ಇಳಿಯುತ್ತಿದೆ ಪೆಟ್ರೋಲ್‌, ಡೀಸೆಲ್‌ ದರ

ಚೀನದಲ್ಲಿ ಕೊರೊನಾ ಆತಂಕ

Team Udayavani, Feb 15, 2020, 5:28 AM IST

1402MLR18

ಮಂಗಳೂರು: ಚೀನವನ್ನು ವ್ಯಾಪಿಸಿರುವ ಕೊರೊನಾ ವೈರಸ್‌ ಬಾಧೆಯ ಪರಿಣಾಮ ವಿವಿಧ ದೇಶಗಳ ಆರ್ಥಿಕ ಚಟುವಟಿಕೆಯ ಮೇಲಾಗಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆಯಾಗುತ್ತಿದೆ.

ಕಚ್ಚಾ ತೈಲವನ್ನು ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಚೀನ. ಕೊರೊನಾ ಬಾಧೆಯಿಂದಾಗಿ ಅಲ್ಲಿನ ಹಲವು ಕೈಗಾರಿಕೆಗಳು ಮುಚ್ಚಿವೆ ಹಾಗೂ ಹಲವು ಕಡೆ ಸಾರಿಗೆ ವ್ಯವಸ್ಥೆಯನ್ನೇ ಸ್ಥಗಿತ ಗೊಳಿಸಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಕಚ್ಚಾ ತೈಲದ ಆಮದನ್ನು ಚೀನ ಕಡಿಮೆ ಮಾಡಿದೆ. ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ.

ಚೀನದಲ್ಲಿ ಇನ್ನೂ ಕೂಡ
ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ. ಇದರ ನೇರ ಪರಿಣಾಮ ಅಂ.ರಾ.ಮಾರುಕಟ್ಟೆ ಮೇಲೆ ಬೀರಿದ್ದು, ಕಚ್ಚಾತೈಲ ಮತ್ತು ಡಾಲರ್‌ ಬೆಲೆ ಕಡಿಮೆಯಾಗುತ್ತಿದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಕುಸಿಯುತ್ತಿದೆ.

2 ವಾರದಲ್ಲಿ ಪೆಟ್ರೋಲ್‌ 1.28 ರೂ., ಡೀಸೆಲ್‌ 1.51 ರೂ. ಇಳಿಕೆ ಕಳೆದ ಒಂದು ವಾರಕ್ಕೆ ಹೋಲಿಸಿದರೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಫೆ. 1ರಂದು ಲೀಟರ್‌ಗೆ 74.97 ರೂ. ಇದ್ದ ಪೆಟ್ರೋಲ್‌ ಬೆಲೆ ಫೆ. 14ಕ್ಕೆ 73.69ಕ್ಕೆ ಇಳಿದಿದೆ. ಒಟ್ಟಾರೆ ಎರಡು ವಾರದಲ್ಲಿ 1.28 ರೂ. ಕಡಿಮೆಯಾಗಿದೆ. ಅದೇ ರೀತಿ ಫೆ. 1ರಂದು 67.80 ರೂ. ಇದ್ದ ಡೀಸೆಲ್‌ ಬೆಲೆ ಫೆ. 14ಕ್ಕೆ 66.29 ರೂ.ಗೆ ಇಳಿದಿದೆ. ಅಂದರೆ ಒಂದೇ ವಾರ 1.51 ರೂ. ಕಡಿಮೆಯಾಗಿದೆ. ಉಡುಪಿಯಲ್ಲಿ ಫೆ. 14ರಂದು ಪೆಟ್ರೋಲ್‌ ಬೆಲೆ ಲೀಟರಿಗೆ 73.08 ರೂ., ಡೀಸೆಲ್‌ಗೆ 66.56 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ಗೆ 74.39 ರೂ. ಮತ್ತು ಡೀಸೆಲ್‌ಗೆ 66.97 ರೂ., ಮೈಸೂರಿನಲ್ಲಿ ಪೆಟ್ರೋಲ್‌ಗೆ 73.98 ರೂ., ಡೀಸೆಲ್‌ಗೆ 66.6 ರೂ. ಇತ್ತು.

ಮತ್ತಷ್ಟು ಇಳಿಕೆ ಸಾಧ್ಯತೆ
ಈ ಮಾಸಾರಂಭದಿಂದಲೇ ಪೆಟ್ರೋಲ್‌-ಡೀಸೆಲ್‌ ಬೆಲೆ ಪ್ರತೀ ದಿನ ಇಳಿಮುಖವಾಗುತ್ತಿದೆ. ಚೀನದಲ್ಲಿ ಕೊರೊನಾ ವೈರಸ್‌ ಭೀತಿಯಿಂದಾಗಿ ಅಲ್ಲಿನ ವ್ಯಾಪಾರ-ವಹಿವಾಟು ಕುಸಿದಿರುವುದರ ಪರಿಣಾಮ ಇದು. ಫೆಬ್ರವರಿ ಅಂತ್ಯದ ವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಕಾಣಿಸುತ್ತಿದೆ.
– ಆನಂದ್‌ ಕಾರ್ನಾಡ್‌, ಕರ್ನಾಟಕ ರಾಜ್ಯ ಪೆಟ್ರೋಲಿಯಂ ಫೆಡರೇಶನ್‌ ಕಾರ್ಯದರ್ಶಿ

ಟಾಪ್ ನ್ಯೂಸ್

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಹೊಸ ಬಸ್‌ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.