ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ: ನಳಿನ್ ಕುಮಾರ್ ಕಟೀಲ್
Team Udayavani, Jan 10, 2022, 5:55 AM IST
ಮಂಗಳೂರು: ಪರಿಸರ ವನ್ನು ಸಂರಕ್ಷಿಸುವ ಪರಿ ಸರ ಪ್ರವಾಸೋದ್ಯಮಕ್ಕೆ ದ.ಕ. ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳ ಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ತಣ್ಣೀರುಬಾವಿಯ ಅರಣ್ಯ ಇಲಾಖೆಯಲ್ಲಿ ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿ ಗಳೊಂದಿಗೆ ರವಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲ ತೀರಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ. ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ವತಿಯಿಂದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಿಆರ್‌ಝಡ್ ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು. ಇದಕ್ಕೂ ಮುನ್ನ ಅವರು ಸಸಿಹಿತ್ಲು, ತಣ್ಣೀರುಬಾವಿ ಕಡಲ ತೀರಗಳನ್ನು ಪರಿಶೀಲಿಸಿದರು. ಶಾಸಕರಾದ ಡಾ| ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.
ಇದನ್ನೂ ಓದಿ:ಸಂಕ್ರಾಂತಿಗೆ ಜಾಗತಿಕ ಸೂರ್ಯ ನಮಸ್ಕಾರ !
“ಡಿಕೆಶಿ ಡ್ರಾಮಾ’
ಜನಹಿತದ ನಿಯಮಗಳಿಗೆ ಕಾಂಗ್ರೆಸ್ ಗೌರವ ನೀಡುತ್ತಿಲ್ಲ. ಕೇವಲ ನಾಯಕತ್ವಕ್ಕಾಗಿ ಡಿಕೆಶಿ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ರವಿವಾರ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.