ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ
Team Udayavani, Feb 27, 2020, 5:06 AM IST
ಸಚಿವ ಎಸ್.ಟಿ. ಸೋಮಶೇಖರ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಸಹಕಾರಿಗಳಿಂದ ಸಲಹೆಗಳನ್ನು ಸ್ವೀಕರಿಸಿ ಸಮಗ್ರ ಅಭಿವೃದ್ಧಿಗೆ ಕಾರ್ಯ ಯೋಜನೆ ಹಾಕಿಕೊಳ್ಳಲಾಗುವುದು. ಸಲಹೆ ಗಳಿದ್ದರೆ ನನಗೆ ನೇರವಾಗಿ ಅಥವಾ ಶಾಸಕರ ಮೂಲಕ ಕಳುಹಿಸಿಕೊಡಬಹುದು ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯನ್ನು ಬಲ ವರ್ಧನೆ ಮಾಡಲು ಎಲ್ಲ ಪ್ರಯತ್ನಗಳನ್ನು ನಡೆಸ ಲಿದ್ದು, ಈ ಬಗ್ಗೆ ಶೀಘ್ರದಲ್ಲೇ ಎಪಿಎಂಸಿ ವ್ಯಾಪ್ತಿಗೆ ಸೇರಿದ ನಾಲ್ವರು ಶಾಸಕರು ಹಾಗೂ ಅಧಿಕಾರಿಗಳ ಜತೆಯಲ್ಲಿ ವಿಶೇಷ ಸಭೆ ನಡೆಸಲಿದ್ದೇನೆ ಎಂದರು.
ಸಾಲ ಮನ್ನಾ ವಿಚಾರದಲ್ಲಿ ಸರಿಯಾಗಿ ಹಣ ಬಿಡುಗಡೆ ಆಗಿಲ್ಲ ಎಂದು ಹಲವು ಮಂದಿ ದೂರು ನೀಡಿದ್ದಾರೆ. ಜತೆಗೆ ಬಡ್ಡಿ ಮನ್ನಾ ಯೋಜನೆಯಲ್ಲಿ ಮಾ. 31ರೊಳಗೆ ಅಸಲು ಪಾವತಿಸ ಬೇಕು ಎಂಬ ಗಡುವನ್ನು ವಿಸ್ತರಿಸಲು ಅವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ. ಎಲ್ಲ ವಿಚಾರಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ| ವೈ. ಭರತ್ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು. ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸ್ವಾಗತಿಸಿದರು. ಕಸ್ತೂರಿ ಪಂಜ ವಂದಿಸಿದರು. ಸುಧೀರ್ ಶೆಟ್ಟಿ ಕಣ್ಣೂರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.