ಮುಂಗಾರಿನ ನಾಟಿ ಹಾಗೂ ಕೃಷಿ ಸಂವಾದ ಕಾರ್ಯಕ್ರಮ
Team Udayavani, Oct 5, 2017, 11:18 AM IST
ಕೊಣಾಜೆ: ನಮ್ಮ ಕೃಷಿ ಸಂಸ್ಕೃತಿಯ ಪರಿಚಯ ಇಂದಿನ ಯುವ ಜನತೆಗೆ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ಸರಕಾರಿ
ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳುವಾರ್ಡ್ ದತ್ತು ಸ್ವೀಕರಿಸುವ ಮೂಲಕ ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯ ಮಾಡುವುದರೊಂದಿಗೆ ಕೃಷಿ ಜೀವನದ ಪರಿಚಯವನ್ನು ವಿದೇಶಿ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಕೆ.ಭೈರಪ್ಪ ಅಭಿಪ್ರಾಯಪಟ್ಟರು.
ಡಾ| ದಯಾನಂದ ಪೈ, ಪಿ.ಸತೀಶ್‌ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಸಂಸ್ಥೆ, ರಾಜ್ಯ ರೈತ ಸಂಘ ಹಸಿರು ಸೇನೆ, ಮಾಧ್ಯಮ ಕೇಂದ್ರ ತೊಕ್ಕೊಟ್ಟು, ಉಳ್ಳಾಲ, ಮಂಗಳೂರು ವಿಶ್ವವಿದ್ಯಾನಿಲಯದ ಅಂತರಾಷ್ಟ್ರೀಯ ವಿದ್ಯಾರ್ಥಿ ಕೇಂದ್ರ ಮಂಗಳಗಂಗೋತ್ರಿ ಇದರ ಜಂಟಿ ಆಶ್ರಯದಲ್ಲಿ ಕೊಣಾಜೆ ಮೇಲ್ಮನೆ ಗಟ್ಟಿ ಮೂಲೆಯಲ್ಲಿವಿದ್ಯಾರ್ಥಿಗಳ ನಡಿಗೆ ರೈತರ ಹಡೀಲು ಭೂಮಿಯ ಕಡೆ ಅಂದೋಲನದ ಅಂತಿಮ ಸುತ್ತಿನ ಮುಂಗಾರಿನ ನಾಟಿ ಹಾಗೂ ಕೃಷಿ ಸಂವಾದಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ರೈತರ ಸಂಕಷ್ಟಗಳ ಪರಿಚಯದೊಂದಿಗೆ ಕೃಷಿ ಚಟುವಟಿಕೆಗಳ ಮೂಲಕ ಕೃಷಿ ಶಿಕ್ಷಣವನ್ನು ಪಡೆಯುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವುದು ಮುಖ್ಯವಾಗಿದ್ದು, ಇಂತಹ ಕಾರ್ಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಂದ ಆಗಬೇಕಾಗಿದೆ ಎಂದರು.
ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಉದಯಶಂಕರ್ ಎಚ್.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಮಂಗಳೂರು ವಿಶ್ವವಿದ್ಯಾನಿಲಯದ ಅಂತರಾಷ್ಟ್ರೀಯ ವಿದ್ಯಾರ್ಥಿ ಕೇಂದ್ರದ ನಿರ್ದೇಶಕ ಪ್ರೊ| ರವಿಶಂಕರ್ ರಾವ್, ಹಿರಿಯ ಪ್ರಗತಿಪರ ಕೃಷಿಕ ಬೂಬ ಗಟ್ಟಿ ಕಲ್ಕಾರ್, ರಿಫಾಯಿ ಜುಮ್ಮಾ ಮಸೀದಿಯ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್, ಬೆಳ್ಮ ಮಾಗಣೆ ಗಟ್ಟಿ ಸಮಾಜದ ಅಧ್ಯಕ್ಷ ಪದ್ಮನಾಭ ಗಟ್ಟಿ, ರೈತ ಸಂಘ ಹಸಿರುಸೇನೆಯ ಮನೋಹರ ಶೆಟ್ಟಿ ನಡಿಕಂಬ್ಲಿಗುತ್ತು, ಎಂ.ಕೆ. ಇದಿನಬ್ಬ, ಸುದೀಶ್ ಮಯ್ಯ ಬಂಟ್ವಾಳ ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರೊ| ರಾಜಶೇಖರ್ ಹೆಬ್ಟಾರ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ
ಡಾ| ನವೀನ್ ಎನ್. ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು. ಯೋಜನಾಧಿಕಾರಿ ಪ್ರೊ| ಜೆಫ್ರಿ ರಾಡ್ರಿಗಸ್ ವಂದಿಸಿದರು. ಯೋಜನಾಧಿಕಾರಿ ಡಾ| ನಾಗವೇಣಿ ಮಂಚಿ ಕಾರ್ಯಕ್ರಮ ಸಂಯೋಜಿಸಿದರು.
ಕೃಷಿ ಸಂಸ್ಕೃತಿ ಪಠ್ಯದೊಂದಿಗೆ ಸೇರಲಿ
ಕೊಣಾಜೆ ಗ್ರಾಮದ ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಸುತ್ತಿರುವ ಡಾ| ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಕಾರ್ಯ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಅನುಕರಣೀಯ. ಈ ರೀತಿಯ ಕೃಷಿ ಚಟುವಟಿಕೆಗಳು ಶೈಕ್ಷಣಿಕ ಪಠ್ಯದ ಅವಿಭಾಜ್ಯ ಅಂಗವಾಗಿರಬೇಕು. ನಶಿಸುತ್ತಿರುವ ಕೃಷಿ ಸಂಸ್ಕೃತಿಯ ಮೂಲ ಪಾಠವನ್ನು ಶೈಕ್ಷಣಿಕ ಪಠ್ಯದೊಂದಿಗೆ ಹಾಗೂ ವಿಶ್ವ ವಿದ್ಯಾನಿಲಯಗಳ ಪಠ್ಯದೊಂದಿಗೆ ಸೇರ್ಪಡೆಗೊಳಿಸುವಂತೆ ಸರಕಾರದ ಗಮನ ಸೆಳೆಯುತ್ತೇನೆ.
ಯು.ಟಿ.ಖಾದರ್,ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.