ಪೊಳಲಿ: ನಾಳೆಯಿಂದ ಬ್ರಹ್ಮಕಲಶೋತ್ಸವ ಸಂಭ್ರಮ


Team Udayavani, Mar 3, 2019, 12:30 AM IST

0203mlr33-polali-main.jpg

ಮಂಗಳೂರು: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಂಡಿದೆ. ಮಾ. 4ರಿಂದ 13ರ ವರೆಗೆ ದುರ್ಗಾಪರಮೇಶ್ವರೀ, ರಾಜರಾಜೇಶ್ವರೀ, ಮಹಾಗಣಪತಿ, ಸುಬ್ರಹ್ಮಣ್ಯ, ಭದ್ರಕಾಳಿ ದೇವರ ಪುನಃ ಪ್ರತಿಷ್ಠೆ, ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ನಡೆಯಲಿದೆ.

ಸುಮಾರು 200 ವರ್ಷಗಳ ಬಳಿಕ ದೇವಸ್ಥಾನವನ್ನು ಸಂಪೂರ್ಣವಾಗಿ ನವೀಕರಿಸಿ ಬ್ರಹ್ಮಕಲಶೋತ್ಸವ ಜರಗುತ್ತಿ
ರುವುದರಿಂದ ಈ ಬಾರಿಯ ಬ್ರಹ್ಮಕಲಶೋತ್ಸವ ಅಪೂರ್ವ ಸಂಭ್ರಮವಾಗಿದೆ.

20 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ದೇವಾಲಯ ಕಲಾತ್ಮಕ ಮರದ ಕೆತ್ತನೆಗಳು, ಶಿಲ್ಪಕಲೆಗಳೊಂದಿಗೆ ತುಳುನಾಡಿನ ಶೈಲಿಯಲ್ಲಿ ಸುಂದರವಾಗಿ ನಿರ್ಮಾಣಗೊಂಡಿದೆ. ಗರ್ಭಗುಡಿಯ ಸುತ್ತಲೂ ಗೋಡೆಯಲ್ಲಿ ಮರದ ಕೆತ್ತನೆಗಳಲ್ಲಿ ದೇಗುಲದ ಇತಿಹಾಸ ಹಾಗೂ ಜಾತ್ರೆಯ ಇತಿಹಾಸವನ್ನು ಕೆತ್ತಲಾಗಿದೆ. ಸುತ್ತುಪೌಳಿ ತಾಮ್ರದ ಹೊಳಪಿನೊಂದಿಗೆ ಕಂಗೊಳಿಸುತ್ತಿದೆ. ದೇಗುಲ ಆಕರ್ಷಕ ವಾಸ್ತು ವಿನ್ಯಾಸದೊಂದಿಗೆ ಭವ್ಯವಾಗಿ ಪುನರ್‌ ನಿರ್ಮಾಣಗೊಂಡಿದೆ.

ಬ್ರಹ್ಮಕಲಶೋತ್ಸವ ಸಂಭ್ರಮ
ಬ್ರಹ್ಮಕಲಶೋತ್ಸವದ ವಿಧಿವಿಧಾನಗಳು ಮಾ. 4ಕ್ಕೆ ಆರಂಭಗೊಳ್ಳಲಿವೆ. ಮಾ. 13ರಂದು ಬೆಳಗ್ಗೆ 7.40 ರಿಂದ 8.10ರ ಮುಹೂರ್ತದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮತ್ತು ಸಪರಿವಾರ ಶ್ರೀ ರಾಜರಾಜೇಶ್ವರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನೆರವೇರಲಿದೆ. ರಾಜರಾಜೇಶ್ವರೀ ಹಾಗೂ ದುರ್ಗಾಪರಮೇಶ್ವರೀ ದೇವರಿಗೆ 500 ಕಲಶ, ಪರಿವಾರ ದೇವರಿಗೆ 108 ಕಲಶಗಳ ಮೂಲಕ ಬ್ರಹ್ಮಕಲಶ ನಡೆಯಲಿದೆ. ದೇಶದಲ್ಲಿ ಪೊಳಲಿಯಲ್ಲಿ ಮಾತ್ರ ಮಣ್ಣಿನ ಮೂರ್ತಿ ಇರುವುದರಿಂದ ಇಲ್ಲಿ ಲೇಪಾಷ್ಠಬಂಧ ಬ್ರಹ್ಮಕಲಶಾಭಿಷೇಕ ನಡೆಯುವುದು ವಿಶೇಷವಾಗಿದೆ. ಎರಡು ವೇದಿಕೆಗಳಲ್ಲಿ ಪ್ರತಿದಿನ ಸಂಜೆ 6 ರಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಸರ್ವ ಸಿದ್ಧತೆ
ಭಕ್ತರ ವಾಹನಗಳ ನಿಲುಗಡೆಗೆ ಸುಮಾರು 22 ಎಕ್ರೆ ಪ್ರದೇಶವನ್ನು ಸಿದ್ಧಗೊಳಿಸಲಾಗಿದೆ. 8 ಸಾವಿರ ಸ್ವಯಂಸೇವಕರು ಸಜ್ಜಾಗಿದ್ದಾರೆ. ಅರೋಗ್ಯಸೇವೆನೀಡಲು ಕ್ಲಿನಿಕ್‌ ತೆರೆಯಲಾಗಿದೆ. ಸ್ವತ್ಛತೆ ಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ವಹಿಸಲಾಗಿದ್ದು ರಾಸಾಯನಿಕ ಶೌಚಾಲಯವೂ ಸೇರಿದಂತೆ ಸುಮಾರು 70 ಶೌಚಾಲಯ ನಿರ್ಮಿಸಲಾಗಿದೆ. ಭದ್ರತೆಯ ನಿಟ್ಟಿನಲ್ಲೂ ಸಕಲ ಸಿದ್ಧತೆ ಮಾಡಲಾಗಿದೆ.

10 ಲಕ್ಷ ಭಕ್ತರ ನಿರೀಕ್ಷೆ
ಬ್ರಹ್ಮಕಲಶೋತ್ಸವದಲ್ಲಿ  ಸುಮಾರು10 ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲ  ದಿನಗಳಲ್ಲೂ ಭಕ್ತರಿಗೆ ಉಪಾಹಾರ, ಅನ್ನದಾಸೋಹ ನಡೆಯಲಿದ್ದು ವಿಶಾಲ ಭೋಜನಶಾಲೆ, ಪಾಕಶಾಲೆ ನಿರ್ಮಿಸಲಾಗಿದೆ. ದೇವಸ್ಥಾನದ ಪರಿಸರ ಸಂಪೂರ್ಣ ಸಿಸಿ ಕೆಮರಾದ ಕಣ್ಗಾವಲಿನಲ್ಲಿದೆ. ಭಕ್ತರ ನೆರವಿಗೆ ಕಂಟ್ರೋಲ್‌ ರೂಂ ತೆರೆಯಲಾಗಿದೆ. ಪೊಲೀಸ್‌ ಔಟ್‌ ಪೋಸ್ಟ್‌ ಕೂಡ ಕಾರ್ಯಾಚರಿಸಲಿದೆ.

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.