ಕೇರಳದ ರೋಗಿಗಳಿಗೆ ದ.ಕ. ಆಸ್ಪತ್ರೆಗಳಲ್ಲಿ ಅವಕಾಶವಿಲ್ಲ
8 ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ
Team Udayavani, Apr 3, 2020, 11:44 AM IST
ಮಂಗಳೂರು: ಕೋವಿಡ್- 19 ಖಚಿತ ಪ್ರಕರಣಗಳು ಕೇರಳ ರಾಜ್ಯ/ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ವಾಗುತ್ತಿರುವ ಹಿನ್ನೆಲೆಯಲ್ಲಿ ತತ್‌ಕ್ಷಣ ದಿಂದಲೇ ಕೇರಳ ರಾಜ್ಯದಿಂದ ಬರುವ ಯಾವುದೇ ರೋಗಿಗಳನ್ನು ದಾಖಲು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದ.ಕ. ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳ ಡೀನ್ ಮತ್ತು ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.
ಇನ್ನೊಂದೆಡೆ ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಹೊರ ರಾಜ್ಯಗಳ ಶಂಕಿತ ಕೋವಿಡ್- 19 ರೋಗಿಗಳನ್ನು ಅಥವಾ ಇತರ ಯಾವುದೇ ಸಾಂಕ್ರಾಮಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಚಿಕಿತ್ಸೆಗಾಗಿ ವಾಹನಗಳ ಮೂಲಕ ಕರೆತರುವುದನ್ನು ನಿಷೇಧಿಸಿ /ಮಹಾನಗರ ಪಾಲಿಕೆಯ ಆಯುಕ್ತರಾದ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಆದೇಶ ಹೊರಡಿಸಿದ್ದಾರೆ.
ನೆರೆಯ ಕೇರಳದಲ್ಲಿ ಕೋವಿಡ್- 19 ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ಗಳ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು ಎಂಬ ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೌರಾಡಳಿತ ಕಾಯ್ದೆ 1976ರ ಸೆಕ್ಷನ್ 64ರ ಅಡಿಯಲ್ಲಿ ದತ್ತವಾದ ಅಧಿಕಾರದನ್ವಯ ಈ ಆದೇಶ ಹೊರಡಿಸಲಾಗಿದೆ ಎಂದವರು ತಿಳಿಸಿದ್ದಾರೆ.
52 ಫ್ಲೆ$çಯಿಂಗ್ ಸ್ಕ್ವಾಡ್ ರಚನೆ
ಜಿಲ್ಲಾದ್ಯಂತ ಸೆಕ್ಷನ್ 144ನ್ನು ಮುಂದು ವರಿಸಲಾಗಿದೆ. ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲೆಗೆ 52 ಫ್ಲೆ$çಯಿಂಗ್ ಸ್ಕ್ವಾಡ್‌ಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದಾರೆ.
ಆರೋಗ್ಯ ಮಾಹಿತಿ ನೀಡದ ಜಿಲ್ಲಾಡಳಿತ
ಕೋವಿಡ್- 19 ದೃಢಪಟ್ಟು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಡಳಿತದಿಂದ ಬಿಡುಗಡೆಗೊಳ್ಳುವ ಹೆಲ್ತ್ ಬುಲೆಟಿನ್‌ನಲ್ಲಿ ಒಂದು ಬಾರಿಯಷ್ಟೇ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಈ ನಡುವೆ, ಕೋವಿಡ್- 19 ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ತಿಂಗಳ ಶಿಶುವಿನ ಆರೋಗ್ಯ ಸುಧಾರಿಸುತ್ತಿರುವುದಾಗಿ ಮಗುವಿನ ಸಂಬಂಧಿಕರು ಹೇಳಿಕೊಂಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಜಿಪನಡುವಿನ 10 ತಿಂಗಳ ಶಿಶುವಿನಲ್ಲಿ ಮಾ. 27ರಂದು ಕೋವಿಡ್- 19 ಪತ್ತೆಯಾಗಿತ್ತು. ಶಿಶುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಶುವಿನ ಆರೋಗ್ಯದಲ್ಲಿ ಚೇತರಿಕೆ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.