Dakshina Kannada ಮೀನುಗಾರರಿಂದ ಸಚಿವ ವೈದ್ಯರಿಗೆ ಮನವಿ
Team Udayavani, Nov 22, 2023, 11:32 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿ ಹಾರಕ್ಕೆ ಆಗ್ರಹಿಸಿ, ಮಂಗಳೂರು ಟ್ರಾಲ್‌ಬೋಟ್ ಹಾಗೂ ಪಸೀìನ್ ಮೀನುಗಾರರ ಸಂಘದ ನೇತೃತ್ವದಲ್ಲಿ ಮೀನುಗಾರ ಮುಖಂಡರು ಬುಧವಾರ ಬೆಂಗಳೂರಿನಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಪ್ರಮುಖ ಬೇಡಿಕೆಗಳು
– ಮಂಗಳೂರು ಮೀನುಗಾರಿಕೆ ಬಂದರಿನಲ್ಲಿ ಪ್ರಸ್ತುತ 1,500ಕ್ಕೂ ಅಧಿಕ ಮೀನುಗಾರಿಕೆ ಬೋಟುಗಳಿದ್ದು, ಜಾಗದ ಕೊರತೆ ಎದುರಾಗಿದೆ. ಪ್ರತೀ ವರ್ಷ ಹೂಳೆತ್ತುವ ಕಾರ್ಯ ಮಾಡಿಸಬೇಕು. ಮಂಗಳೂರು ಹಳೆ ಬಂದರು ಮತ್ತು ಮೀನುಗಾರಿಕೆ ಬಂದರಿಗೆ ದಶಕದ ಇತಿಹಾಸವಿದ್ದರೂ ಹೂಳೆತ್ತುವ ಸಮಸ್ಯೆ ನಿರಂತರವಾಗಿ ಉದ್ಭವವಾಗುತ್ತಿದೆ. ಇದಕ್ಕಾಗಿ ಅಲೆ ತಡೆಗೋಡೆಗಳ ಅಧ್ಯಯನ ಮಾಡುವಂತೆ ಆಗ್ರಹಿಸಿದೆ.
– ಮಂಗಳೂರು ಮೀನುಗಾರಿಕೆ ಬಂದರಿನಲ್ಲಿ ಪ್ರತೀ ದಿನ 100 ಕೋಟಿ ರೂ.ಗಳಿಗೂ ಅಧಿಕ ವ್ಯವಹಾರ ನಡೆಯುತ್ತಿದೆ. ಆದರೆ ಮೀನುಗಾರರ ರಕ್ಷಣೆ, ಮಹಿಳಾ ಮೀನುಗಾರರ ಸುರಕ್ಷೆ, ಕಳ್ಳತನ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಸಿಸಿ ಕೆಮರಾ ವ್ಯವಸ್ಥೆ, ಪೊಲೀಸ್ ಸಿಬಂದಿ ನಿಯೋಜಿಸಲು ಆದೇಶ ನೀಡಬೇಕು.
– ರಖಂ ಹಾಗೂ ಕಮಿಷನ್ ಮೀನು ಮಾರಾಟ ಮಂಗಳೂರು ಮೀನುಗಾರಿಕೆ ಬಂದರಿನ ಒಳಭಾಗದಲ್ಲೇ ನಡೆಯುತ್ತಿರುವುದರಿಂದ ಬೇರೆ ರಾಜ್ಯಗಳಿಂದ ಬರುವ ನೂರಾರು ವಾಹನ ಗಳಿಂದ ದಟ್ಟಣೆ ಉಂಟಾಗಿ ದೈನಂದಿನ ಚಟುವಟಿಕೆಗೆ ತೊಡಕಾ ಗುತ್ತಿದೆ. ಇದನ್ನು ಬಂದರಿನಿಂದ ದೂರಕ್ಕೆ ಸ್ಥಳಾಂತರಿಸಬೇಕು.
– 2023ನೇ ಸಾಲಿನಿಂದ ಮೀನುಗಾರಿಕೆ ಇಲಾಖೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಮಗಾರಿಯನ್ನು ಕರ್ನಾಟಕ ಜಲ ಸಾರಿಗೆ ಮಂಡಳಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಮೀನುಗಾರಿಕೆ ಇಲಾಖೆಯ ಕಾಮಗಾರಿಗಳಿಗೆ ಮಂಡಳಿಯಿಂದ ಹೆಚ್ಚುವರಿಯಾಗಿ ಶೇ. 12ರಷ್ಟು ಶುಲ್ಕ ವಸೂಲಿ ಮಾಡುತ್ತಿದ್ದು, ಇದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ. ಮಂಡಳಿ ವಿಧಿಸುತ್ತಿರುವ ಈ ಶುಲ್ಕಕ್ಕೆ ಕಡಿವಾಣ ಹಾಕಲು ಆದೇಶ ನೀಡಬೇಕು.
ಮೀನುಗಾರರ ಮುಖಂಡರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ, ರಾಜೇಶ್ ಉಳ್ಳಾಲ, ಅನಿಲ್ ಕುಮಾರ್, ಮನೋಹರ್ ಬೋಳೂರು, ಹರಿಶ್ಚಂದ್ರ ಮೆಂಡನ್, ಜಗದೀಶ್ ಬಂಗೇರ, ಶಿವಾನಂದ ಬೋಳಾರ, ಅಶ್ರಫ್ ಅಬೂಬಕ್ಕರ್ ಮೊದಲಾದವರು ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.