ಜಿ+3 ಮಾದರಿಯ ವಸತಿ ಸಂಕೀರ್ಣ: ಜಿಲ್ಲಾಧಿಕಾರಿ
Team Udayavani, Oct 14, 2018, 10:10 AM IST
ಉಳ್ಳಾಲ: ಕಡಲ್ಕೊರೆತ ಸಂತ್ರಸ್ತರಿಗೆ ಶಾಶ್ವತ ಪರಿಹಾರವಾಗಿ ಆರು ತಿಂಗಳೊಳಗೆ ಎರಡು ಬೆಡ್ ರೂಂಗಳ ಜಿ+3 ಮಾದರಿಯ ವಸತಿ ಸಂಕೀರ್ಣ ನಿರ್ಮಿಸಿ ಕೊಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಶನಿವಾರ ಚಂಡಮಾರುತದಿಂದ ಹಾನಿಗೊಳಗಾದ ಕಿಲೆರಿಯಾನಗರ, ಉಚ್ಚಿಲ ಸಮುದ್ರ ತೀರದ ಪ್ರದೇಶಗಳಿಗೆ ಭೇಟಿ ನೀಡಿದರು.ಸಂತ್ರಸ್ತ ಹಲವು ಕುಟುಂಬದ ಪಟ್ಟಿಯನ್ನು ತಯಾರಿಸಲಾಗಿದೆ. ಅವರಿಗಾಗಿ ಜಿಲ್ಲೆಯ ಕಣ್ಣೂರು ಅಥವಾ ಒಂಭತ್ತುಕೆರೆ ಭಾಗದಲ್ಲಿ ವಸತಿ ಸಂಕೀರ್ಣ ನಿರ್ಮಿಸಿ ಕೊಡುವ ಯೋಜನೆ ರೂಪಿಸಲಾಗಿದೆ. ಎರಡು ಸ್ಥಳಗಳನ್ನು ಇಂದು ಸರ್ವೇ ಮಾಡಲಾಗಿದೆ. ಜೂನ್ ತಿಂಗಳ ಒಳಗೆ ಮನೆ ಹಸ್ತಾಂತರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಅಲ್ಲಿಯವರೆಗೂ ತಾಳ್ಮೆಯಿಂದ, ಅಪಾಯಕಾರಿ ಸ್ಥಳದಿಂದ ಹೊರಗೆ ಇರುವಂತೆ ಸೂಚಿಸಿದರು. ಉಳಿದಂತೆ ಸಮುದ್ರ ತೀರದಲ್ಲಿ ನಡೆಯುತ್ತಿರುವ ಬಮ್ಸ್ì ಮತ್ತು ರೀಫ್ ಅಳವಡಿಸುವ ಕಾಮಗಾರಿ ಮುಂದುವರಿಯಲಿದೆ ಎಂದರು.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅ. 11ರಂದು ಮಂಗಳೂರು ವಿಧಾನಸಭಾ ಕ್ಷೇತ್ರ ಜೆಡಿಎಸ್ ಮುಖಂಡರು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಬಿ.ಎಂ. ಫಾರೂಕ್ ನೇತೃತ್ವದಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಉಳ್ಳಾಲ ಕಡಲ್ಕೊರೆತ ಬಗ್ಗೆ ಮನವಿ ಸಲ್ಲಿಸಿ ಕೂಡಲೇ ಸಂತ್ರಸ್ತರಿಗೆ ಶಾಶ್ವತ ಪರಿಹಾರವಾಗಿ ವಸತಿಯನ್ನು ನೀಡಬೇಕೆಂದು ಮನವಿ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಕೂಡಲೇ ಸ್ಪಂದಿಸಿ ಜಿಲ್ಲಾಧಿಕಾರಿಯವರಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಜನರ ಬಹುದಿನಗಳ ಬೇಡಿಕೆಗೆ ಸ್ಪಂದನೆ ದೊರೆತಿದೆ ಎಂದು ಜೆಡಿಎಸ್ ಮುಖಂಡ ಯು.ಎಚ್. ಫಾರುಕ್ ತಿಳಿಸಿದ್ದಾರೆ.
ಜೆಡಿಎಸ್ ಮುಖಂಡ ನಝೀರ್ ಉಳ್ಳಾಲ, ಮುಸ್ತಾಫ ಎವರೆಸ್ಟ್, ಅಶ್ರಫ್ ಬಾವಾ ಕೋಡಿ, ಹಮೀದ್
ಉಳ್ಳಾಲ, ನಗರಸಭೆ ಸದಸ್ಯರುಗಳಾದ ಮಹಮ್ಮದ್ ಬಶೀರ್ ಕೈಕೋ, ಯು.ಎಂ. ಜಬ್ಟಾರ್, ಮಹಮ್ಮದ್ ಮುಕ್ಕಚ್ಚೇರಿ, ತಹಶೀಲ್ದಾರ್ ಗುರುಪ್ರಸಾದ್, ಉಳ್ಳಾಲ ನಗರಸಭೆ ಪೌರಾಯುಕ್ತ ವಾಣಿ ವಿ. ಆಳ್ವ, ಕಂದಾಯ ನಿರೀಕ್ಷಕ ಸ್ಟೀಫನ್, ಗ್ರಾಮ ಲೆಕ್ಕಿಗ ಪ್ರಮೋದ್ ಕುಮಾರ್, ಸಹಾಯಕ ನವನೀತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.