ಪಿಲಿಕುಳ ಕಂಬಳ: ಇನ್ನೂ ನಿಗದಿಯಾಗದ ದಿನಾಂಕ
ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಪಿಲಿಕುಳ ಕಂಬಳ
Team Udayavani, Jan 8, 2020, 5:12 AM IST
ಮಹಾನಗರ: ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಪಿಲಿಕುಳ ಕಂಬಳವನ್ನು ಈ ವರ್ಷ ಪುನಃರಾರಂಭಿಸುವ ಬಗ್ಗೆ ಪ್ರಸ್ತಾವನೆಯಾಗಿದ್ದರೂ ಈ ಕುರಿತಂತೆ ಜಿಲ್ಲಾಡಳಿತದಿಂದ ಇನ್ನೂ ಸ್ಪಷ್ಟ ನಿರ್ಧಾರ ಹೊರ ಬಿದ್ದಿಲ್ಲ. ಈ ವರ್ಷದ ಕಂಬಳ ಋತು ಮಾರ್ಚ್ ಅಂತ್ಯಕ್ಕೆ ಕೊನೆಗೊಳ್ಳಲಿದ್ದು ಇದ ರೊಳಗೆ ಕಂಬಳ ಆಯೋಜನೆಗೆ ದಿನಾಂಕ ನಿಗದಿ ಯಾಗಬೇಕಾಗಿದೆ. ಈಗಾಗಲೇ ಈ ಋತುವಿನ ಕಂಬಳ ವೇಳಾಪಟ್ಟಿ ನಿಗದಿಯಾಗಿ ಅದರಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಂಬಳ ಈಗಾಗಲೇ ನಡೆಯುತ್ತಿವೆ. ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದರೆ ಈ ಬಾರಿಯೂ ಕಂಬಳ ನಡೆಯವ ಬಗ್ಗೆ ಅನಿಶ್ಚಿತತೆ ಆವರಿಸಿದೆ.
ಪಿಲಿಕುಳದಲ್ಲಿ ಕಂಬಳವನ್ನು ಮರಳಿ ಆರಂಭಿಸಲು ದ.ಕ. ಜಿಲ್ಲಾಡಳಿತ ಒಲವು ತೋರಿ ಜನವರಿ/ಫೆಬ್ರವರಿಯಲ್ಲಿ ಆಯೋಜಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನವೆಂಬರ್ ತಿಂಗಳಿನಲ್ಲಿ ನಡೆದಿದ್ದ ಸಭೆ ಯಲ್ಲಿ ಪಿಲಿಕುಳದಲ್ಲಿ ಜಿಲ್ಲಾಡಳಿತ ವತಿಯಿಂದ ಕಂಬಳ ಆಯೋಜನೆ ಬಗ್ಗೆ ಚರ್ಚೆ ನಡೆದಿತ್ತು.
ಕಂಬಳ ಆಯೋಜನೆಗೆ ಬಗ್ಗೆ ಸರಕಾರ ದಿಂದ ಸೂಕ್ತ ಮಾಹಿತಿ ಪಡೆದುಕೊಂಡು ಅನುದಾನದ ಬಗ್ಗೆ ಸೂಕ್ತ ಪ್ರಸ್ತಾವ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಜಿಲ್ಲಾಡಳಿತದಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.
2014ರಲ್ಲಿ ಕೊನೆಯ ಕಂಬಳ
ಪಿಲಿಕುಳದಲ್ಲಿ 2014ರಲ್ಲಿ ಕೊನೆಯ ಕಂಬಳ ನಡೆದಿತ್ತು. ಆಗ 85 ಜತೆ ಕೋಣ ಗಳು ಇದರಲ್ಲಿ ಪಾಲ್ಗೊಂಡಿದ್ದವು. ಗುತ್ತಿನಮನೆಯ ಮುಂಭಾಗದಲ್ಲಿರುವ “ನೇತ್ರಾವತಿ-ಫಲ್ಗುಣಿ’ ಜೋಡು ಕರೆಯಲ್ಲಿ ಕಂಬಳ ವಿಜೃಂಭಣೆಯಿಂದ ನಡೆದಿತ್ತು. ಅನಂತರ ಕಂಬಳದ ವಿರುದ್ಧ ಪೆಟಾ ಸಂಸೆœ ನ್ಯಾಯಾಲಯದಲ್ಲಿ ಕಾನೂನು ಸಮರ ಆರಂಭಿಸಿದ ಪರಿಣಾಮ ಜಿಲ್ಲಾ ಡಳಿತ ಪಿಲಿಕುಳದಲ್ಲಿ ಕಂಬಳವನ್ನು ಸ್ಥಗಿತ ಗೊಳಿಸಿತ್ತು.
ಕಳೆದ ವರ್ಷ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಕಂಬಳ ಆಯೋಜನೆಗೆ ಒಲವು ತೋರಿದ್ದರು. ಜಿಲ್ಲಾಡಳಿತ, ಜಿಲ್ಲಾ ಕಂಬಳ ಸಮಿತಿ ಮತ್ತು ಪಿಲಿಕುಳದ ನೇತೃತ್ವದಲ್ಲಿ ಪರಿಶೀಲಿಸಿಲನೆ ನಡೆಸಿ ಡಿ. 22ರಂದು ಕಂಬಳ ನಡೆಸಲು, ಅನುದಾನಕ್ಕೆ ಸರ ಕಾರಕ್ಕೆ ಕೋರಿಕೆ ಸಲ್ಲಿಸಲಾಗಿತ್ತು. ಆದರೆ ಸರಕಾರದಿಂದ ಅನುದಾನ ಬಂದಿರಲಿಲ್ಲ. ಕಂಬಳ ಕರೆ ನಿರ್ಮಾಣವಾಗದೆ ಕಾರ್ಯ ಕ್ರಮ ಆಯೋಜನೆ ಸಾಧ್ಯವಿಲ್ಲ ಎಂದು ಜಿಲ್ಲಾಡಳಿತ ಪ್ರಸ್ತಾವವನ್ನು ಕೈಬಿಟ್ಟಿತ್ತು.
ಗುತ್ತಿನಮನೆ ಮುಂಭಾಗದಲ್ಲಿರುವ ಕರೆಯಲ್ಲಿ 5 ವರ್ಷಗಳಿಂದ ಕಂಬಳ ನಡೆಸದೆ ಇರುವುದರಿಂದ ಹೂಳು ತುಂಬಿದೆ. ಗಿಡ-ಗಂಟಿ ಬೆಳೆದಿವೆ. ಗದ್ದೆ ಯಲ್ಲಿ ಭತ್ತ ಕೃಷಿಯನ್ನೂ ಮಾಡಿಲ್ಲ. ಇದರಿಂದ ಕರೆ ಸಂಪೂರ್ಣವಾಗಿ ಪಾಳು ಬಿದ್ದಿದೆ. ಕಂಬಳ ಕರೆಯ ಮರು ನಿರ್ಮಾಣ, ನೀರು ಹಾಗೂ ಇತರ ಸೌಲಭ್ಯಗಳನ್ನು ವ್ಯವಸ್ಥಿಗೊಳಿಸಬೇಕು. ಈ ವ್ಯವಸ್ಥೆಗಳಿಗೆ ಕನಿಷ್ಠ 20 ಲಕ್ಷ ರೂ.ಅಗತ್ಯ ವಿದೆ. ಇತರ ಖರ್ಚು-ವೆಚ್ಚ ಸೇರಿ ಕಂಬಳ ಆಯೋಜನೆಗೆ ಕನಿಷ್ಠ ಒಟ್ಟು 40 ಲಕ್ಷ ರೂ. ಅನುದಾನ ಅಗತ್ಯವಿದೆ. ಕರೆ ಕಂಬಳಕ್ಕೆ ಯೋಗ್ಯವಾಗಿ ರೂಪುಗೊಳ್ಳದಿದ್ದರೆ ಕೋಣ ಗಳನ್ನು ತರಲು ಯಜಮಾನರು ಹಿಂದೇಟು ಹಾಕುವ ಸಾಧ್ಯತೆಗಳಿವೆ.
ಸಾಕಷ್ಟು ಸಿದ್ಧತೆ ಅಗತ್ಯವಿದೆ
ಪಿಲಿಕುಳದಲ್ಲಿ ಕಳೆದ 5 ವರ್ಷಗಳಿಂದ ಕಂಬಳ ನಡೆದಿಲ್ಲ. ಕಲ್ಲು- ಮುಳ್ಳು ತುಂಬಿ ಕೋಣಗಳು ಕಾಲಿಡಲೂ ಆಗದಂತಹ ಪರಿಸ್ಥಿತಿ ಇದೆ. ಅದುರಿದರಿಂದ ಕಂಬಳಕ್ಕೆ ಇದನ್ನು ಮರು ರೂಪಿಸಲು ಸಾಕಷ್ಟು ಕಾಲಾವಕಾಶ ಅಗತ್ಯವಿದೆ. ಸುತ್ತಮುತ್ತಲ ಪ್ರದೇಶ ಸಮತಟ್ಟು ಮಾಡಬೇಕಾಗಿದೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ತಿಳಿಸಿದ್ದಾರೆ.
ದಿನಾಂಕ ನಿಗದಿಯಾಗಿಲ್ಲ
ಪಿಲಿಕುಳದಲ್ಲಿ ಕಂಬಳ ಮಾಡುವ ಪ್ರಸ್ತಾವನೆ ಇದೆ. ಕಂಬಳಕ್ಕೆ ದಿನ ನಿಗದಿಯಾಗಿಲ್ಲ. ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಕಂಬಳ ಸಮಿತಿಯವರ ಜತೆ ಚರ್ಚೆ ನಡೆಸಿ ಕಂಬಳ ಆಯೋಜನೆ ಕುರಿತು ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು.
- ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.