ಜನಪರ ಯೋಜನೆ ಜನರಿಗೆ ತಲುಪಿಸಿ: ನಳಿನ್
Team Udayavani, Feb 23, 2017, 4:55 PM IST
ಪುತ್ತೂರು : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ಅನೇಕ ಜನಪರ ಯೋಜನೆಗಳನ್ನು ರೂಪಿಸಿದೆ. ಈ ಇದರ ಪ್ರಯೋಜನವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿಕೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಬುಧವಾರ ಪುತ್ತೂರು ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ನಡೆದ ಬಿಜೆಪಿ ಪುತ್ತೂರು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜನಪರ ಸಾಧನೆಯ ಮೂಲಕವೇ ಗೆಲುವು ಸಾಧಿಸಲಿದೆ. ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿ ಜನರು ಅಭೂತಪೂರ್ವ ಬೆಂಬಲ ಸೂಚಿಸಿದ್ದಾರೆ. ಅದಕ್ಕೆ ದೇಶದ ಅಭಿವೃದ್ಧಿ ದಿಶೆಯಲ್ಲಿ ಮೋದಿ ಅವರ ಕಾರ್ಯಕ್ರಮಗಳೇ ಕಾರಣ ಎಂದು ಅವರು ಹೇಳಿದರು.
ಕಾಂಗ್ರೆಸ್ ಒಳಜಗಳ, ವೈಫಲ್ಯವೇ ಬಿಜೆಪಿ ಗೆಲುವಿಗೆ ಕಾರಣವಾಗಬಾರದು. ಇದಕ್ಕಾಗಿ ಈಗ ನರೇಂದ್ರ ಮೋದಿ ಅವರು ನೀಡಿರುವ ಕೊಡುಗೆಯನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಭಷ್ಟಾಚಾರ ಮುಕ್ತ
ದೇಶ ಕಾಂಗ್ರೆಸ್ ಮುಕ್ತವಾಗಬೇಕು ಎಂದರೆ ಭ್ರಷ್ಟಾಚಾರ ಮುಕ್ತವಾಗಬೇಕು ಎಂದು ಅದರ ಅರ್ಥ ಎಂದ ಅವರು, ಬಿಜೆಪಿ ದೇಶದ ಚಿಂತನೆ ಆಧಾರದಲ್ಲಿ ಬೆಳೆಯುತ್ತಿರುವ ಪಕ್ಷ, ದೇಶದ ಜನರನ್ನು ಸ್ವಾಭಿಮಾನಿಗಳನ್ನಾಗುವ ಉದ್ದೇಶ ಹೊಂದಿದೆ. ಇದಕ್ಕಾಗಿಯೇ ಮುದ್ರಾ ಯೋಜನೆಯಡಿ ಬ್ಯಾಂಕ್‌ನಿಂದ ಯುವಕರಿಗೆ ಸಾಲ ಸೌಲಭ್ಯ, ಮಹಿಳೆಯರಿಗೆ ವಿಶೇಷ ಯೋಜನೆ, ಬಡವರಿಗೆ ಗ್ಯಾಸ್ ಸಹಿತ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವ ಕೆಲಸ ಮಾಡಿದೆ ಎಂದು ಅವರು ಹೇಳಿದರು.ಹಿಂದಿನ ಸರಕಾರ ಗ್ಯಾಸ್ ನೀಡುವ ಬಗ್ಗೆಯೇ ಚರ್ಚೆ ಮಾಡುತ್ತಿದ್ದರೆ, ಮೋದಿ ನೇತೃತ್ವದ ಸರ್ಕಾರ ಗ್ಯಾಸ್ ವಿತರಣೆಗೆ ಅನುಕೂಲ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಗ್ರಾಮಗಳಿಗೆ ನೇರವಾಗಿ 1 ಕೋಟಿ ರೂ. ಅನುದಾನ ನೀಡುವ ಉದ್ದೇಶ ಹೊಂದಿದೆ. ಗ್ರಾಮೋತ್ಥಾನ, ನಗರೋತ್ಥಾನದಿಂದ ದೇಶದ ಅಭಿವೃದ್ಧಿ ಎಂಬ ಮಹತ್ವಾಕಾಂಕ್ಷೆ ಹೊಂದಿದೆ ಎಂದು ಹೇಳಿದರು.
150 ಜನರಿಕ್ ಔಷಧಾಲಯ
ಬಡವರಿಗೆ ಅನುಕೂಲವಾಗುವಂತೆ ಕೇಂದ್ರ ಸರಕಾರ ಜನರಿಕ್ ಔಷಧಾಲಯ ತೆರೆಯುತ್ತಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿಯಲ್ಲಿ 150 ಔಷಧ ಮಳಿಗೆಗಳು ತೆರೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.