ಮಂಗಳಾ ಕ್ರೀಡಾಂಗಣದ ಪೆವಿಲಿಯನ್ ಕಟ್ಟಡ ದುರಸ್ತಿ ಕಾಮಗಾರಿ ಆರಂಭ
ಮುಂದಿನ ಹಂತದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹೈಟೆಕ್ ಸ್ಪರ್ಶ
Team Udayavani, Jul 15, 2019, 5:00 AM IST
ಮಂಗಳಾ ಕ್ರೀಡಾಂಗಣದಲ್ಲಿ ದುರಸ್ತಿ ಕಾರ್ಯ ಆರಂಭಗೊಂಡಿರುವುದು.
ಮಹಾನಗರ: ಮಂಗಳಾ ಕ್ರೀಡಾಂಗಣದ ಪೆವಿಲಿಯನ್ ಕಟ್ಟಡವು ಸುಮಾರು 40 ವರ್ಷ ಹಳೆಯದಾಗಿದ್ದು, ಪೆವಿಲಿಯನ್ ಕಟ್ಟಡದ ಮೇಲ್ಫಾ ವಣಿಯು ಶಿಥಿಲಗೊಂಡಿರುವುದರಿಂದ ಕ್ರೀಡಾಭ್ಯಾಸ ಮಾಡುವುದನ್ನು ನಿಷೇಧಿಸಲಾಗಿತ್ತು. ಇದೀಗ ದುರಸ್ತಿ ಕಾಮಗಾರಿ ಆರಂಭವಾಗಿದೆ.
ಕ್ರೀಡಾಂಗಣದ ಪೆವಿಲಿಯನ್ ಕಟ್ಟಡದ ಮೇಲ್ಫಾ ವಣಿಯ ಸಿಮೆಂಟ್, ಸ್ಲಾಬ್‌ನ ತುಂಡುಗಳು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಕ್ರೀಡಾಭ್ಯಾಸಕ್ಕೆ ಬರುವ ಕ್ರೀಡಾಪಟುಗಳ ಹೆತ್ತವರು ಕುಳಿತುಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಭೆ ಕರೆಯಿತು ಪೆವಿಲಿಯನ್ ಕಟ್ಟಡದ ದುರಸ್ತಿ ಕಾರ್ಯ ಮಾಡುವಂತೆ ಸೂಚಿಸಿದ್ದರು. ಹಾಗಾಗಿ ದ.ಕ. ಜಿಲ್ಲಾ ಪಂಚಾಯತ್‌ನ ಕ್ರೀಡಾಂಗಣ ನಿರ್ವಹಣಾ ಸಮಿತಿಯಿಂದ ಒಟ್ಟು 11 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಪೆವಿಲಿಯನ್‌ನ ಬಹುತೇಕ ದುರಸ್ತಿ ಕೆಲಸಗಳು ನಡೆಯಲಿದೆ. ಆ ಮೂಲಕ ಕ್ರೀಡಾಪಟುಗಳಿಗೆ ಇನ್ನೂ ಕೆಲವೇ ದಿನಗಳಲ್ಲಿ ಸುರಕ್ಷಿತ ಪೆವಿಲಿಯನ್ ಸಿಗಲಿದೆ.
ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ
ಸದ್ಯ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳು, ಕ್ರೀಡಾಳುಗಳ ಅಭ್ಯಾಸ ಪ್ರಕ್ರಿಯೆಗಳು ಎಂದಿನಂತೆ ನಡೆಯುತ್ತಿವೆ. ಆದರೆ ಅವರ ಹೆತ್ತವರು ಅಥವಾ ಇತರರು ಪೆವಿಲಿಯನ್‌ನಲ್ಲಿ ಕುಳಿತುಕೊಂಡು ಅಭ್ಯಾಸ ವೀಕ್ಷಿಸುತ್ತಾರೆ. ಕ್ರೀಡಾಂಗಣದ ಪೆವಿಲಿಯನ್ ಹಳೆ ಕಟ್ಟಡವಾದ್ದರಿಂದ ಪ್ರಸ್ತುತ ಸಿಮೆಂಟ್, ಸ್ಲಾಬ್ ತುಂಡುಗಳು ಬೀಳುತ್ತಿವೆ. ಇದಕ್ಕಾಗಿ ತಾತ್ಕಾಲಿಕ ದುರಸ್ತಿ ಕೆಲಸ ಮಾಡಲಾಗುತ್ತಿದೆ. ಈ ನಡುವೆ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಸುಮಾರು 10 ಕೋ.ರೂ. ವೆಚ್ಚದಲ್ಲಿ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯಾಗಲಿದೆ. ಇದಕ್ಕಾಗಿ ಯೋಜನೆ ರೂಪುಗೊಳ್ಳುತ್ತಿದ್ದು, ಕೆಲವೇ ದಿನಗಳಲ್ಲಿ ಯೋಜನೆ ಅಂತಿಮಗೊಳ್ಳಲಿದೆ ಎಂದು ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.