ಕೆರೆ ನುಂಗುವ ಸಂಚು: ಪಹಣಿ ಪತ್ರದಲ್ಲಿ ಅಕ್ರಮ ತಿದ್ದುಪಡಿ


Team Udayavani, Mar 29, 2018, 12:57 PM IST

29-March-9.jpg

ಕಡಬ: ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಹಳೆ ಸ್ಟೇಶನ್‌ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರಾಪ್ಪಾಡಿ ಗ್ರಾ.ಪಂ. ವತಿಯಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಕುಟ್ರಾಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆ ಸ್ಟೇಶನ್‌ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ಬದಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂಚಾಯತ್‌ ವತಿಯಿಂದ ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್‌ ಹಾಗೂ ಕಡಬ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿ 1 ತಿಂಗಳು ಕಳೆದರೂ ಇದುವರೆಗೆ ಕಂದಾಯ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಪಂಚಾಯತ್‌ ಆಡಳಿತ ಮಂಡಳಿಯಿಂದ ದೂರು ವ್ಯಕ್ತವಾಗಿದೆ.

ಕೆರೆ ಕಬಳಿಸುವ ಸಂಚು
ಹಳೆಯ ಕಡತಗಳಲ್ಲಿ ಹಾಗೂ ಪಹಣಿ ಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಾಗಿರುವ ಈ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎನ್ನುವುದು ಸ್ಥಳೀಯರ ಆರೋಪ. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಒಂದು ಭಾಗದಲ್ಲಿ ಕಲ್ಲು, ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಗ್ರಾಮಸ್ಥರಿಗೆ ಕೆರೆಯನ್ನು ಉಳಿಸಿಕೊಡಬೇಕು ಎನ್ನುವುದು ಸಾರ್ವಜನಿಕರ ಆಶಯ.

‌ಕಣ್ತಪ್ಪಿನಿಂದ ಆಗಿರಬಹುದು
ಕೆರೆಯನ್ನು ಸರಕಾರಿ ಜಮೀನು ಎಂದು ತಿದ್ದುಪಡಿ ಮಾಡಲು ಖಂಡಿತವಾಗಿಯೂ ಅವಕಾಶವಿಲ್ಲ. ಕಣ್ತಪ್ಪಿನಿಂದ ತಪ್ಪುಗಳು ನಡೆದಿರಲೂ ಬಹುದು. ಈ ಕುರಿತು ಪರಿಶೀಲನೆ ನಡೆಸಿ ತಪ್ಪಾಗಿದ್ದರೆ ಸರಿಪಡಿಸುವ ಕುರಿತು ಕಂದಾಯ ಇಲಾಖೆ ಮೇಲಧಿಕಾರಿಗಳಿಗೆ ವರದಿ ನೀಡಲಾಗುವುದು.
– ಕೊರಗಪ್ಪ ಹೆಗ್ಡೆ,
ಕಂದಾಯ ನಿರೀಕ್ಷಕರು, ಕಡಬ

ನೆನಪೋಲೆ ಕಳುಹಿಸುತ್ತೇವೆ
ಹಳೆಯ ಕೈಬರಹದ ಪಹಣಿಪತ್ರದಲ್ಲಿ ಕೆರೆ ಪರಂಬೋಕು ಎಂದು ನಮೂದಾಗಿರುವುದನ್ನು ಅಕ್ರಮವಾಗಿ ಸರಕಾರಿ ಜಮೀನು ಎಂದು ತಿದ್ದಿರುವುದು ತಿಂಗಳ ಹಿಂದೆ ನಮ್ಮ ಗಮನಕ್ಕೆ ಬಂದ ಕೂಡಲೇ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿ ಹಾಗೂ ಕಡಬ ತಹಶೀಲ್ದಾರರಿಗೆ ದೂರು ನೀಡಿ, ತಪ್ಪನ್ನು ಸರಿಪಡಿಸಿಕೊಡಬೇಕೆಂದು ಒತ್ತಾಯಿಸಿದ್ದೇವೆ. ಗ್ರಾಮದ ವ್ಯಾಪ್ತಿಯ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಅಂತರ್ಜಲಮಟ್ಟ ಏರಿಕೆಯಾಗಲು ಪ್ರಯತ್ನಿಸಬೇಕೆನ್ನುವ ಸೂಚನೆ ಸರಕಾರದಿಂದ ಇದೆ. ನಮ್ಮ ದೂರಿಗೆ ಕಂದಾಯ ಇಲಾಖೆಯಿಂದ ಇದುವರೆಗೆ ಯಾವುದೇ ಉತ್ತರ ಬಂದಿಲ್ಲ. ಮತ್ತೆ ನೆನಪಿನೋಲೆ ಕಳುಹಿಸಿ ಕಂದಾಯ ಅಧಿಕಾರಿಗಳ ಗಮನ ಸೆಳೆಯಲಾಗುವುದು.
– ವಿಲ್ಫ್ರೆಡ್  ಲಾರೆನ್ಸ್‌ ರೋಡ್ರಿಗಸ್‌,
ಕುಟ್ರಾಪ್ಪಾಡಿ ಪಿಡಿಒ

 ನಾಗರಾಜ್‌ ಎನ್‌.ಕೆ. ಕಡಬ

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.