ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ: ವಿಮಾಕಂತು ಪಾವತಿ ದಿನಾಂಕ ವಿಸ್ತರಣೆ
Team Udayavani, Jul 8, 2017, 2:00 AM IST
ಮಂಗಳೂರು: ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಬೆಳೆ ವಿಮೆ ಕಾರ್ಯಕ್ರಮವನ್ನು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಕಾರ್ಯಕ್ರಮದಲ್ಲಿ 2017 ಮುಂಗಾರು ಹಂಗಾಮಿಗೆ ಅನ್ವಯಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2017 ನೇ ಮುಂಗಾರು ಹಂಗಾಮಿಗೆ ಅಡಿಕೆ ಮತ್ತು ಕರಿಮೆಣಸು ಬೆಳೆಗಳನ್ನು ಅಧಿಸೂಚಿಸಿ ಆದೇಶ ಹೊರಡಿಸಲಾಗಿದೆ. 2017ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಅಂತಿಮ ದಿನವನ್ನು ಜು.15 ಕ್ಕೆ ವಿಸ್ತರಿಸಲಾಗಿದೆ.
ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್‌ಗಳಿಂದ (ರಾಷ್ಟ್ರೀಕೃತ ಬ್ಯಾಂಕ್/ ಖಾಸಗಿ/ ಸಹಕಾರಿ ಬ್ಯಾಂಕ್‌ಗಳು) ಬೆಳೆ ಸಾಲ ಪಡೆದಿರುವ ರೈತರಿಗೆ ಕಡ್ಡಾಯವಾಗಿರುತ್ತದೆ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‌ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್‌ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿ ಸಲು ಅವಕಾಶ ಕಲ್ಪಿಸಲಾಗಿದೆ.
ಹಣಕಾಸು ಸಂಸ್ಥೆಗಳಿಂದ ಬೆಳೆ ಸಾಲವನ್ನು ಹೊಂದಿಲ್ಲದ ತೋಟಗಾರಿಕೆ ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ ಪ್ರತಿ, ಉಳಿತಾಯ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ ಸರಕಾರದ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿ, ಸ್ವಯಂ ಘೋಷಿಸಿ ದೃಢೀಕರಿಸಿದ ಜಮೀನಿನ ಬೆಳೆ ಪತ್ರ ಹಾಗೂ ಪ್ರಿಮಿಯಂ ವಿಮಾ ಮೊತ್ತದೊಂದಿಗೆ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬಹುದು. ಈ ಯೋಜನೆಯಡಿ ವಿಮಾ ನಷ್ಟ ಪರಿಹಾರವನ್ನು adhar card enabled RTGS/NEFT ಮೂಲಕ ಇತ್ಯರ್ಥಪಡಿಸಲಾಗುವ ಕಾರಣ ಎಲ್ಲಾ ರೈತರು ಆಧಾರ್ ಕಾರ್ಡ್ ಮಾಹಿತಿಗಳನ್ನು ಒದಗಿಸಬೇಕು. ಈ ಯೋಜನೆಯನ್ನು ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿಸಲು ಉದ್ದೇಶಿಸಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ ಗ್ರಾಮೀಣ ಸಹಕಾರಿ ಬ್ಯಾಂಕ್/ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಥವಾ ಕೃಷಿ ಅಧಿಕಾರಿಗಳು/ ತಾಲೂಕು ಮಟ್ಟದ ಹಿರಿಯ ಸಹಾಯಕ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರು/ ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಹಾರ್ಟಿಕ್ಲಿನಿಕ್, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, (ಜಿಪಂ) ಮಂಗಳೂರು ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.