ಇಂದು ಪ್ರಧಾನಿಯವರ ಮಹತ್ವದ ವಿಸಿ : ಮಂಗಳೂರಿನಿಂದ ಸಿಎಂ ಭಾಗಿ

Team Udayavani, Apr 27, 2022, 7:43 AM IST

thumb 2

ಮಂಗಳೂರು: ಕೊರೊನಾ 4ನೇ ಅಲೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಲಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಬುಧವಾರ ಮಹತ್ವದ ಸಭೆ ನಡೆಸಲಿದ್ದಾರೆ.

ದಕ್ಷಿಣ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಯವರು ದ.ಕ. ಜಿ.ಪಂ.ನ ಸಭಾಂಗಣದಲ್ಲಿ ಪ್ರಧಾನಿ ಜತೆಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಸಭೆ ನಡೆಯಲಿದೆ.

ಕೊರೊನಾ 4ನೇ ಅಲೆಯ ಹಿನ್ನೆಲೆಯಲ್ಲಿ ಪ್ರಧಾನಿಯವರ ವೀಡಿಯೋ ಸಂವಾದ ಮಹತ್ವ ಪಡೆದುಕೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಇರುವ ಕೊರೊನಾ ಸೋಂಕು ಸ್ಥಿತಿಗತಿ ಹಾಗೂ ಮುನ್ನಚ್ಚರಿಕೆ ಸಿದ್ಧತೆಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆಯಲಿದ್ದು, ತಡೆ‌ಗಟ್ಟುವ ನಿಟ್ಟಿನಲ್ಲಿ ಮಹತ್ವದ ಸೂಚನೆಗಳನ್ನು ನೀಡುವ ಸಾಧ್ಯತೆಗಳಿವೆ. ವೀಡಿಯೋ ಕಾನೆರನ್ಸ್‌ಗಾಗಿ ವ್ಯಾಪಕ ಸಿದ್ಧತೆಗಳನ್ನು ಮಾಡಲಾಗಿದೆ.

2021ರ ಎ. 8ರಂದು ದ.ಕ. ಜಿ.ಪಂ.ನ ವೀಡಿಯೋ ಕಾನ್ಫರೆನ್ಸ್‌ ಸಭಾಂಗಣದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಜತೆ ಕೊರೊನಾ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ಜತೆ ವೀಡಿಯೋ ಸಂವಾದ ಆಯೋಜನೆಗೊಂಡಿದ್ದರೂ ಕೊನೆಯ ಕ್ಷಣದಲ್ಲಿ ರದ್ದುಗೊಂಡಿತ್ತು.

ಸಿಎಂ ಪ್ರವಾಸ ವಿವರ
ಮುಖ್ಯಮಂತ್ರಿಯವರ ಬುಧವಾರದ ದ.ಕ. ಜಿಲ್ಲಾ ಪ್ರವಾಸ ಕಾರ್ಯಕ್ರಮ ಪರಿಷ್ಕರಣೆಗೊಂಡಿದೆ. ಬೆಳಗ್ಗೆ 10.20ಕ್ಕೆ ಬೆಂಗಳೂರಿನಿಂದ ಹೊರಟು 11.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

11.50ಕ್ಕೆ ಜಿ.ಪಂಗೆ ಆಗಮಿಸುವರು. ಅಪರಾಹ್ನ 3 ಗಂಟೆಗೆ ಮೂಡುಬಿದಿರೆಗೆ ತೆರಳಿ ಅಲ್ಲಿನ ಎಕ್ಸಲೆಂಟ್‌ ಪಿ.ಯೂ. ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡ ಉದ್ಘಾಟನೆ, 3.30ಕ್ಕೆ ಜೈನ ಬಸದಿಗೆ ಭೇಟಿ, 3.50ಕ್ಕೆ ಮೂಡುಬಿದಿರೆಯ ಪ್ರಸ್‌ಕ್ಲಬ್‌ ಆವರಣದಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವರು.

ಸಂಜೆ 4ರಿಂದ 5.30ರ ವರೆಗೆ ಮೂಡುಬಿದಿರೆಯ ಆಡಳಿತ ಸೌಧದ ಮುಂಭಾಗದಲ್ಲಿ ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 5.40ಕ್ಕೆ ರಸ್ತೆ ಮೂಲಕ ಬಜಪೆಗೆ ಆಗಮಿಸಿ 6.50ಕ್ಕೆ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.ಸಚಿವರಾದ ವಿ. ಸೋಮಣ್ಣ,ಸುನೀಲ್‌ ಕುಮಾರ್‌ ಅವರು ಕಾರ್ಯ ಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.