15 ದಿನ ಪೂರೈಸಿದ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ
Team Udayavani, Jun 6, 2018, 2:35 AM IST
ಪುತ್ತೂರು: ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಪುತ್ತೂರು ಪ್ರಧಾನ ಅಂಚೆ ಕಚೇರಿಯ ಎದುರು ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಧರಣಿ ಮಂಗಳವಾರ 15 ದಿನಗಳನ್ನು ಪೂರೈಸಿದೆ. 150 ಕ್ಕೂ ಮಿಕ್ಕಿ ಮಂದಿ ಗ್ರಾಮೀಣ ಅಂಚೆ ನೌಕರರು ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತು ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಮಹಿಳಾ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.
ಶಾಸಕರ ಭೇಟಿ
ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಂಗಳವಾರ ಧರಣಿ ಸ್ಥಳಕ್ಕೆ ಭೇಟಿ ನೀಡುವುದಾಗಿ ನೌಕರರಿಗೆ ಭರವಸೆ ನೀಡಿದ್ದರು. ನೌಕರರು ನಿರೀಕ್ಷೆಯಲ್ಲಿದ್ದರೂ ಶಾಸಕರು ಮಾತ್ರ ಭೇಟಿ ನೀಡಿದರು. ಮುಂದಿನ ಎರಡು ದಿನಗಳಲ್ಲಿ ಸಂಸದರನ್ನು ಕರೆತರುವುದಾಗಿ ಮಠಂದೂರು ಭರವಸೆ ನೀಡಿದರು.
ಕೇಂದ್ರಕ್ಕೆ ಒತ್ತಡ
ಧರಣಿ ನಿರತರ ಅಹವಾಲು ಕೇಳಿಕೊಂಡ ಶಾಸಕ ಸಂಜೀವ ಮಠಂದೂರು, ಗ್ರಾಮೀಣ ಅಂಚೆ ನೌಕರರ ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆ ನನ್ನ ವ್ಯಾಪ್ತಿಯಲ್ಲಿ ಇಲ್ಲ. ಆದರೆ ನೌಕರರ ನ್ಯಾಯಯುತ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈ ನಿಟ್ಟಿನಲ್ಲಿ ಸಂಸದರ ಮೂಲಕ ಕೇಂದ್ರ ಸರಕಾರಕ್ಕೆ ಒತ್ತಡ ಹೇರುತ್ತೇನೆ. ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದರು ಹೇಳಿದರು. ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಸದಸ್ಯೆ ಶಯನಾ ಜಯಾನಂದ, ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ವಕ್ತಾರ ಆರ್.ಸಿ. ನಾರಾಯಣ ಶಾಸಕರ ಜತೆಗಿದ್ದರು.
ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಕರ್ನಾಟಕ ವಲಯ ಉಪಾಧ್ಯಕ್ಷ ಬಿ. ಪ್ರಮೋದ್ ಕುಮಾರ್, ವಿಭಾಗೀಯ ಅಧ್ಯಕ್ಷ ವಿಠಲ ಪೂಜಾರಿ, ಗೌರವಾಧ್ಯಕ್ಷ ಜಗತ್ಪಾಲ ಹೆಗ್ಡೆ, ಪುತ್ತೂರು ವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಾರ್ಕಳ ವಲಯಗಳ ನೂರಾರು ನೌಕರರು ಪಾಲ್ಗೊಂಡರು.
ಡಿ.ವಿ. ಜತೆ ಮಾತುಕತೆ
ಧರಣಿ ನಿರತರ ಬೇಡಿಕೆಯ ಮೇರೆಗೆ ಸಂಜೀವ ಮಠಂದೂರು ಅವರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ದೂರವಾಣಿ ಕರೆಯ ಮೂಲಕ ಸಂಪರ್ಕಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಧ್ಯಾಹ್ನದ ಬಳಿಕ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅಂಚೆ ನೌಕರರ ಪ್ರತಿಭಟನೆ ಹಾಗೂ ಬೇಡಿಕೆಗಳ ಕುರಿತು ಅವರ ಗಮನಕ್ಕೆ ತಂದು ಚರ್ಚಿಸುವುದಾಗಿ ಧರಣಿ ನಿರತ ನೌಕರರಿಗೆ ಡಿ.ವಿ. ಸದಾನಂದ ಗೌಡ ಅವರು ಭರವಸೆ ನೀಡಿದರು.
ಆಶಾಕಿರಣ ಮೂಡಿದೆ
ಡಿ.ವಿ. ಸದಾನಂದ ಗೌಡರು ಪುತ್ತೂರಿನಂತಹ ಗ್ರಾಮೀಣ ಭಾಗದವರಾಗಿರುವುದರಿಂದ ಇಲ್ಲಿನ ಶಾಸಕರ ಮೂಲಕ ಕೇಂದ್ರ ಸಚಿವರ ನೆಲೆಯಲ್ಲಿ ಅವರನ್ನು ಸಂಪರ್ಕಿಸಿದ್ದೇವೆ. ಪ್ರಧಾನಿಯವರ ಜತೆ ಅವರು ಮಾತನಾಡುವ ಭರವಸೆ ನೀಡಿದ್ದಾರೆ. ಈ ಭರವಸೆ ನಮಗೆ ಆಶಾಕಿರಣವನ್ನು ಹೆಚ್ಚಿಸಿದೆ.
– ಪ್ರಮೋದ್ ಕುಮಾರ್, ಕರ್ನಾಟಕ ವಲಯ ಉಪಾಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.