ಪರಿಷತ್ ಚುನಾವಣೆಗೆ ಸರ್ವ ಸಿದ್ಧತೆ: ಡಿ.ಸಿ.
Team Udayavani, Jun 6, 2018, 3:36 PM IST
ಮಂಗಳೂರು: ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಹಾಗೂ ನೈಋತ್ಯ ಪದವೀಧರ ಕ್ಷೇತ್ರಗಳಿಗೆ ಜೂ. 8ರಂದು ನಡೆಯುವ ಚುನಾವಣೆಗೆ ದ. ಕನ್ನಡ ಜಿಲ್ಲೆಯಲ್ಲಿ ಸರ್ವ ಸಿದ್ಧತೆಗಳನ್ನು ಮಾಡಲಾಗಿದೆ. ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ 14 ಹಾಗೂ ಪದವೀಧರರ ಕ್ಷೇತ್ರಕ್ಕೆ 23 ಮತಗಟ್ಟೆಗಳು ಸೇರಿದಂತೆ ಒಟ್ಟು 37 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರಿಸಿದ ಅವರು ಜೂ. 8ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲಿದೆ. ಈ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಭಾವಚಿತ್ರ ಇರುವ ಗುರುತಿನ ಚೀಟಿಯೊಂದಿಗೆ ನಿಗದಿತ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಬಹುದಾಗಿದೆ. ಗುರುತು ಚೀಟಿ ಇಲ್ಲದಿದ್ದರೆ ಚುನಾವಣಾ ಆಯೋಗ ಅನುಮೋದಿಸಿರುವ ಇತರ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ನೀಡಿ ಮತ ಚಲಾಯಿಸಬಹುದಾಗಿದೆ. ಮತದಾರರ ವಿವರಗಳನ್ನು dk.nic.in ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ ಎಂದರು.
ಮತದಾನ ವಿಧಾನ
ಮತದಾನ ಮಾಡಲು ನೇರಳೆ ಬಣ್ಣದ ಸ್ಕೆಚ್ ಪೆನ್ ಬಳಸಲಾಗುವುದು. ಆದ್ಯತೆಗನುಗುಣವಾಗಿ ಪ್ರಾಶಸ್ತÂ ಮತ ಚಲಾವಣೆ ಮಾಡಲು ಅವಕಾಶವಿದೆ. ಅಂಕೆಗಳಲ್ಲಿ 1, 2, 3… ರಂತೆ ಅಭ್ಯರ್ಥಿಗಳ ಎದುರು ನಮೂದಿಸಿ ಮತ ಚಲಾವಣೆ ಮಾಡಬೇಕಿರುತ್ತದೆ. ಮತದಾರ ಒಟ್ಟು ಅಭ್ಯರ್ಥಿಗಳು ಮತ್ತು ನೋಟಾ ಸೇರಿದಂತೆ ಮತಗಳನ್ನು ನೀಡಬಹುದಾಗಿದೆ ಎಂದರು.
ಆಯೋಗದ ನಿರ್ದೇಶನದಂತೆ ಪದವೀಧರ ಕ್ಷೇತ್ರದ ಮತದಾರರ ಬಲಕೈಯ ತೋರು ಬೆರಳಿಗೆ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರನ ಮಧ್ಯದ ಬೆರಳಿಗೆ ಶಾಯಿ ಹಾಕಲಾಗುವುದು.
ಅಸಿಂಧು ಮತಗಳು
1ನೇ ಪ್ರಾಶಸ್ತÂದ ಮತ ದಾಖಲಿಸಿಲ್ಲದ, 1ನೇ ಪ್ರಾಶಸ್ತÂದ ಮತವನ್ನು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗೆ ದಾಖಲಿಸಿದ, ನೇರಳೆ ಬಣ್ಣದ ಸ್ಕೆಚ್ ಪೆನ್ ವಿನಾ ಉಳಿದ ಸಾಧನದಿಂದ ಗುರುತಿಸಿದ ಮತಗಳು, ಯಾವ ಅಭ್ಯರ್ಥಿಯ ಮುಂದೆ ಮತ ಚಲಾಯಿಸಲಾಗಿದೆ ಎಂದು ನಿರ್ಧಾರಕ್ಕೆ ಬರಲಾಗದ ಮತಗಳು ಅಸಿಂಧು ಮತಗಳಾಗಿ ಪರಿಗಣಿಸಲ್ಪಡುತ್ತದೆ ಎಂದು ವಿವರಿಸಿದರು.
ಭದ್ರತಾ ಕೊಠಡಿ
ಮತದಾನ ಮುಕ್ತಾಯಗೊಂಡ ಬಳಿಕ ಜಿಲ್ಲೆಯ ಎಲ್ಲ ಕ್ಷೇತ್ರಗಳ ಮತಗಟ್ಟೆಗಳಿಂದ ಮತಪೆಟ್ಟಿಗೆ, ಶಾಸನಬದ್ಧ ಲಕೋಟೆ ಗಳನ್ನು ಸಂಗ್ರಹಿಸಿ ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಮೈಸೂ ರಿನ ಮಹಾ ರಾಣಿ ವಿಮೆನ್ಸ್ ಆ್ಯಂಡ್ ಬಿಸಿನೆಸ್ ಮ್ಯಾನೇಜ್ ಮೆಂಟ್ ಕಾಲೇಜಿಗೆ ಒಯ್ದು ಭದ್ರತಾ ಕೊಠಡಿಯಲ್ಲಿ ಸಂಗ್ರಹಿಸಿಡಲಾಗುವುದು.
ಜೂ. 12ರಂದು ಮತ ಎಣಿಕೆ
ಮೈಸೂರಿನ ಮಹಾರಾಣಿ ವಿಮೆನ್ಸ್ ಆ್ಯಂಡ್ ಬಿಸಿನೆಸ್ ಮೆನೇಜ್‌ಮೆಂಟ್ ಕಾಲೇಜಿನಲ್ಲಿ ಜೂ. 12ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.