Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Team Udayavani, Nov 26, 2024, 1:43 PM IST
ವಿಟ್ಲ: ಆಟೋ ರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘದ ವತಿಯಿಂದ ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ನ.26ರ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಹಾಕಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಬಳಿಕ ಸ್ಥಳಕ್ಕಾಗಮಿಸಿದ ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿಭಟನಾಕಾರರು ತಮ್ಮ ಅಳಲನ್ನು ತೋಡಿಕೊಂಡು ಕೂಡಲೇ ರಸ್ತೆ ಹೊಂಡವನ್ನು ಮುಚ್ಚುವಂತೆ ವಿನಂತಿಸಿದರು.
ಈ ವೇಳೆ ಅಧಿಕಾರಿ ಮಾತನಾಡಿ, ಕೆಲಸದ ಬಗೆಗಿನ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿ ಕೊಡಲಾಗಿದೆ. ಕೆಲವೇ ದಿನಗಳಲ್ಲಿ ಈ ಭಾಗದ ಡಾಮರೀಕರಣ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.
ಈ ವೇಳೆ ಮತ್ತಷ್ಟು ಕೆರಳಿದ ಪ್ರತಿಭಟನಾಕಾರರು 3 ದಿನದೊಳಗೆ ರಸ್ತೆ ಹೊಂಡವನ್ನು ಮುಚ್ಚದಿದ್ದಲ್ಲಿ ವಿಟ್ಲ ನಾಲ್ಕು ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದರು.
ಬಳಿಕ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದ ಅಧಿಕಾರಿಗಳು ಕೂಡಲೇ ಹೊಂಡ ಮುಚ್ಚುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ರಸ್ತೆ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಸುಮಾರು ಅರ್ಧ ಗಂಟೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೋಟು, ಬಸ್ ಮಾಲಕ ಅರುಣ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್ ವಿಟ್ಲ, ಲಾರಿ ಮಾಲಕ ಚಾಲಕ ಸಂಘದ ಅಧ್ಯಕ್ಷ ರಮೇಶ್ ವರಪ್ಪಾದೆ, ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ವಸಂತ ಎನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯಕುಮಾರ್ ಆಲಂಗಾರು, ಪ್ರಮುಖರಾದ ಕೃಷ್ಣಯ್ಯ ಕೆ.ವಿಟ್ಲ, ಬಿಜೆಪಿ ಪಕ್ಷದ ಪ್ರಮುಖರಾದ ಮೋಹನದಾಸ್ ಉಕ್ಕುಡ, ನರಸಪ್ಪ ಪೂಜಾರಿ, ಸದಾನಂದ ಗೌಡ ಸೇರಾಜೆ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಹರೀಶ್, ಜಯಂತ್, ವಸಂತ, ರಿಕ್ಷ ಮಾಲಕರಾದ ವೆಂಕಪ್ಪ ನಾಯ್ಕ್, ಭಾಸ್ಕರ, ಲಾರಿ ಮಾಲಕರಾದ ಜಯಪ್ರಕಾಶ್, ಹರೀಶ್ ಉಮಾಮಹೇಶ್ವರ, ನಾಗೇಶ್ ಬಸವನಗುಡಿ ಸೇರಿದಂತೆ ನೂರಾರು ನಾಗರಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.