3 ದಿನದೊಳಗೆ ಸೊಳ್ಳೆ ಲಾರ್ವಾ ನಾಶಪಡಿಸದಿದ್ದರೆ ದಂಡ

ಡೆಂಗ್ಯೂ ನಿಯಂತ್ರಣ; ಶೈಕ್ಷಣಿಕ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಯಿಂದ ಎಚ್ಚರಿಕೆ

Team Udayavani, Jul 30, 2019, 5:45 AM IST

2907MLR30

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾಡಳಿತ ವಿವಿಧ ಸ್ತರಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಇದರನ್ವಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಕಾಲೇಜು ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಮುಂದಿನ 3 ದಿನದೊಳಗೆ ಸೊಳ್ಳೆಯ ಲಾರ್ವಾ ನಾಶಪಡಿಸುವ ಅಭಿಯಾನ ಕೈಗೊಳ್ಳುವಂತೆ ಸೂಚಿಸಿದ್ದು, ಉಲ್ಲಂಘಿಸಿದರೆ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಡೆಂಗ್ಯೂ ನಿಯಂತ್ರಣ ಜಾಗೃತಿ ಮೂಡಿಸುವ ನೆಲೆಯಲ್ಲಿ ಮಂಗಳೂರು ಪುರಭವನದಲ್ಲಿ ಸೋಮವಾರ ದ.ಕ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಮುಖ್ಯಸ್ಥರ ಜತೆಗೆ ನಡೆಸಿದ ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಮಾತನಾಡಿದರು.

3 ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಶಾಲಾ ಮಕ್ಕಳು ಹಾಗೂ ಸಿಬಂದಿ ಮೂಲಕ ತಮ್ಮ ಸಂಸ್ಥೆಗಳ ಕೊಠಡಿಗಳು ಹಾಗೂ ಆವರಣದಲ್ಲಿ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಬೇಕು. ಮೂರು ದಿನ ಗಳಲ್ಲಿ ತಮ್ಮ ಶಿಕ್ಷಣ ಸಂಸ್ಥೆ ಲಾರ್ವಾ ಮುಕ್ತವನಾಗಿರುವುದನ್ನು ದೃಢಪಡಿಸ ಬೇಕು. ಗುರುವಾರದಿಂದ ಡೆಂಗ್ಯೂ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ತಂಡಗಳ ಜತೆ ನಿರ್ದಿಷ್ಟ ಶಿಕ್ಷಣ ಸಂಸ್ಥೆಗಳಿಗೆ ದಿಢೀರ್‌ ಭೇಟಿ ನೀಡಲಿದ್ದೇನೆ. ಈ ಸಂದರ್ಭ ಲಾರ್ವಾ ಪತ್ತೆಯಾದಲ್ಲಿ ದಂಡ ವಿಧಿಸಲಾಗುವುದು ಎಂದರು.

ಶಾಲಾ ಮಕ್ಕಳನ್ನು ಡೆಂಗ್ಯೂ ನಿಯಂತ್ರಣ ಕಾರ್ಯದಲ್ಲಿ ರಾಯಭಾರಿಗಳ ನ್ನಾಗಿಸಿಕೊಳ್ಳಬೇಕು. ನೀರು ನಿಂತ ಎಲ್ಲ ಕಡೆಗಳಲ್ಲಿ ಲಾರ್ವಾ ಉತ್ಪತ್ತಿಯಾಗಿದ್ದಲ್ಲಿ ಆ ನೀರನ್ನು ಚೆಲ್ಲಿ ಸ್ವತ್ಛಗೊಳಿಸುವ ಅಗತ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಮಕ್ಕಳು ಶಾಲೆಗೆ ಬರುವಾಗ ಮೈ ಮುಚ್ಚುವ ವಸ್ತ್ರಗಳನ್ನು ಧರಿಸುವುದು ಅಥವಾ ಬೇವಿನ ಎಣ್ಣೆ (ನೀಮ್‌ ಆಯಿಲ್‌) ಅಥವಾ ಇತರ ಎಣ್ಣೆಯನ್ನು ಮೈಮೇಲೆ ಹಚ್ಚಿಕೊಂಡು ಬರುವಂತೆ ಪೋಷಕರಿಗೆ ಮಾಹಿತಿ ಒದಗಿಸಬೇಕು. ಶಿಕ್ಷಣ ಸಂಸ್ಥೆಗಳ ಕೊಠಡಿಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದರು.

ಮಕ್ಕಳಿಗೆ ಸ್ಲೆ„ಡ್‌ ಶೋ, ವೀಡಿಯೋ ಮೂಲಕ ಡೆಂಗ್ಯೂ ಯಾವ ರೀತಿ ಹರಡುತ್ತದೆ, ಲಾರ್ವಾ ಸೃಷ್ಟಿ ಹೇಗಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದು, ಲಾರ್ವಾ ಸೃಷ್ಟಿ ಕುರಿತಂತೆ ವಿವಿಧ ಸ್ಪರ್ಧೆಗಳ ಮೂಲಕವೂ ತಿಳಿ ಹೇಳುವ ಕೆಲಸವನ್ನು ಮಾಡಬಹುದು ಎಂದು ಹೇಳಿದರು.

ಶಿಕ್ಷಣ ಸಂಸ್ಥೆಯೊಂದರಲ್ಲಿ 4-5 ಮಕ್ಕಳಿಗೆ ಡೆಂಗ್ಯೂ ಜ್ವರ ಬಾಧಿಸಿದ್ದಲ್ಲಿ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತಂದರೆ ಅಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳನ್ನು ಜಿಲ್ಲಾಡಳಿತ ನಿರ್ವಹಿಸಲಿದೆ. ಮಂಗಳೂರು ಪಾಲಿಕೆ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಲ್ಲಿ ಲಾರ್ವಾ ಉತ್ಪತ್ತಿ ಅತೀ ದೊಡ್ಡ ಪ್ರಮಾಣದಲ್ಲಿದ್ದು, ಸಂಸ್ಥೆಗಳಿಂದ ಅದನ್ನು ನಾಶಪಡಿಸಲು ಸಾಧ್ಯವಾಗದಿದ್ದರೆ ಈ ಬಗ್ಗೆ ತಿಳಿಸಿದರೆ ಮನಪಾ ತಂಡ (ಮಂಗಳೂರು ಪಾಲಿಕೆ ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ- 2220309) ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ಮನಪಾ ಆಯುಕ್ತ ಮುಹಮ್ಮದ್‌ ನಝೀರ್‌, ಉಪ ಆಯುಕ್ತೆ ಗಾಯತ್ರಿ ನಾಯಕ್‌, ಡಿಡಿಪಿಐ ಶಿವರಾಮಯ್ಯ, ಮಲೇರಿಯಾ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಮಿತಿಯ ಸುರೇಶ್‌ ಶೆಟ್ಟಿ, ಅಧಿಕಾರಿ ಪ್ರಸನ್ನ ಉಪಸ್ಥಿತರಿದ್ದರು.

ಕೊಂಚ ತೇವಾಂಶದಲ್ಲೂ ಸೊಳ್ಳೆ ಉತ್ಪತ್ತಿ!
ಹೂವಿನ ಕುಂಡ, ಫ್ರಿಜ್‌ ಸೇರಿದಂತೆ ಮನೆಯಲ್ಲಿ ನಿಂತ ನೀರನ್ನು ವಾರಕ್ಕೊಮ್ಮೆ ಬದಲಾಯಿಸುತ್ತಿದ್ದರೆ ಸೊಳ್ಳೆ ಉತ್ಪತ್ತಿ ಸಾಧ್ಯವಿಲ್ಲ. ನೀರು ನಿಂತಲ್ಲಿ ಮಾತ್ರ ಈ ಸೊಳ್ಳೆಯ ಲಾರ್ವಾ ಉತ್ಪತ್ತಿಯಾಗುವುದಲ್ಲ. ಬದಲಿಗೆ ಡೆಂಗ್ಯೂ ರೋಗ ಸೋಂಕಿತ ಲಾರ್ವಾಗಳು ಕೊಂಚ ತೇವಾಂಶ ಇರುವಲ್ಲಿ, ಗೋಡೆಗಳಲ್ಲಿಯೂ ಸಹ ಉಳಿದುಕೊಂಡು ಬಿಟ್ಟರೆ ಅವುಗಳು ಮತ್ತೆ ನೀರಿನ ಸಂಪರ್ಕ ಪಡೆದಾಗ ಮರಿಗಳಾಗಬಹುದು.

1 ಚಮಚದಷ್ಟು ನೀರಿನಲ್ಲಿಯೂ ನೂರಾರು ಲಾರ್ವಾ ಉತ್ಪತ್ತಿಯಾಗುವ ಸಾಧ್ಯತೆಯಿದೆ. ಹಾಗಾಗಿ ಲಾರ್ವಾ ನಾಶ ಮಾಡುವ ಸಂದರ್ಭ ಲಾರ್ವಾ ಇದ್ದ ವಸ್ತುಗಳನ್ನು ತಿಕ್ಕಿ
ತೊಳೆದು ಒಣಗಿಸುವುದು ಬಹು ಮುಖ್ಯ. ಟ್ಯಾಂಕ್‌ಗಳ ಮೇಲಿನ ಮುಚ್ಚಳದ ಸಂದುಗಳು ಸೇರಿದಂತೆ ಮನೆಯ ಒಳಗೆ ಅಥವಾ ಹೊರಗಡೆ ಲಾರ್ವಾ ನಾಶ ಮಾಡುವ ಸಂದರ್ಭ ಜೀವಂತವಾಗಿ ಉಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲೆಯ ಆರೋಗ್ಯ ಕಾರ್ಯಕರ್ತೆ ಮಾಹಿತಿ ನೀಡಿದರು.

ಗಪ್ಪಿ ಮೀನು ವಿತರಣೆ
ಸೊಳ್ಳೆಗಳ ಲಾರ್ವಾ ಬೇಟೆಯನ್ನು ಜಿಲ್ಲಾಡಳಿತ ಪ್ರಮುಖ ಆದ್ಯತೆಯನ್ನಾಗಿಸಿಕೊಂಡಿದ್ದು, ಮುಂದಿನ ಎರಡು ತಿಂಗಳವರೆಗೆ ನಿರಂತರವಾಗಿ ನಡೆಯಲಿದೆ. ವರ್ಷಪೂರ್ತಿ ಮುಂದುವರಿಸಲು ಚಿಂತಿಸಲಾಗಿದೆ. ಈ ಮೂಲಕ ಸೊಳ್ಳೆಗಳ ಉತ್ಪತ್ತಿ ಯನ್ನು ನಿಯಂತ್ರಿಸುವುದು ಜಿಲ್ಲಾಡಳಿತದ ಉದ್ದೇಶ. ತೆರೆದ ಬಾವಿಗಳಲ್ಲಿ ಸೊಳ್ಳೆ ಉತ್ಪತ್ತಿ ಯನ್ನು ತಡೆಯಲು ಶೀಘ್ರದಲ್ಲೇ ಗಪ್ಪಿ ಮೀನು ಹಂಚುವ ಅಭಿಯಾನವನ್ನು ಆರಂಭಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಡೆಂಗ್ಯೂ : 21 ಮಂದಿ ಆಸ್ಪತ್ರೆಗೆ ದಾಖಲು
ಮಂಗಳೂರು: ದ.ಕ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ 21 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೊಳ್ಳೆ ಉತ್ಪತ್ತಿ ತಾಣಗಳು ಕಂಡು ಬಂದಿರುವ ನಗರದ ಉರ್ವ, ಬರ್ಕೆ, ಅಶೋಕ ನಗರ ಸೇರಿದಂತೆ ಕೆಲವು ಪ್ರದೇಶಗಳಿಗೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೊಳ್ಳೆ ಉತ್ಪತ್ತಿ ತಾಣಗಳು ಕಂಡು ಬಂದಿರುವ ಪ್ರಕರಣಗಳಲ್ಲಿ 45,000 ರೂ. ದಂಡ ಸಂಗ್ರಹಿಸಲಾಗಿದೆ.

ಉಡುಪಿ: ಗ್ರಾಮೀಣ ಭಾಗದಲ್ಲಿ ಹೆಚ್ಚು
ಉಡುಪಿ ಜಿಲ್ಲೆಯಲ್ಲಿ ಈ ಬಾರಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಉಡುಪಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಜನವರಿಯಿಂದ ಜು. 28ರ ವರೆಗೆ 65 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲೆಯ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.