ಕುಳಾಯಿ ಶೋರ್ ಬೀಚ್ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ಪೊಲೀಸರ ದಾಳಿ : ಪ್ರಕರಣ ದಾಖಲು
Team Udayavani, May 4, 2021, 9:08 PM IST
ಮಂಗಳೂರು : ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ರೆಸಾರ್ಟ್ ಪಾರ್ಟಿ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.
ಕೋವಿಡ್ ಕಟ್ಟುನಿಟ್ಟಿನ ನಿಯಮವನ್ನು ಲೆಕ್ಕಿಸದೆ ಕುಳಾಯಿ ಬೀಚ್ ನ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ನಡೆಸುತ್ತಿದ್ದ ಮಾಹಿತಿ ಪಡೆದ ಎಸಿ ಮದನ್ ಮೋಹನ್,ಎಸಿಪಿ ಅವರ ಜಂಟಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಸಂಬಂಧ ಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶೋರ್ ರೆಸಾರ್ಟ್ ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗಿತ್ತು. ಇದು ಮಾತ್ರವಲ್ಲದೆ ಡಿಜೆ, ಮದ್ಯಪಾನ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಎಸಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ಧಾಳಿ ನಡೆಸಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಹಾಗೂ ರೆಸಾರ್ಟ್ ಮಾಲೀಕರ ವಿರುದ್ಧ ಕೇಸು ದಾಖಲಿಸಲು ಸುರತ್ಕಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸುರತ್ಕಲ್ ಪೋಲೀಸರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.