ಮಂಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
Team Udayavani, Jul 29, 2022, 11:57 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕಾರಣದಿಂದ ಶಾಂತಿ ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಝಿಲ್ ಕೊಲೆ ಪ್ರಕರಣಗಳಿಂದ ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿರ್ಬಂಧ ಹೇರಲಾಗಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಮಂಗಳೂರು ನಗರ ಸಹಿತ ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ಪ್ರವೇಶಿಸುವುದಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಿ ಗುರುವಾರ ಆದೇಶ ಹೊರಡಿಸಿದ್ದರು.
ಅದಾಗ್ಯೂ ಜಿಲ್ಲೆಗೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಗಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್: ಅಂತಿಮ ದರ್ಶನಕ್ಕೆ ಜನಸಾಗರ; ಪೊಲೀಸ್ ಬಿಗಿ ಭದ್ರತೆ
ಈ ಬಗ್ಗೆ ಮಾತನಾಡಿದ ಆಯುಕ್ತ ಶಶಿಕುಮಾರ್, ಪ್ರಮೋದ್ ಮುತಾಲಿಕ್ ಅವರು ಪ್ರವೀಣ್ ನೆಟ್ಟಾರೆ ಮನೆಗೆ ಭೇಟಿ ನೀಡುವ ಉದ್ದೇಶ ಹೊಂದಿದ್ದರು. ಇದರ ಬಗ್ಗೆ ಮಾಹಿತಿ ದೊರೆತ ಕಾರಣ ನಾವು ನಿರ್ಬಂಧ ಹೇರಿದ್ದೆವು. ಅವರು ಇಂದು ಬೆಳಗ್ಗೆ ಉಡುಪಿಗೆ ಬಂದ ಮಾಹಿತಿ ಲಭ್ಯವಾಗಿತ್ತು. ಕಮಿಷನರೇಟ್ ವ್ಯಾಪ್ತಿಗೆ ಪ್ರವೇಶಿಸಿದ ಕೂಡಲೇ ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದರು.
ದ.ಕ. ಜಿಲ್ಲೆಯಲ್ಲಿ ನಡೆದ ಪ್ರವೀಣ್ ಹತ್ಯೆಗೆ ಸಂಬಂಧಿಸಿ ಮಾತನಾಡಿದ ಮುತಾಲಿಕ್, ಬಿಜೆಪಿಗರು ಕಾರ್ಯಕರ್ತರ ಕಷ್ಟ- ಸುಖಕ್ಕೆ ಸ್ಪಂದಿಸಿದ್ದರೆ ಪ್ರವೀಣ್ ಹತ್ಯೆ ಆಗುತ್ತಿರಲಿಲ್ಲ. ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆ ಅತ್ಯಂತ ದುರದೃಷ್ಟಕರ. ಶ್ರದ್ಧೆಯಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದ ಒಬ್ಬ ಕಾರ್ಯಕರ್ತನ ಕಷ್ಟವನ್ನು ನಾಯಕರು ಅರಿತಿದ್ದರೆ ಪ್ರವೀಣ್ ಗೆ ಆಶ್ರಯ ಸಿಗುತ್ತಿತ್ತು.
ಹತ್ಯೆ ಬಳಿಕ ಮನೆಗೆ ಭೇಟಿ ನೀಡಿ ಮುಖ್ಯಮಂತ್ರಿಗಳು ನೀಡಿರುವ 25 ಲಕ್ಷ ರೂ. ಒಪ್ಪಲಾಗದಿರುವುದು. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯಬಾರದು ಎಂದು ಆಗ್ರಹಿಸಿದರು.
ಬಿಜೆಪಿಯ ನಾಯಕರುಗಳು ತಮ್ಮ 3-4 ಪೀಳಿಗೆ ಉಣ್ಣುವಷ್ಟು ಮಾಡಿಟ್ಟಿದ್ದಾರೆ. ಇದಕ್ಕೆ ನಾನು ಬಿಜೆಪಿಗೆ ಧಿಕ್ಕಾರ ಹೇಳುತ್ತೇನೆ. ಸಾರ್ವಜನಿಕರು ಪ್ರವೀಣ್ ಹತ್ಯೆಯಿಂದ ಆಕ್ರೋಶಗೊಂಡಿದ್ದಾರೆ. ಈ ತಪವೇ ಶವಯಾತ್ರೆಯ ದಿನ ಸ್ಫೋಟವಾಗಿದೆ. ಹತ್ಯೆ ಖಂಡಿಸಿ ರಾಜಿನಾಮೆ ಕೊಟ್ಟವರು ನಿಜವಾದ ಹಿಂದೂ ವಾದಿಗಳು ಎಂದು ಹೇಳಿ ಅವರೆಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಸುರತ್ಕಲ್ ನ ಫಾಝಿಲ್ ಹತ್ಯೆ ಗೆ ಸಂಬಂಧಿಸಿ ಮಾತನಾಡಿದ ಅವರು, ಸುರತ್ಕಲ್ ನಲ್ಲಿ ಯಾವುದಕ್ಕೆ ಕೊಲೆಯಾಗಿದೆ ಗೊತ್ತಿಲ್ಲ. ಕ್ರಿಯೆಗೆ ಪ್ರತಿಕ್ರಿಯೆಯಾಗಬಾರದು. ಇದನ್ನು ಹಿಂದು ಮತ್ತು ಮುಸ್ಲಿಂ ಧಾರ್ಮಿಕ ಮುಖಂಡರು ಒಟ್ಟಿಗೆ ಸೇರಿ ಬಗೆಹರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.