ಮಂಗಳೂರು ಬಾಂಬ್ ಆರೋಪಿ ಆದಿತ್ಯ ರಾವ್ ಗೆ 10 ದಿನಗಳ ಪೊಲೀಸ್ ಕಸ್ಟಡಿ
Team Udayavani, Jan 23, 2020, 4:20 PM IST
ಮಂಗಳೂರು: ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ಮಂಗಳೂರಿನ ಪ್ರಥಮ ದರ್ಜೆ 6ನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಪೊಲೀಸರು ಆರೋಪಿಯನ್ನು ಹಾಜರುಪಡಿಸಿದರು. ನಂತರ ನ್ಯಾಯಾಧೀಶರಾದ ಕಿಶೋರ್ ಕುಮಾರ್ ಕೆ.ಎನ್ ಅವರು ಆರೋಪಿಯನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಸೋಮವಾರ ಸ್ಪೋಟಕವನ್ನಿರಿಸಿ ಆರೋಪಿ ಆದಿತ್ಯ ರಾವ್ ನಾಪತ್ತೆಯಾಗಿದ್ದ. ಬುಧವಾರ ಬೆಂಗಳೂರಿನಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ.
ನಂತರ ಹೆಚ್ಚಿನ ವಿಚಾರಣೆಗೆ ಆತನನ್ನು ಮಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಿ ಮಂಗಳೂರಿಗೆ ಕರೆತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.