ಪಿಲಿಕಲ: ಅಂತೂ ಮಲೆಕುಡಿಯ ಕುಟುಂಬಗಳಿಗೆ ವಿದ್ಯುತ್ ಬಂತು
Team Udayavani, Aug 5, 2017, 7:50 AM IST
ಬೆಳ್ತಂಗಡಿ: ಶತಮಾನಗಳಿಂದ ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತರಾಗಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ನಿವಾಸಿಗಳು ಕತ್ತಲೆಯಿಂದ ಬೆಳಕಿನೆಡೆಗೆ ಬಂದ ಐತಿಹಾಸಿಕ ಕ್ಷಣಕ್ಕೆ ಸವಣಾಲು ಗ್ರಾಮದ ಪಿಲಿಕಲ ಸಾಕ್ಷಿಯಾಯಿತು.
ಇತರ ಗ್ರಾಮಗಳಿಗೂ ವಿಸ್ತರಣೆ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು – ನಡ ಗ್ರಾಮದ ಕಂಬುಜೆ, ಪಿಲಿಕಲ ಪ್ರದೇಶದಲ್ಲಿ ಒಂಬತ್ತು ಮಲೆಕುಡಿಯ ಕುಟುಂಬಗಳಿಗೆ ಸುಮಾರು 23 ಲಕ್ಷ ವೆಚ್ಚದ ವಿದ್ಯುದೀಕರಣ ಯೋಜನೆಯನ್ನು ಶಾಸಕ, ಸಣ್ಣಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಸಂತ ಬಂಗೇರ ಅವರು ಉದ್ಘಾಟಿಸಿ ಮಾತನಾಡಿ, ದ.ಕ. ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ಆದಿವಾಸಿ ಮಲೆಕುಡಿಯ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಇದನ್ನು ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಗ್ರಾಮಗಳಿಗೂ ವಿಸ್ತರಿಸಲಾಗುವುದು ಎಂದರು.
ತಾ|ನ ಎಲ್ಲ ಮನೆಗೂ ವಿದ್ಯುತ್ ಗುರಿ
ನನ್ನ ಅವಧಿಯಲ್ಲಿ ತಾಲೂಕಿನ ಎಲ್ಲ ಮನೆಗಳು ವಿದ್ಯುತ್‌ನಿಂದ ಬೆಳಗುವಂತಾಗಬೇಕು. ಈಗಾಗಲೇ ಶೇ. 95 ಮನೆಗಳು ವಿದ್ಯುತ್ ಸಂಪರ್ಕ ಹೊಂದಿದ್ದು, ಉಳಿದ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದರು.
ಮೊದಲ ಸ್ಥಾನ
ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಮಾತನಾಡಿ, ಈ ಭಾಗಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ತಾಲೂಕಿನಲ್ಲಿ ಅತೀ ಹೆಚ್ಚು ಆದಿವಾಸಿ, ದಲಿತ ಸಮುದಾಯದ ಕಾಲನಿಗಳು ಅಭಿವೃದ್ಧಿಗೊಂಡಿದ್ದು, ದಲಿತ, ಆದಿವಾಸಿ ಪ್ರದೇಶಗಳ ಅಭಿವೃದ್ಧಿಯಲ್ಲಿ ಜಿಲ್ಲೆಯಲ್ಲಿಯೇ ನಮ್ಮ ತಾಲೂಕು ಮೊದಲ ಸ್ಥಾನದಲ್ಲಿದೆ ಎಂದರು. ಈ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ ಶಾಸಕ ಕೆ. ವಸಂತ ಬಂಗೇರ ಅವರನ್ನು ಸಮ್ಮಾನಿಸಲಾಯಿತು.
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ವೇದಾವತಿ, ತಾ.ಪಂ. ಸದಸ್ಯೆ ಜಯಶೀಲ, ನಡ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ, ಮೆಸ್ಕಾಂ ಎಂಜಿನಿಯರ್ ಸಜಿ ಕುಮಾರ್ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ವಂದಿಸಿದರು. ಜಯಾನಂದ ಪಿಲಿಕಲ ಸಹಕರಿಸಿದರು. ನಡ, ಸವಣಾಲು ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು, ಎರಡೂ ಗ್ರಾಮಗಳ ಗ್ರಾಮಸ್ಥರು, ವಿದ್ಯುತ್ ಸಂಪರ್ಕವನ್ನು ಕೊಡಿಸುವಲ್ಲಿ ಪ್ರಥಮದಿಂದ ಕೊನೆಯವರೆಗೂ ಸಂಪೂರ್ಣ ಸಹಕಾರವನ್ನು ನೀಡಿದ ದಲಿತ ಮುಖಂಡರಾದ ಬಿ.ಕೆ. ವಸಂತ್ ಬೆಳ್ತಂಗಡಿ, ದಲಿತ ಹಕ್ಕುಗಳ ಹೋರಾಟಗಾರ ಶೇಖರ್ ಲಾೖಲ ಮತ್ತಿತರರು ಉಪಸ್ಥಿತರಿದ್ದರು.
ಎಬಿ ಕೇಬಲ್ ಅಳವಡಿಕೆ
ಸುಮಾರು 23 ಲಕ್ಷ ರೂ. ವೆಚ್ಚದ ವಿದ್ಯುದ್ದೀಕರಣ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ 1 ಕಿ.ಮೀ ದೂರ ಎಬಿ ಕೇಬಲ್ ಅಳವಡಿಸಲಾಗಿದೆ. 1 ಕಿ.ಮೀ ಎಚ್‌ಟಿ ಲೆ„ನ್, 2 ಕಿ.ಮೀ . ಎಲ್‌ಟಿ ಲೈನ್ ಎಳೆಯಲಾಗಿದೆ. 25 ಕೆ.ವಿ. ಸಾಮರ್ಥ್ಯದ ವಿದ್ಯುತ್ ಪರಿವರ್ತಕವನ್ನು ಅಳವಡಿಸಲಾಗಿದ್ದು, ಎಬಿ ಕೇಬಲ್ ಅಳವಡಿಕೆಯಿಂದ ಮರದ ಕೊಂಬೆಗಳು ಬಿದ್ದರೂ ಯಾವುದೇ ತೊಂದರೆ ಸಂಭವಿಸುವುದಿಲ್ಲ .
– ಶಿವಶಂಕರ್, ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.