ಶಿಥಿಲ ಕೊಠಡಿ ಕೆಡವಲು ಕೊನೆಗೂ ಅನುಮತಿ

 ತಣ್ಣೀರುಪಂತ ಸ. ಹಿ. ಮಾ. ಶಾಲೆ: ಅಪಾಯಕಾರಿ ಸ್ಥಿತಿಯಲ್ಲಿ ಕೊಠಡಿಗಳು

Team Udayavani, Jul 15, 2019, 5:23 AM IST

10531307UPG6-4

ಉಪ್ಪಿನಂಗಡಿ: ಅಪಾಯದ ಅಂಚಿನಲ್ಲಿದ್ದ, ಶಾಲಾ ಕಟ್ಟಡಕ್ಕೆ ತಾಗಿ ಕೊಂಡಿರುವ ಕೊಠಡಿಗಳನ್ನು ಕೆಡವಲು ಕೊನೆಗೂ ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ಅನುಮತಿ ನೀಡಿದ್ದು, ಹೆತ್ತವರು ನಿಟ್ಟುಸಿರು ಬಿಡುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಸರಕಾರಿ ಹಿರಿಯ ಮಾದರಿ ಶಾಲೆಯ ಕಟ್ಟಡದಲ್ಲಿ ಎರಡು ಕೊಠಡಿಗಳು ಸಂಪೂರ್ಣ ಬಿರುಕು ಬಿಟ್ಟು ಛಾವಣಿ ಕುಸಿ ಯುವ ಹಂತದಲ್ಲಿವೆ. ಈ ಕೊಠಡಿಗಳಿಗೆ ತಾಗಿಕೊಂಡಿದ್ದ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು, “ಉದಯವಾಣಿ’ ಸುದಿನ ವರ್ಷದ ಹಿಂದೆಯೇ ಸುದೀರ್ಘ‌ ವರದಿಯನ್ನು ಪ್ರಕಟಿಸಿತ್ತು.

ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಅಪಾಯದ ಅಂಚಿನಲ್ಲಿರುವ ತರಗತಿಗಳನ್ನು ಬದಲಿ ಕೊಠಡಿಗಳಿಗೆ ಸ್ಥಳಾಂತರಿಸುವ ಸೂಚನೆ ಯನ್ನು ಅನುಷ್ಠಾನಗೊಳಿಸಿದ್ದರು.

ಆದರೂ ಅಪಾಯದ ಅಂಚಿನ ಕೊಠಡಿ ತರಗತಿ ನಡೆಯುವ ಕಟ್ಟಡಕ್ಕೆ ತಾಗಿಕೊಂಡಿದ್ದು, ಅಪಾಯ ದೂರವಾಗಿ ರಲಿಲ್ಲ. ಒಂದು ವರ್ಷ ಕಾಲ ಕೊಠಡಿ ಕೆಡವಲು ಮೀನ-ಮೇಷ ಎಣಿಸಿದ ಅಧಿಕಾರಿಗಳು, ನೆಪಗಳನ್ನು ಹೇಳಿ ಜಾರಿಕೊಳ್ಳುತ್ತಿದ್ದರು.

ಇದನ್ನು ಅರಿತ ಗ್ರಾಮಸ್ಥರು ಗ್ರಾಮಸಭೆ ಯಲ್ಲಿ ವಿಷಯ ಪ್ರಸ್ತಾವಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಮಕ್ಕಳನ್ನು ಈ ಶಾಲೆಗೆ ಕಳುಹಿಸಲಿ. ಒಂದೋ ಕೊಠಡಿಗಳನ್ನು ಕೆಡವಲು ಇಲಾಖೆ ಕ್ರಮ ಜರುಗಿಸಲಿ, ಇಲ್ಲವೇ ನಾವೇ ಕೆಡವಲು ಸಿದ್ಧ ಎಂದು ಸವಾಲು ಹಾಕಿದರು. ಇದರಿಂದ ಮುಜುಗರಕ್ಕೆ ಒಳಗಾದ ಶಿಕ್ಷಣ ಇಲಾಖೆ, ಈಗ ಎಂಜಿನಿಯರಿಂಗ್‌ ವಿಭಾಗದಿಂದ ಕೊಠಡಿಗಳನ್ನು ಕೆಡವಲು ಆದೇಶ ಪಡೆದಿದ್ದು, ಒಪ್ಪಂದವೂ ಸಿದ್ಧಗೊಂಡಿದೆ ಎಂದು ತಿಳಿದುಬಂದಿದೆ.

 ವರದಿ ಬಂದಿದೆ
ತಣ್ಣೀರುಪಂತ ಶಾಲೆಯ ಹಳೆಯ ಕೊಠಡಿಗಳನ್ನು ಪರಿಶೀಲಿಸಿದ್ದು, ಶಿಕ್ಷಣ ಇಲಾಖೆಯಿಂದ ಜಿ.ಪಂ. ಎಂಜಿನಿಯರಿಂಗ್‌ ವಿಭಾಗಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಕೆಡವಲು ಮಂಜೂರಾತಿ ಪಡೆಯುವುದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿತ್ತು. ಈಗ ಜಿ.ಪಂ. ಎಂಜಿನಿಯರಿಂಗ್‌ ವಿಭಾಗವು ವರದಿ ನೀಡಿದ್ದು, ತಾ.ಪಂ. ಸಭೆಯಲ್ಲಿ ಚರ್ಚೆಯ ಬಳಿಕ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು.
 -ಶರೀಫ್, ಕ್ಷೇತ್ರ ಶಿಕ್ಷಣ ಸಂಯೋಜಕ, ಬೆಳ್ತಂಗಡಿ

 ಶೀಘ್ರ ಕ್ರಮ
ತಣ್ಣೀರುಪಂತ ಶಾಲೆಯಲ್ಲಿ ಎರಡು ಹಳೆಯ ಕೊಠಡಿಗಳು ಹಾಗೂ ಅದಕ್ಕೆ ತಾಗಿಕೊಂಡು ಒಂದು ಮರ ಅಪಾಯದ ಸ್ಥಿತಿಯಲ್ಲಿರುವುದು ನಿಜ. ಈ ಕುರಿತು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಕೋರಿಕೆಯ ಮೇರೆಗೆ ಇದೀಗ ಕಟ್ಟಡದ ಕೊಠಡಿಗಳನ್ನು ಕೆಡವಲು ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಿಂದ ಮಂಜೂರಾತಿ ಸಿಕ್ಕಿದ್ದು, ತತ್‌ಕ್ಷಣವೇ ಕ್ರಮ ಕೈಗೊಳ್ಳಲಾಗುವುದು.
 -ಜಯವಿಕ್ರಮ್‌ ಕಲ್ಲಾಪು, ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷ

ಟಾಪ್ ನ್ಯೂಸ್

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.