ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟನೆ


Team Udayavani, Jan 13, 2018, 3:55 PM IST

13-Jan-20.jpg

ಕಬಕ: ಕರಾವಳಿ ಜಿಲ್ಲೆಯ ಮಣ್ಣಿನಲ್ಲಿಯೇ ಒಂದು ಉತ್ತಮ ಗುಣವಿದೆ. ಈ ಭಾಗದ ಜನರು ಉತ್ತಮ ಸಂಸ್ಕೃತಿ
ಉಳ್ಳವರಾಗಿದ್ದಾರೆ ಮಾತ್ರವಲ್ಲದೆ, ಅವರಲ್ಲಿ ಪರೋಪಕಾರಿ ಗುಣವಿದೆ ಎಂದು ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ.
ಆಚಾರ್ಯ ಹೇಳಿದರು.

ಅವರು ಇಡ್ಕಿದು ಸೇವಾ ಸಹಕಾರಿ ಸಂಘ ಅಡ್ಯಾಲು ಕರೆ (ಕಬಕ) ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಪಾಲಿಟೆಕ್ನಿಕ್‌ ನೆಹರೂನಗರ ಇದರ ವಿವೇಕಾನಂದ ಔಷಧ ಕೇಂದ್ರದ ಸಹ ಯೋಗದಲ್ಲಿ ಇಡ್ಕಿದು ಸೇವಾ ಸಹಕಾರಿ ಸಂಘ ಇದರ ಸಾರಥ್ಯದಲ್ಲಿ ಆರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಜ.12ರಂದು ಸಹಕಾರಿ ಸಂಘದ ಅಡ್ಯಾಲುಕರೆ ಶಾಖಾ ಪಂಚಾಮೃತ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

ಇದೊಂದು ಉತ್ತಮ ಕಾರ್ಯವಾಗಿದೆ.ಪ್ರಧಾನಿ ಮೋದಿ ಅವರ ಈ ಪರಿಕಲ್ಪನೆ ಇಡೀ ದೇಶದ ಜನತೆಗೆ ಒಂದು ಬಹಳ
ಉಪಕಾರಿಯಾಗಿದೆ. ವಿದ್ಯೆ, ಉದ್ಯೋಗದ ಜೊತೆಗೆ ಆರೋಗ್ಯವೂ ಅತೀ ಅಗತ್ಯ. ಜನರಲ್ಲಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಲು ಇಂತಹ ಸಮಾಜಮುಖಿ ಕಾರ್ಯದಿಂದ ಮಾತ್ರ ಸಾಧ್ಯ. ಭಾರತ ಮಾತಾಕಿ ಜೈ ಎಂದು ಹೇಳುವ ಮೊದಲು ಭಾರತದ ಬಗೆಗಿನ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನಾ ಹಿರಿಯ ಮಾರುಕಟ್ಟೆ ಅಧಿಕಾರಿ ಡಾ| ಬಿ ಅನಿಲಾ ಅವರು ಮಾತನಾಡಿ, ಪ್ರಧಾನಿ ಅವರ ಜನೌಷಧ ಕೇಂದ್ರದಿಂದಾಗಿ ಹಲವರು ಪ್ರಯೋಜನ ಪಡೆದುಕೊಂಡಿದ್ದಾರೆ. ವಿವೇಕ ಔಷಧ ಕೇಂದ್ರದ ಸಹಯೋಗದಲ್ಲಿ ಆರಂಭಗೊಂಡ ಇದು ಮೂರನೇ ಶಾಖೆಯಾಗಿದೆ. ಜಿಲ್ಲೆಯಲ್ಲಿ ಇದು 9ನೇ
ಶಾಖೆಯಾಗಿದೆ. ಕರ್ನಾಟಕದಲ್ಲಿ 234ನೇ ಶಾಖೆಯಾಗಿದೆ. ದೇಶದಲ್ಲಿ 3,042ನೇ ಶಾಖೆಯಾಗಿದೆ. ಡಡಬ್ಲ್ಯೂ.ಎಚ್‌.ಒ.
ಸರ್ಟಿಫೈಡ್‌ ಕಂಪೆನಿಗಳಿಂದ ಮಾತ್ರ ನಾವು ಔಷಧಿಗಳನ್ನು ತರಿಸುತ್ತಿರುವುದರಿಂದ ನಮ್ಮಲ್ಲಿ ದೊರೆಯುವ ಔಷಧಿಗಳೆಲ್ಲ ಉತ್ತಮ ಗುಣಮಟ್ಟದ್ದೇ ಆಗಿವೆ ಎಂದರು.

ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ. ಗೋಪಾಲಕೃಷ್ಣ ಭಟ್‌ ಅಧ್ಯಕ್ಷತೆ ವಹಿಸಿದ್ದರು. ನಾಗಾಲ್ಯಾಂಡ್‌ನ‌ ರಾಜ್ಯಪಾಲ ಪಿ.ಬಿ. ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ಕುಮಾರ್‌ ಕಟೀಲು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ. ಪ್ರಭಾಕರ ಭಟ್‌, ಕಾರ್ಯದರ್ಶಿ ಡಾ| ಕೆ.ಎಂ. ಕೃಷ್ಣ ಭಟ್‌ ಕೊಂಕೋಡಿ ಭಾಗವಹಿಸಿದರು.

ಜಿ.ಪಂ. ಸದಸ್ಯೆ ಮೀನಾಕ್ಷಿ ಶಾಂತಿಗೋಡು, ಇಡ್ಕಿದು ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ, ಕಬಕ ಗ್ರಾ.ಪಂ. ಅಧ್ಯಕ್ಷೆ ಪ್ರೀತಾ ಡಿ., ಉಪಾಧ್ಯಕ್ಷ ಕೃಷ್ಣಪ್ಪ ಅಡ್ಯಾಲು, ನಿರ್ದೇಶಕರಾದ ಜಗದೀಶ್‌ ದೇವಸ್ಯ, ಚಂದ್ರಕಲಾ, ವನಜಾಕ್ಷಿ ಭಟ್‌, ಪ್ರವೀಣ್‌, ರಮೇಶ್‌ ಭಟ್‌, ನಾರಾಯಣ ನೇರ್ಲಾಜೆ, ಮೋಹನ್‌ ಶೆಟ್ಟಿ ಬಿ. ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾೖಕ್‌ ಎಸ್‌. ಸ್ವಾಗತಿಸಿದರು. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ ಆಡಳಿತ ಮಂಡಳಿ ಅಧ್ಯಕ್ಷ ಪ್ರಸನ್ನ ಎನ್‌. ಭಟ್‌ ವಂದಿಸಿದರು. ಸಿಬಂದಿ ಈಶ್ವರ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.