ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ
Team Udayavani, Aug 31, 2022, 10:07 AM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಮಂಗಳೂರು ಸಜ್ಜುಗೊಂಡಿದೆ. ಸೆ. 2ರಂದು ನಡೆಯುವ ಪ್ರಧಾನಿಯವರ ಕಾರ್ಯಕ್ರಮಕ್ಕೆ ಸಿದ್ಧತೆ ಅಂತಿಮ ಹಂತಕ್ಕೆ ತಲುಪಿದೆ.
ಸಿದ್ಧತೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕೇಂದ್ರ ಸಚಿವರಿಂದ ಪರಿಶೀಲನೆ
ಕೇಂದ್ರ ನೌಕಾ ಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ, ನವಮಂಗಳೂರು ಬಂದರಿನಲ್ಲಿ ಹಾಗೂ ಗೋಲ್ಡ್‌ಫಿಂಚ್ ಮೈದಾನದಲ್ಲಿ ಪ್ರಧಾನಿಯವರ ಕಾರ್ಯಕ್ರಮಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಮಂಗಳವಾರ ಪರಿಶೀಲಿ ಸಿದರು. ಬಳಿಕ ಸಭೆ ನಡೆಸಿ ಅವಶ್ಯ ಸೂಚನೆಗಳನ್ನು ನೀಡಿದರು.
ಪ್ರಧಾನಿಯವರ ಕಾರ್ಯಕ್ರಮ ದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹೊÉàಟ್, ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಮತ್ತು ಶಾಸಕರು ಉಪಸ್ಥಿತರಿರುತ್ತಾರೆ.
ಪ್ರಧಾನಿ ಕಾರ್ಯಕ್ರಮ
ಮಧ್ಯಾಹ್ನ 1 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು ನವಮಂಗಳೂರು ಬಂದರಿಗೆ ತೆರಳಿ ವಿವಿಧ ಯೋಜನೆ ಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ಬಳಿಕ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುವರು.
ಎಸ್‌ಪಿಜಿ ತಂಡ ಆಗಮನ
ಪ್ರಧಾನಿಯವರ ಭದ್ರತಾ ವ್ಯವಸ್ಥೆಯ ನಿಯೋಜನೆಗೊಂಡಿರುವ ಎಸ್ ಪಿಜಿಯ (ಸ್ಪೆಷಲ್ ಪ್ರೊಟೆ ಕ್ಷನ್ ಗ್ರೂಪ್) ಪೂರ್ಣ ಪ್ರಮಾಣದ ತಂಡ ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ಆರಂಭಿಸಿದೆ.
1.5 ಲಕ್ಷಕ್ಕೂ ಅಧಿಕ ಮಂದಿಗೆ ಆಹಾರ ಮತ್ತು ಪಾನೀಯ ವ್ಯವಸ್ಥೆ ಮಾಡಲಾಗಿದೆ.
ಪರಶುರಾಮನ ವಿಗ್ರಹ ಸ್ಮರಣಿಕೆ
ಪ್ರಧಾನಿ ಮೋದಿಯವರಿಗೆ ಪರಶುರಾಮ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ದ.ಕ., ಉಡುಪಿ ಸೇರಿದಂತೆ ಕರಾವಳಿ ಪ್ರದೇಶ ಪರಶುರಾಮ ಸೃಷ್ಟಿಯಾಗಿದೆ. ವಿಷ್ಣುವಿನ ಅವತಾರವಾಗಿರುವ ಪರಶುರಾಮರು ಕೊಡಲಿ ಬೀಸಿ ಕಡಲು ಹಿಂದೆ ಸರಿಯುವಂತೆ ಮಾಡಿ ಕರಾವಳಿಯನ್ನು ಸೃಷ್ಟಿಸಿದ ಐತಿಹ್ಯವಿದೆ. ಈ ಹಿನ್ನೆಲೆಯಲ್ಲಿ ಪರಶುರಾಮ ಸೃಷ್ಟಿ ಕರಾವಳಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಪರಶುರಾಮ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ಮೂರ್ತಿ 2.5 ಅಡಿ ಎತ್ತರವಿದ್ದು ಉಡುಪಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.