ಪೊಲೀಸ್‌ ವಸತಿ ವ್ಯವಸ್ಥೆಗೆ ಮನವಿ: ಶಕುಂತಳಾ ಶೆಟ್ಟಿ 


Team Udayavani, Feb 25, 2017, 11:04 AM IST

VIL_24-FEB_1.jpg

ವಿಟ್ಲ ಪೊಲೀಸ್‌ ಠಾಣೆ : ಆಶ್ರಿತ ಸಭಾಭವನ ಉದ್ಘಾಟನೆ
ವಿಟ್ಲ :
ಪುತ್ತೂರಿನಲ್ಲಿ ಪೊಲೀಸ್‌ ಸಿಬಂದಿಗಳಿಗೆ ವಸತಿಗೆ ಬೇಕಾದ ವ್ಯವಸ್ಥೆ ಈಗಾಗಲೇ ಆಗಿದೆ. ವಿಟ್ಲ ಹಾಗೂ ಉಪ್ಪಿನಂಗಡಿ ಭಾಗಕ್ಕೆ ಪಿಎಸ್‌ಐ ಹಾಗೂ ಸಿಬಂದಿಗಳ ವಸತಿಗೆ ಬೇಕಾದ ವ್ಯವಸ್ಥೆಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. 

ಅವರು ಫೆ.24ರಂದು ವಿಟ್ಲ ಆರಕ್ಷಕ ಠಾಣೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ  ಸಂಘದ ವತಿಯಿಂದ 4 ಲ.ರೂ. ಹಾಗೂ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ನ 25 ಲ.ರೂ. ವೆಚ್ಚದಲ್ಲಿ ನಿರ್ಮಾಣವಾದ ಆಶ್ರಿತ ಸಭಾಭವನ ಉದ್ಘಾಟನ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ರಕ್ಷಣೆಗಾಗಿ ಪೊಲೀಸರು ರಾತ್ರಿ ಹಗಲು ಸೇವೆ ಸಲ್ಲಿಸುತ್ತಾರೆ. ಅವರ ಸೇವೆ ಶ್ಲಾಘನೀಯ. ಜನರಿಗೆ ಮತ್ತಷ್ಟು ಉತ್ತಮ ಸೇವೆ ದೊರೆಯಲಿ. ಅಂತೆಯೇ ಪೊಲೀಸರ ಜೀವನವೂ ಉತ್ತಮವಾಗಿ ಇರಲಿ ಎಂದರು.

ವಿಟ್ಲ ಅರಮನೆಯ ವಿ. ಜನಾರ್ದನ ವರ್ಮ ಅರಸರು ಸಭಾಭವನವನ್ನು ಉದ್ಘಾಟಿಸಿದರು. ಬಂಟ್ವಾಳ ಪೊಲೀಸ್‌ ಸಹಾಯಕ ಅಧೀಕ್ಷಕ ರವೀಶ್‌ ಸಿ. ಆರ್‌. , ಹಿರಿಯ ಉದ್ಯಮಿ ಕೆ. ವೆಂಕಟೇಶ್‌ ಭಟ್‌, ವಿ. ಕೂಸಪ್ಪ ನಾಯ್ಕ, ಮಹಮ್ಮದ್‌ ಜೋಗಿಮಠ, ಹಾಜಿ ವಿ. ಎಸ್‌. ಅಬ್ಟಾಸ್‌ ಒಕ್ಕೆತ್ತೂರು, ಎಡ್ವರ್ಡ್‌ ರೇಗೋ ಕಲ್ಲಕಟ್ಟ ಅವರನ್ನು ಸಮ್ಮಾನಿಸಲಾಯಿತು. ಗುತ್ತಿಗೆದಾರ ಆರ್‌.ಎಸ್‌. ಲಕ್ಷ್ಮಣ ಅವರನ್ನು ಗೌರವಿಸಲಾಯಿತು. ವಿಟ್ಲ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಜೀವ ಸದಸ್ಯತನದ ಪ್ರಮಾಣ ಪತ್ರ ವಿತರಿಸಲಾಯಿತು.

ಸಂಘದ ಜತೆಕಾರ್ಯದರ್ಶಿ ಬಾಬು ಕೊಪ್ಪಳ, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎಲ್‌. ಎನ್‌. ಕೂಡೂರು, ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷ ಅರುಣ ಎಂ. ಮತ್ತಿತರರು ಉಪಸ್ಥಿತರಿದ್ದರು. 

ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ವಿ. ರಾಮದಾಸ ಶೆಣೈ ಸ್ವಾಗತಿಸಿದರು. ಅಧ್ಯಕ್ಷ ಎಚ್‌. ಜಗನ್ನಾಥ ಸಾಲ್ಯಾನ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮಹಮ್ಮದ್‌ ಇಕ್ಬಾಲ್‌ ವಂದಿಸಿದರು. ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.