ಮಂಗಳೂರಿನಲ್ಲಿ ಇಂದು ಜನಜಾಗೃತಿ ಸಮಾವೇಶ
ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ; ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾಷಣ
Team Udayavani, Jan 27, 2020, 6:00 AM IST
ಮಂಗಳೂರು: ಸಿಎಎ ಜಾರಿಗೆ ತಂದಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುವ ಹಾಗೂ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜನಜಾಗೃತಿ ಸಮಾವೇಶವನ್ನು ಜ.27ರಂದು ಕೂಳೂರು ಗೋಲ್ಡ್‌ಪಿಂಚ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಸರ್ವ ಸಿದ್ಧತೆ ನಡೆಸಲಾಗಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಮುಖ್ಯ ಭಾಷಣ ಮಾಡಲಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಸಂಜೀವ ಮಠಂದೂರು ರವಿವಾರ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳಿಂದ ಭದ್ರತೆಯ ಮಾಹಿತಿ ಪಡೆದುಕೊಂಡರು. ಶಾಸಕ ಡಾ| ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಉಡುಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮುಖರಾದ ಅರುಣ್ ಕುಮಾರ್, ಜಗದೀಶ ಶೇಣವ, ಸಂದೇಶ ಶೆಟ್ಟಿ ಉಪಸ್ಥಿತರಿದ್ದರು.
ದ.ಕ., ಉಡುಪಿಯ ಎಲ್ಲ ಬೂತ್‌ಗಳಿಂದ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪ್ರತೀ ಬೂತ್‌ನಿಂದ ತಲಾ 100 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉದ್ಯಮಿ ಗಳು, ವ್ಯಾಪಾರಸ್ಥರು ಮಧ್ಯಾಹ್ನದ ಬಳಿಕ ವ್ಯಾಪಾರ ಸ್ಥಗಿತಗೊಳಿಸಿ ಭಾಗ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸುದ್ದಿಗಾರರ ಜತೆಗೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಸಿಎಎ ಬಗ್ಗೆ ಜನರಿಗೆ ಅರಿವು ಮೂಡಿಸುವ ಮತ್ತು ಕೆಲವರ ಅಪನಂಬಿಕೆಯನ್ನು ದೂರಮಾಡುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಅಭೂತಪೂರ್ವವಾಗಿ ಸಾಕಾರಗೊಳ್ಳಲಿದೆ ಎಂದರು.
ಪೊಲೀಸ್ ಆಯುಕ್ತ ಡಾ| ಹರ್ಷ ರವಿವಾರ ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದರು.
ಬಿಗಿ ಬಂದೋಬಸ್ತ್; ಕಟ್ಟೆಚ್ಚರ
ಸಮಾವೇಶ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಗೋಲ್ಡ್ ಫಿಂಚ್ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಕೈಗೊಂಡಿದೆ. ಪೊಲೀಸ್ ಆಯುಕ್ತ ಡಾ| ಹರ್ಷ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ಸೇರಿದಂತೆ ವಿವಿಧ ಶ್ರೇಣಿಯ ಪೊಲೀಸರು ಭದ್ರತೆಯ ಉಸ್ತುವಾರಿಯಲ್ಲಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ಆಯಕಟ್ಟಿನ ಪ್ರದೇಶಗಳಲ್ಲಿಯೂ ಭದ್ರತೆ ಏರ್ಪಡಿಸಲಾಗಿದೆ. ಸಮಾವೇಶ ನಡೆಯುವ ವ್ಯಾಪ್ತಿಯಲ್ಲಿ ಬಾಂಬ್ ನಿಷ್ಕ್ರಿಯ ದಳದ ತಂಡ ತಪಾಸಣೆ ನಡೆಸುತ್ತಿದೆ.
ಮಧ್ಯಾಹ್ನ 3ರಿಂದ ಆರಂಭ
ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. ರಾಜನಾಥ್ ಸಿಂಗ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದ ಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಎಲ್ಲ ಬಿಜೆಪಿ ಶಾಸಕರು, ವಿ.ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಹೆದ್ದಾರಿ ಸಂಚಾರ ಮಾರ್ಪಾಡು
ಮಂಗಳೂರು: ಜ. 27ರ ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ಹೆದ್ದಾರಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಸಮಾವೇಶಕ್ಕೆ ಬರುವ ವಾಹನ ಸಮಾವೇಶ ಸ್ಥಳದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಉಡುಪಿಯಿಂದ ಬೆಂಗಳೂರು ಕಡೆಗೆ ಪಡುಬಿದ್ರಿ-ಕಾರ್ಕಳ-ಧರ್ಮ ಸ್ಥಳ- ಶಿರಾಡಿಯಾಗಿ ಸಂಚರಿಸಬೇಕು.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೆಲ್ಕಾರ್-ಬಿ.ಸಿ. ರೋಡ್ ವಯಾ ಕೊಣಾಜೆ-ತೊಕ್ಕೊಟ್ಟು ಮಾರ್ಗವಾಗಿ ಸಂಚರಿಸಬೇಕು.
ಬಿ.ಸಿ. ರೋಡ್‌ನಿಂದ ಮಂಗಳೂರು ಕಡೆಗೆ ಬರುವವರು ಪೊಳಲಿ ಕೈಕಂಬ ಮಾರ್ಗವಾಗಿ ಸಂಚರಿಸಬೇಕು.
ಬಿ.ಸಿ. ರೋಡ್, ಪಂಪ್‌ವೆಲ್ ಕಡೆಯಿಂದ ಉಡುಪಿ ಕಡೆಗೆ ನಂತೂರು-ಕೈಕಂಬ-ಮೂಡುಬಿದಿರೆ ಮಾರ್ಗವಾಗಿ ಸಂಚರಿಸಬೇಕು.
ಕೊಟ್ಟಾರಚೌಕಿ, ಮಂಗಳೂರು ನಗರದಿಂದ ಉಡುಪಿ ಕಡೆಗೆ ಕೆಪಿಟಿ-ನಂತೂರು-ಮೂಡುಬಿದಿರೆ ಮಾರ್ಗವಾಗಿ ಸಂಚರಿಸಬೇಕು.
ಗೋಲ್ಡ್‌ಫಿಂಚ್ ಸಿಟಿ ರಾ.ಹೆ. 66ರ ಪಕ್ಕದಲ್ಲೇ ಇದೆ. ಹಾಗಾಗಿ ಹೆದ್ದಾರಿ ಸಹಿತ ಜಿಲ್ಲೆಯ ಪ್ರಮುಖ ರಸ್ತೆಗಳು ಮತ್ತು ಮಂಗಳೂರು ನಗರಕ್ಕೆ ಹೊಂದಿಕೊಂಡ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ವಾಹನ ದಟ್ಟಣೆ, ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.