Pilikula: ಇಂದು ಚಂದ್ರಯಾನ -3ರ ವೀಕ್ಷಣೆ
Team Udayavani, Aug 22, 2023, 11:41 PM IST
ಮಂಗಳೂರು: ಇಡೀ ದೇಶವು ಕಾತರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ -3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಆ. 23ರಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ವ್ಯವಸ್ಥೆಯನ್ನು ಮಾಡುತ್ತಿದೆ.
ಸಂಜೆ 5.20ರಿಂದ 6.30 ಗಂಟೆಯವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬಂದಿ ಇದರ ಬಗೆಗಿನ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ಆಸಕ್ತರಿಗೆ ವಿವರಿಸುವರು. ಇಂತಹ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುವ ಪ್ರಯತ್ನ ಮಾಡುವಂತೆ ವಿನಂತಿಸಲಾಗಿದೆ.
ಪಿಪಿಸಿಯಲ್ಲಿ
ನೇರ ಪ್ರಸಾರ
ಉಡುಪಿ:ಪೂರ್ಣ ಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಚಂದ್ರಯಾನ-3ರ ಸೇಫ್ ಲ್ಯಾಂಡಿಂಗ್ ಕಾರ್ಯಕ್ರಮ ವೀಕ್ಷಣೆಗಾಗಿ ಆ. 23ರ ಸಂಜೆ 5.30ರಿಂದ ಕಾಲೇಜಿನ ಆವರಣದಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.