ವ್ಯಕ್ತಿತ್ವ ವಿಕಸನ ಶಿಬಿರಗಳು ಅವಶ್ಯ: ಡಾ| ಪ್ರಭಾಕರ ಜೋಶಿ
Team Udayavani, May 31, 2019, 6:00 AM IST
ಮಹಾನಗರ: ಪಠ್ಯ ಶಿಕ್ಷಣದೊಂದಿಗೆ ಜೀವನಾನುಭವ ಕೊಡುವ ಕ್ಷಮತಾದಂತಹ ಶಿಬಿರ ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಆವಶ್ಯಕವಾದುದು ಎಂದು ವಿದ್ವಾಂಸ ಡಾ| ಎಂ ಪ್ರಭಾಕರ ಜೋಶಿ ಹೇಳಿದರು.
ಮಂಗಳೂರು ವಿಶ್ವಕೊಂಕಣಿ ಕೇಂದ್ರದಲ್ಲಿ ಉಡುಪಿ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪದವಿ ಮುಗಿಸಿದ 101 ವಿದ್ಯಾರ್ಥಿಗಳಿಗೆ ಮೇ 23ರಿಂದ 29ರ ವರೆಗೆ ಜರಗಿದ ಕ್ಷಮತಾ ಯು. ಗೆಟಿನ್ ಸನಿವಾಸ ಶಿಬಿರದ ಸಮಾರೋಪದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.
ಅಧ್ಯಕ್ಷತೆ ವಹಿಸಿದ್ದ ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಮಾತನಾಡಿ, ವಿದ್ಯಾಪೋಷಕ್‌ನ ಕಾರ್ಯವನ್ನು ಶ್ಲಾಘಿಸಿ ವಿದ್ಯಾರ್ಥಿಗಳು ಇಲ್ಲಿ ಪಡೆದ ಅನುಭವವನ್ನು ತಮ್ಮ ಜೀವನದಲ್ಲಿ ಅಳವಡಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿ ಶುಭ ಹಾರೈಸಿದರು.
ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಶಿಬಿರದ ನಿರ್ದೇಶಕ ಗುರುದತ್ ಬಾಳಿಗ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಶಿಬಿರಾರ್ಥಿಗಳಿಗೆ ಮಾರ್ಗಸೂಚಿ ಮಾತುಗಳನ್ನಾಡಿ ಅಭಿನಂದಿಸಿದರು. ಪ್ರೊ| ನಾರಾಯಣ ಎಂ. ಹೆಗಡೆ, ಯಕ್ಷಗಾನ ಕಲಾರಂಗದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಬಿರಾಥಿ ವಿಶ್ವನಾಥ್ ನಿರೂಪಿಸಿದರು. ಶಿಬಿರಾಥಿಗಳ ಪರವಾಗಿ ನಳಿನಿ, ಶಬರಿ, ಸುಶ್ಮಿತಾ, ಸೂರಜ್ ಉಮಾ ಅನುಭವ ಹಂಚಿಕೊಂಡರು. ಅರ್ಪಿತಾ ಸ್ವಾಗತಿಸಿದರು. ಸಂಗಮೇಶ ವಂದಿಸಿದರು. ಶಿಬಿರದ ಸಹ ನಿರ್ದೇಶಕರಾಗಿ ಸಹನಾ ಕಾರ್ಯನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.