ ಕವಿತಾ ಸನಿಲ್‌ ಅವರು ಕ್ರೀಡಾಜ್ಯೋತಿ ಬೆಳಗಿದರು. ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ಕ್ರೀಡಾಪಟು ಅಕ್ಷಯ್‌ ಚೌಹಾಣ್‌ ಅವರು ಕ್ರೀಡಾ ಪ್ರತಿಜ್ಞೆ ಬೋಧಿಸಿದರು. 

ವೇದಿಕೆಯಲ್ಲಿ ಕಾರ್ಪೊರೇಟರ್‌ ಜಯಂತಿ ಆಚಾರ್‌, ಇಂಟಕ್‌ ಜಿಲ್ಲಾಧ್ಯಕ್ಷ ಮನೋಹರ್‌ ಶೆಟ್ಟಿ, ಅಮೆಚೂರ್‌ ದ.ಕ. ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಮಹಮ್ಮದ್‌ ಝುಲ್ಫಿಕರ್‌ ಅಲಿ, ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು, ತಾಲೂಕು ಅಧ್ಯಕ್ಷ ಟಿ. ಗಿರೀಶ್‌ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಖಾದರ್‌ ಷಾ, ಯುವ ಸಬಲೀಕರಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕ ರೋಶನ್‌ ಕುಮಾರ್‌ ಶೆಟ್ಟಿ, ಭೋಜರಾಜ್‌, ಕೆ.ಎಚ್‌.ನಾಯಕ್‌, ಪ್ರೇಮ ನಾಥ್‌ ಶೆಟ್ಟಿ, ದಿನೇಶ್‌ ಕುಂದರ್‌ ಉಪಸ್ಥಿತರಿದ್ದರು. 

ದ.ಕ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್‌ ಡಿಸೋಜಾ ಸ್ವಾಗತಿಸಿದರು. ಕ್ರೀಡಾಕೂಟದಲ್ಲಿ ದ.ಕ, ಉಡುಪಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಮೈಸೂರು ಜಿಲ್ಲೆಗಳನ್ನೊಳಗೊಂಡ 800 ಮಂದಿ ಕ್ರೀಡಾಳುಗಳು ಭಾಗವಹಿಸಿದ್ದರು. ಪಂದ್ಯಾಟಗಳು ಮಂಗಳಾ ಕ್ರೀಡಾಂಗಣ ಹಾಗೂ ಮೂಡಬಿದಿರೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸೆ. 17ರಂದು ಕೂಡ ಮುಂದುವರಿಯಲಿದೆ.

ಟಾಪ್ ನ್ಯೂಸ್

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Mangaluru; ಸದ್ಯ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆ ಇಲ್ಲ

UTK

Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್‌

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

BUS driver

Mangaluru; ಸದ್ಯ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆ ಇಲ್ಲ

court

Kasaragod:ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ

UTK

Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.