ಜ. 30ರಿಂದ ಕಂಬಳ ನಡೆಸಲು ಅನುಮತಿ
Team Udayavani, Jan 27, 2021, 2:13 AM IST
ಮಂಗಳೂರು: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಬಾರಿ ಕಂಬಳ ಆಯೋಜನೆಗೆ ಜಿಲ್ಲಾಡಳಿತ ಅನುಮತಿ ನೀಡಿದ್ದು ಜ. 30ರಿಂದ ಆರಂಭಗೊಳ್ಳುವ ಸಾಧ್ಯತೆಗಳಿವೆ.
2020-21ನೇ ಸಾಲಿನ ಕಂಬಳ ಕ್ರೀಡೆಯನ್ನು ಆಯೋಜಿಸುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸಂಸದರು ಮಾತನಾಡಿ, ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು ಈ ಬಾರಿ ಕೋವಿಡ್ ಸೋಂಕಿನಿಂದಾಗಿ ಆರಂಭಿಸಲು ಸಾಧ್ಯವಾಗಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಜನವರಿ 30ರಿಂದ ಜಿಲ್ಲೆಯಲ್ಲಿ ಕಂಬಳ ಏರ್ಪಡಿಸಬಹುದಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಕೋವಿಡ್ ಸಂದರ್ಭ ವಾದ ಈ ದಿನಗಳಲ್ಲಿ ಅತೀ ಹೆಚ್ಚು ಜಾಗ್ರತೆ ವಹಿಸಬೇಕು, ಹೆಚ್ಚು ಜನರು ಸೇರ ದಂತೆ ನೋಡಿಕೊಳ್ಳಬೇಕು. ರಾತ್ರಿ 10 ಗಂಟೆಯ ಒಳಗೆ ಪೂರ್ಣ ಗೊಳಿಸ ಬೇಕು. ವಯಸ್ಸಾ ದವರು ಮತ್ತು ಮಕ್ಕಳು ಭಾಗವಹಿಸ ದಂತೆ ಎಚ್ಚರ ವಹಿಸ ಬೇಕು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳು ವುದು ಸೇರಿದಂತೆ ಕೋವಿಡ್ ನಿಯಮ ಗಳನ್ನು ಪಾಲಿಸ ಬೇಕು ಎಂದರು.
ಎಲ್ಲ ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಶಿಸ್ತುಬದ್ಧವಾಗಿ ಜರಗಿಸಲು ಹೆಚ್ಚಿನ ಕಾರ್ಯಕರ್ತರನ್ನು ತೊಡಗಿಸಿಕೊಳ್ಳಲಾಗುವುದು ಎಂದು ಕಂಬಳ ಸಮಿತಿಯ ಪದಾಧಿಕಾರಿ ಗಳು ಭರವಸೆ ನೀಡಿದರು.
ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ| ಟಿ.ಜಿ. ಪ್ರಸನ್ನ, ಶಾಸಕರಾದ ಉಮಾನಾಥ ಕೋಟ್ಯಾನ್, ಯು.ಟಿ. ಖಾದರ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಕಂಬಳ ಸಮಿತಿಯ ಭಾಸ್ಕರ್ ಕೋಟ್ಯಾನ್, ಗುಣಪಾಲ ಕಡಂಬ ಹಾಗೂ ವಿವಿಧ ಕಂಬಳಗಳ ವ್ಯವಸ್ಥಾಪಕರು, ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ. ಪ್ರಸಾದ್ ಉಪಸ್ಥಿತರಿದ್ದರು.
ಕಂಬಳಕ್ಕೆ ಸಿದ್ಧತೆ :
ಕಂಬಳಕ್ಕೆ ಸಿದ್ಧತೆ ನಡೆದಿದ್ದು ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯಲ್ಲಿ ಜ. 30ರಂದು ಈ ಸಾಲಿನ ಪ್ರಥಮ ಕಂಬಳ ನಡೆಯಲಿದೆ. ಪ್ರಸ್ತುತ ಹೊಕ್ಕಾಡಿಗೋಳಿ, ಐಕಳ, ವಾಮಂಜೂರು, ಮೂಡುಬಿದಿರೆ, ಮೀಯಾರು, ಮಂಗಳೂರು ಹಾಗೂ ವೇಣೂರು ಸೇರಿದಂತೆ 7 ಕಂಬಳಗಳ ಪಟ್ಟಿ ಸಿದ್ಧ ವಾಗಿದೆ. ಇದಕ್ಕೆ ಇನ್ನಷ್ಟು ಕಂಬಳಗಳು ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಕಂಬಳ ಸಮಿತಿಯ ಭಾಸ್ಕರ ಕೋಟ್ಯಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.