ಯೋಜನೆ ಮೂಲಕ ಬಡತನ ನಿರ್ಮೂಲನೆ : ಶಾಸಕ  ಬಂಗೇರ


Team Udayavani, Jul 23, 2017, 6:05 AM IST

bangera.jpg

ಬೆಳ್ತಂಗಡಿ : ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡವರನ್ನು ಬಡತನ ರೇಖೆಯಿಂದ ಮೇಲೆತ್ತುವ ಕೆಲಸ ಕಳೆದ ಮೂರೂವರೆ ದಶಕಗಳಿಂದ ನಡೆದಿದೆ ಎಂದು ಶಾಸಕ ಕೆ. ವಸಂತ ಬಂಗೇರ ಅವರು ಹೇಳಿದರು.

ಅವರು ಶನಿವಾರ ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ಏಕಕಾಲದಲ್ಲಿ ರಾಜ್ಯಾದ್ಯಂತ ಪರಿಸರ ಪ್ರೇಮಿಗಳು ಸಸಿನಾಟಿ, ಬೀಜದುಂಡೆ ನೆಡುವ , ಶಾಲಾವನ ನಾಟಿ ಕಾರ್ಯಕ್ರಮಕ್ಕೆ ಗಿಡ ನೆಟ್ಟು, ಅರಣ್ಯಕ್ಕೆ ಬೀಜದುಂಡೆ ಬಿಸಾಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾವನ ನಾಟಿ ಕಾರ್ಯಕ್ರಮಕ್ಕೆ ಗಿಡ ನೆಟ್ಟು, ಅರಣ್ಯಕ್ಕೆ ಬೀಜದುಂಡೆ ಬಿಸಾಡುವ ಮೂಲಕ ಚಾಲನೆ ನೀಡಿದ   ಧ.ಗ್ರಾ. ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್‌. ಎಚ್‌. ಮಂಜುನಾಥ್‌, ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು ರಾಜ್ಯದ ಸಾವಿರಾರು  ಗ್ರಾಮಗಳಲ್ಲಿ ಪಾರ‌ಂಪರಿಕ ವೃಕ್ಷಗಳಾದ ಮಾವು, ಬೇವು, ಹುಣಸೆ, ನೇರಳೆ, ಪೇರ‌ಳೆ ಮುಂತಾದ ಹತ್ತಾರು ಜಾತಿಯ ಬೀಜಗಳ ಉಂಡೆಗಳನ್ನು ತಯಾರಿಸಿ ಅರ‌ಣ್ಯದಲ್ಲಿ ಬಿತ್ತುವ ಕಾರ್ಯಕ್ರಮಗಳನ್ನು ಹ‌ಮ್ಮಿಕೊಳ್ಳ
ಲಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಅರಿವನ್ನು ಮೂಡಿಸುವ ದೃಷ್ಟಿಯಿಂದ ಡಾ| ಹೆಗ್ಗಡೆಯವರ ಸೂಚನೆಯಂತೆ ಯೋಜನೆ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕಕಾಲದಲ್ಲಿ  6,400 ಕಾರ್ಯಕ್ರಮಗಳ ಮುಖೇನ 32 ಲಕ್ಷ  ಬೀಜದುಂಡೆ, 2 ಲಕ್ಷ  ಸಸಿನಾಟಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಯೋಜನೆಮೂಲಕ 20 ಸಾವಿರ ಗೋಬರ್‌ ಅನಿಲ ಘಟಕ, 60 ಸಾವಿರ ಸೋಲಾರ್‌ ಲೈಟ್‌ಗಳ ವಿತರಣೆ ನಡೆದಿದೆ ಎಂದರು.
ಡಾ| ಹೆಗ್ಗಡೆಯವರ ಆಶಯದಂತೆ ಯೋಜನೆಯ ಪ್ರಾರ‌ಂಭದಿಂದಲೂ ಸಾಮಾಜಿಕ ಅರ‌ಣ್ಯೀಕರಣ ಮತ್ತು ಜಲಸಂವರ್ಧನಾ ಕಾರ್ಯಕ್ರಮಗಳಿಗೆ ವಿಶೇಷ ಒತ್ತನ್ನು ನೀಡಲಾಗುತ್ತಿದೆ. ಎಲ್ಲೆಡೆಗಳಲ್ಲಿಯೂ ವನಸಂವರ್ಧನೆ ಆಗಬೇಕೆಂಬ ದೃಷ್ಟಿಕೋನದಿಂದ ವಿಶೇಷವಾಗಿ ದೇವಾಲಯಗಳ ಪರಿಸರದಲ್ಲಿ ದೇವರಕಾಡು, ಸರಕಾರಿ ಭೂಮಿಗಳಲ್ಲಿ ಪ್ರಗತಿವನ, ಶಾಲಾ ಪರಿಸರದಲ್ಲಿ ಶಾಲಾವನ, ಶಾಲಾ ಕೈತೋಟ, ಔಷಧಿ ವನ, ನವಗ್ರಹ ವನ, ರೈತ‌ ಭೂಮಿಯಲ್ಲಿ ಕೃಷಿಕಾಡು, ರಸ್ತೆಯ ಅಕ್ಕಪಕ್ಕದಲ್ಲಿ ಸಾಲು ಮರ‌ ನಾಟಿ ಮುಂತಾದ$ಅರ‌ಣ್ಯೀಕರಣ ಕಾರ್ಯಕ್ರಮಗಳಿಗೆ ಪ್ರೇರ‌ಣೆ ನೀಡುತ್ತಾ ಬಂದಿದೆ. ಈ ಬಾರಿ ಕೆರೆ ಸಂವರ್ಧನೆ ಯೋಜನೆಯಲ್ಲಿ ರಾಜ್ಯಾದ್ಯಂತ 110 ಕೆರೆಗಳನ್ನು ಪುನಶ್ಚೇತನ ಮಾಡಲಾಗಿದೆ ಎಂದರು.
ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕರಿಕಲನ್‌, ರಾಜ್ಯದಲ್ಲಿ ಶೇ.22ರಷ್ಟು ಮಾತ್ರ ಅರಣ್ಯ ಇದ್ದು ಶೇ.33ರ ಅರಣ್ಯದ ಅಗತ್ಯವಿದೆ. ಅರಣ್ಯ ಜಾಸ್ತಿ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಕೊಡುಗೆ ನೀಡೋಣ ಎಂದರು.
ವೇದಿಕೆಯಲ್ಲಿ  ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ,ತಾ. ಪಂ. ಉಪಾಧ್ಯಕ್ಷೆ ವೇದಾವತಿ, ಸದಸ್ಯ ಕೃಷ್ಣಯ್ಯ ಆಚಾರ್‌, ಸುಶೀಲಾ, ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷ ಮೋನಪ್ಪ ಗೌಡ, ಶಾಲಾ ಮುಖ್ಯೋಪಾಧ್ಯಾಯ ರಾಜಗುರು ಹೆಬ್ಟಾರ್‌ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಜಯಕರ ಶೆಟ್ಟಿ ಸ್ವಾಗತಿಸಿ , ಕೃಷಿ ಅಧಿಕಾರಿ ಉಮೇಶ್‌ ನಿರ್ವಹಿಸಿದರು. ಶಾಲಾ ಶಿಕ್ಷಕಿ ಶೋಲಿ ವಂದಿಸಿದರು.

ಕೃಷಿಯಿಂದ  ತಾಲೂಕು ರಾಜ್ಯ ಹಸಿರು 
ಲಾಭದಾಯಕ ಕೃಷಿಗೆ ಪ್ರೋತ್ಸಾಹ , 
ಮಾರ್ಗದರ್ಶನದಿಂದ  ಸ್ವಾವಲಂಬಿ 
ಜೀವನದ ಮೂಲಕ ಬದುಕು ಹಸನಾಗಿಸುವ ಕಾರ್ಯ ನಡೆದಿದೆ. ಕೃಷಿಯಿಂದ ತಾಲೂಕು, ರಾಜ್ಯ ಹಸಿರಾಗಿದೆ. ಸರಕಾರ ಕೂಡ ಸಾಕಷ್ಟು ಯೋಜನೆಗಳನ್ನು  ರೈತರಿಗೆ , ಬಡವರಿಗಾಗಿ ನೀಡುತ್ತಿದೆ.
–  ವಸಂತ ಬಂಗೇರ, ಶಾಸಕ  

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.