ಮೂವರು ಹಿಂದೂ ಮುಖಂಡರ ಹತ್ಯೆಗೆ ಸಂಚು ?
Team Udayavani, Jan 11, 2019, 5:07 AM IST
ಮಂಗಳೂರು: ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್ ಸಹಿತ ಮೂವರು ಹಿಂದೂ ಮುಖಂಡರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹಬ್ಬಿದ್ದು, ಮೂವರೂ ನಾಯಕರು ತಮ್ಮ ಸುರಕ್ಷೆ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆೆ.
ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನುಸಾರ ಈ ಮೂವರ ಸುರಕ್ಷೆಗೆ ಪೊಲೀಸ್ ಇಲಾಖೆ ಎಚ್ಚರ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಇದನ್ನು ದೃಢಪಡಿಸಲು ನಿರಾಕರಿಸಿದ್ದಾರೆ.
ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಅವರಿಗೆ ಗುರುವಾರ ಬೆಳಗ್ಗೆ ಪೊಲೀಸ್ ಇಲಾಖೆಯಿಂದ ಫೋನ್ ಕರೆ ಬಂದಿದ್ದು, “ಎಲ್ಲೂ ಹೋಗಬಾರದು; ಹೆಚ್ಚು ಅಲರ್ಟ್ ಆಗಿರಬೇಕು. ಕಲ್ಲಡ್ಕ ಡಾ| ಪ್ರಭಾಕರ ಭಟ್ ಅವರು ಕೂಡ 2- 3 ದಿನ ಇಲ್ಲಿರಬಾರದು. ವಿಹಿಂಪ ಮುಖಂಡ ಜಗದೀಶ್ ಶೇಣವ ಅವರೂ ಎಚ್ಚರಿಕೆಯಿಂದ ಇರಬೇಕು’ ಎಂದು ಸೂಚಿಸಲಾಗಿತ್ತು ಎನ್ನಲಾಗಿದ್ದು, ಆ ಬಳಿಕ ಹಲವು ಬೆಳವಣಿಗೆಗಳು ನಡೆದವು.
ಬೆಂಗಳೂರಿಗೆ ಕಾರಿನಲ್ಲಿ ತೆರಳಬೇಕಿದ್ದ ಡಾ| ಪ್ರಭಾಕರ ಭಟ್ ಅವರನ್ನು ಪೊಲೀಸ್ ಬೆಂಗಾವಲಿನಲ್ಲಿ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಯಿತು ಎನ್ನಲಾಗಿದೆ. ಅಲ್ಲಿಂದ ಅವರನ್ನು ಸುರಕ್ಷಿತ ಜಾಗಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಜಗದೀಶ್ ಶೇಣವ ಮತ್ತು ಶರಣ್ ಪಂಪ್‌ವೆಲ್ ಅವರೂ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಕಲ್ಲಡ್ಕ ಡಾ| ಪ್ರಭಾಕರ ಭಟ್ ಮತ್ತು ಜಗದೀಶ್ ಶೇಣವ ಅವರಿಗೆ ಗನ್ ಮ್ಯಾನ್ ಭದ್ರತೆ ಇದ್ದು, ಹೊರಗಡೆ ಓಡಾಡುವಾಗ ಬೆಂಗಾವಲು ಪೊಲೀಸ್ ಜತೆಗಿರುತ್ತಾರೆ. ಶರಣ್ ಪಂಪ್‌ವೆಲ್‌ಗೆ ಮಾತ್ರ ಗನ್ ಮ್ಯಾನ್ ಭದ್ರತೆ ಇರುವುದಿಲ್ಲ. ರಾಜ್ಯದ ಕರಾವಳಿಯ ಹಿಂದೂ ಮುಖಂಡರ ಹತ್ಯೆಗೆ ಕೇರಳ ಮೂಲದವರಿಂದ ಆತ್ಮಹತ್ಯಾ ದಾಳಿಗೆ ಸಂಚು ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬೆದರಿಕೆ ಬಗ್ಗೆ ಮಾಧ್ಯಮ ವರದಿ ಗಮನಿಸಿದ್ದೇವೆ. ಆದರೆ ಹತ್ಯೆ ಸಂಚಿನ ಬಗ್ಗೆ ನಮಗೇನೂ ಮಾಹಿತಿ ಇಲ್ಲ.
ಹನುಮಂತರಾಯ, ಡಿಸಿಪಿ
ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಈಗಾಗಲೇ ಗನ್‌ಮ್ಯಾನ್ ಭದ್ರತೆ ಇದ್ದು, ಅದನ್ನು ಗಮನಿಸಿ ಯಾರೋ ಮಾಧ್ಯಮಗಳಿಗೆ ತಿಳಿಸಿರಬಹುದು.
ಲಕ್ಷ್ಮೀಪ್ರಸಾದ್, ಎಸ್‌ಪಿ
ನನಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರು ಮಾಹಿತಿ ನೀಡಿರುವುದು ಹೌದು, ಈ ಹಿನ್ನೆಲೆಯಲ್ಲಿ ಎಚ್ಚರ ವಹಿಸಲಾಗಿದೆೆ. ಐವರು ಗನ್‌ಮ್ಯಾನ್ ಭದ್ರತೆ ಇದ್ದು, ಈಗಲೂ ಅಷ್ಟೇ ಇದ್ದಾರೆ.
ಡಾ| ಪ್ರಭಾಕರ ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.