ಪ್ರತಿಭಾ ಕುಳಾಯಿ ವಿರುದ್ಧ ಮಾನಹಾನಿಕರ ಪೋಸ್ಟ್:ಆರೋಪಿ ಕೋರ್ಟ್ಗೆ ಹಾಜರು,ಪೊಲೀಸ್ ಕಸ್ಟಡಿಗೆ
Team Udayavani, Oct 28, 2022, 7:05 AM IST
ಮಂಗಳೂರು: ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್ ಹಾಕಿದ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿರುವ ಅಡ್ಯಾರ್ ಪದವು ನಿವಾಸಿ ಕೆ.ಆರ್. ಶೆಟ್ಟಿ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ವಕೀಲರ ಮೂಲಕ ಕೋರ್ಟಿಗೆ ಹಾಜರಾಗಿದ್ದ ಆತನನ್ನು ನ್ಯಾಯಾ ಲಯ ಒಂದು ದಿನ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಕೆ.ಆರ್. ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ಗೆ ಇನ್ನೋರ್ವ ಆರೋಪಿ ಶ್ಯಾಮ ಸುದರ್ಶನ್ ಭಟ್ ಅಶ್ಲೀಲ ಕಮೆಂಟ್ ಹಾಕಿದ್ದು, ಆತ ತಲೆಮರೆಸಿಕೊಂಡಿದ್ದಾನೆ. 4 ತಂಡಗಳನ್ನು ರಚಿಸಿ ಆತನಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೋಲ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದ ಪ್ರತಿಭಾ ಕುಳಾಯಿ ಅವರ ಫೋಟೋ ಒಂದನ್ನು ಕೆ.ಆರ್. ಶೆಟ್ಟಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿ “ಇದಕ್ಕೊಂದು ಒಳ್ಳೆಯ ಟೈಟಲ್ ಕೊಡಿ ಫ್ರೆಂಡ್ಸ್’ ಎಂದು ಕಮೆಂಟ್ ಹಾಕಿದ್ದ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶ್ಯಾಮ ಸುದ ರ್ಶನ ಭಟ್ ಹೊಸಮೂಲೆ ಮಾನಹಾನಿಕರ ಕಮೆಂಟ್ ಮಾಡಿದ್ದ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ, ಬಿಲ್ಲವ ಸಂಘಟನೆಗಳಿಂದ, ವಿವಿಧ ಸಂಘ ಸಂಸ್ಥೆ, ಕಾಂಗ್ರೆಸ್ ಸಹಿತ ವಿವಿಧ ರಾಜಕೀಯ ಪಕ್ಷಗಳಿಂದ ವಿವಿಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.