ಶರತ್ ಮಡಿವಾಳ ಕೊಲೆ ಪ್ರಕರಣ ಪ್ರಮುಖ ಆರೋಪಿ ಪೊಲೀಸ್ ವಶ?
Team Udayavani, Aug 22, 2017, 6:10 AM IST
ಮಂಗಳೂರು: ಆರ್.ಎಸ್.ಎಸ್. ಕಾರ್ಯಕರ್ತ ಬಂಟ್ವಾಳದ ಸಜಿಪ ಮುನ್ನೂರು ಕಂದೋಡಿಯ ಶರತ್ ಮಡಿವಾಳ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಬಂಟ್ವಾಳ ಆಲಾಡಿಯ ಶರೀಫ್‌ನನ್ನು ಸಿಸಿಬಿ ಪೊಲೀಸರು ಮತ್ತು ಜಿಲ್ಲಾ ವಿಶೇಷ ತನಿಖಾ ತಂಡದ ಪೊಲೀಸರು ಸೋಮವಾರ ಚಾಮರಾಜನಗರದಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈತನ ಬಂಧನದೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ 9ಕ್ಕೆ ಏರಿದೆ. ಇನ್ನುಳಿದ ಇಬ್ಬರು ಆರೋಪಿಗಳಲ್ಲಿ ಒಬ್ಟಾತ ವಿದೇಶಕ್ಕೆ ಪರಾರಿ ಯಾಗಿದ್ದಾನೆಂಬ ಊಹಾಪೋಹಗಳಿದ್ದು, ಶೋಧ ಕಾರ್ಯ ಮುಂದುವರಿದಿದೆ. ಶರೀಫ್ ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದು, ಹಳೆ ಆರೋಪಿ ಯಾಗಿದ್ದಾನೆ. ಆತನ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮತ್ತು ಬಂಟÌಳ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿವೆ.
ಕಾಲೇಜಿನಿಂದ ಸಸ್ಪೆಂಡ್ ಆಗಿದ್ದ
ನಗರದ ಸರಕಾರಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಶರೀಫ್ ಹುಡುಗಿಯರ ವಿಷಯಕ್ಕೆ ಸಂಬಂ ಧಿಸಿ ನಡೆದ ಗಲಾಟೆಯಲ್ಲಿ ಆರೋಪಿಯಾದ ಕಾರಣ ಆತನನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿತ್ತು.
ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಬಂಟ್ವಾಳದ ರಹೀಂ ಆಲಾಡಿ ಹಾಗೂ ಹಾಸನದ ಸಲೇಹ ಯಾನೆ ಸ್ವಲೇಹ್ ಮತ್ತು ಸಾದಿಕ್ ಪಾಷ ಅವರನ್ನು ಶನಿವಾರ ಬಂಧಿಸಲಾಗಿತ್ತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಒಂದು ವಾರ ಅವಧಿಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ಆಲಾಡಿ ಇಂದಿರಾ ನಗರದ ಅಬ್ದುಲ್ ಶಾಫಿ ಯಾನೆ ಶಾಫಿ ಹಾಗೂ ಚಾಮರಾಜನಗರ ಜಿಲ್ಲೆಯ ಗಾಳಿಪುರ ಗ್ರಾಮದ ನಿವಾಸಿ ಚಾಮರಾಜನಗರ ಪಿಎಫ್ಐ ಸಂಘಟನೆ ಅಧ್ಯಕ್ಷ ಖಲೀಲ್‌ವುಲ್ಲಾ ಅವರನ್ನು ಆ.15ರಂದು ಹಾಗೂ ಬೆಳ್ತಂಗಡಿ ಪಾರೆಂಕಿಯ ರಿಯಾಜ್, ನೆಲ್ಯಾಡಿಯ ಸಿದ್ದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಂಮುಲ್ಲಾ ಅವರನ್ನು ಆ.16ರಂದು ಬಂಧಿಸಲಾಗಿತ್ತು.
ಬಂಧಿತರಾದ ಎಲ್ಲ ಆರೋಪಿಗಳು ಪಿಎಫ್ಐ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಆರೋಪಿಗಳಿಗೆ ಸಹಾಯ ಮಾಡಿದವರು ಇನ್ನೂ ಯಾರಾದರೂ ಇದ್ದಾರೆಯೇ ಎನ್ನುವುದು ಹಾಗೂ ಹತ್ಯೆಗೆ ಪ್ರಮುಖ ಕಾರಣ ಏನೆಂಬುದು ಆರೋಪಿಗಳ ವಿಚಾರಣೆಯಿಂದ ತಿಳಿದು ಬರಬೇಕಾಗಿದೆ.
ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಏಳು ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ತನಿಖೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.