ಪ್ರಧಾನಿ ಮೋದಿ ವಿರೋಧಿಯಲ್ಲ, ನೀತಿಯ ವಿರೋಧಿ: ಡಾ| ಸುಬ್ರಮಣಿಯನ್‌ ಸ್ವಾಮಿ


Team Udayavani, Dec 8, 2021, 6:45 AM IST

ಪ್ರಧಾನಿ ಮೋದಿ ವಿರೋಧಿಯಲ್ಲ, ನೀತಿಯ ವಿರೋಧಿ: ಡಾ| ಸುಬ್ರಮಣಿಯನ್‌ ಸ್ವಾಮಿ

ಮಂಗಳೂರು: ಹಿಂದುತ್ವ, ಆರ್ಥಿಕ, ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ಧಾಂತದಿಂದ ಹಿಂದೆ ಸರಿಯುತ್ತಿದ್ದು, ಇದನ್ನು ಸರಿಪಡಿಸಿಕೊಳ್ಳಬೇಕು ಎಂಬುದು ನನ್ನ ಪ್ರತಿಪಾದನೆ. ನಾನು ಪ್ರಧಾನಿ ನರೇಂದ್ರ ಮೋದಿ ಅವರ ವಿರೋಧಿಯಲ್ಲ. ಆದರೆ ಅವರು ಅನುಸರಿಸುತ್ತಿರುವ ನೀತಿಯನ್ನು ವಿರೋಧಿಸುತ್ತಿದ್ದೇನೆ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಡಾ| ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ಉಡುಪಿ ಮತ್ತು ಶೃಂಗೇರಿ ಭೇಟಿಯ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ| ಬಿ.ಎಂ. ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಚೀನದ ವಿರುದ್ಧ ದುರ್ಬಲ ನಿಲುವು
ಚೀನದ ಆಕ್ರಮಣಕಾರಿ ನೀತಿಯ ವಿರುದ್ಧ ಮೋದಿ ಸರಕಾರದ ದುರ್ಬಲ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸರಕಾರ ವಶಕ್ಕೆ ಪಡೆದುಕೊಳ್ಳುವ ಪ್ರಯತ್ನ ವಿರುದ್ಧ ಹೋರಾಡಿದ್ದೇನೆ. ರಾಮಸೇತು ಒಡೆಯುವುದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದೆ. ಇದನ್ನು ಹೆರಿಟೇಜ್‌ ಆಗಿ ಪರಿಗಣಿಸುವ ಕಾರ್ಯವನ್ನು ಮೋದಿ ಸರಕಾರ ಮಾಡಿಲ್ಲ. ಈ ಕುರಿತ ಅಸಮಾಧಾನವನ್ನು ಪತ್ರಗಳ ಮೂಲಕ ಹಲವು ಬಾರಿ ಗಮನಕ್ಕೆ ತಂದಿದ್ದೇನೆ ಎಂದರು.

ತಪ್ಪುಗಳನ್ನು ಸರಿಪಡಿಸಿಕೊಳ್ಳಲಿ
ನಾನು ಎಕಾನಾಮಿಕ್ಸ್‌ ಪ್ರೊಫೆಸರ್‌. ಕೊರೊನಾದ ಹೊರತಾಗಿಯೂ ದೇಶದ ಆರ್ಥಿಕ ಅಭಿವೃದ್ಧಿಗೆ ವಿಪುಲ ಅವ ಕಾಶಗಳಿವೆ. ಆದರೆ ಸರಕಾರ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಕೆಲವು ತಪ್ಪು ನೀತಿ ಗಳು ಇದಕ್ಕೆ ಕಾರಣವಾಗಿದ್ದು, ಇದನ್ನು ಸರಿಪಡಿಸಿಕೊಳ್ಳಬೇಕು ಎಂಬುದು ನನ್ನ ನಿಲುವು. ನಾವು ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿದ್ದೇವೆ. ಸರ್ವಾಧಿಕಾರಿ ವ್ಯವಸ್ಥೆಯಲ್ಲಿ ಅಲ್ಲ ಎಂದು ಪ್ರಕ್ರಿಯಿಸಿದರು.

ಎಂದೆಂದೂ ಬಿಜೆಪಿಯಲ್ಲೇ
ನಾನು ಜನಸಂಘದ ಜತೆಯೇ ಇದ್ದವನು. ಪ್ರಸ್ತುತ ಮೋದಿ ನೀತಿಯ ಬಗ್ಗೆ ಅಸಮಾಧಾನ ಇದೆಯೇ ಹೊರತು ಬಿಜೆಪಿ ಬಗ್ಗೆ ಅಲ್ಲ. ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ ಎಂದರು.

ಇದನ್ನೂ ಓದಿ:ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಮಮತಾ ಭೇಟಿಯಲ್ಲಿ ರಾಜಕೀಯ ಉದ್ದೇಶವಿಲ್ಲ
“ಪಶ್ಚಿಮ ಬಂಗಾಲದ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ನನ್ನ ಹಳೆಯ ಸ್ನೇಹಿತೆ; ಅವರನ್ನು ಹೊಸ ದಿಲ್ಲಿ ಯಲ್ಲಿ ಭೇಟಿ ಮಾಡಿರು ವುದಕ್ಕೆ ಯಾವುದೇ ರಾಜಕೀಯ ಅರ್ಥ ಕಲ್ಪಿಸು ವುದು ಬೇಡ. ಅವರು ಬಂಗಾಲಕ್ಕೆ ಈ ಹಿಂದೆ ನನ್ನನ್ನು ಅಹ್ವಾ ನಿಸಿ ದ್ದರು. ಕಾರಣಾಂತರಗಳಿಂದ ಹೋಗಿರಲಿಲ್ಲ. ಬಂಗಾಲದಲ್ಲಿ ಹಿಂದೂ ದೇವಾಲಯ ಗಳ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಲ್ಲದೆ ಹಿಂದೂಗಳ ಭಾವನೆಗಳನ್ನು ಅವರಿಗೆ ತಿಳಿಸಿದ್ದೇನೆ ಎಂದು ಸ್ವಾಮಿ ಸ್ಪಷ್ಟಪಡಿಸಿದರು.

ಇಂದು ಶೃಂಗೇರಿ, ಉಡುಪಿಗೆ ಭೇಟಿ
ಡಾ| ಸ್ವಾಮಿ ಅವರು ಸಂಜೆ 6.30ಕ್ಕೆ ಮಂಗಳೂರಿಗೆ ಆಗಮಿಸಿ ಹ್ಯಾಟ್‌ಹಿಲ್‌ ಸಮೀಪ ಡಾ| ಕೃಷ್ಣ ಶೆಟ್ಟಿ ಅವರ ನಿವಾಸದಲ್ಲಿ ರಾತ್ರಿ ವಾಸ್ತವ್ಯ ಹೂಡಿದರು. ಬುಧವಾರ ಬೆಳಗ್ಗೆ ಶೃಂಗೇರಿಗೆ ತೆರಳಿ ಮಧ್ಯಾಹ್ನ ಉಡುಪಿಯ ರಾಜಾಂಗಣದಲ್ಲಿ ಕಾರ್ಯಕ್ರಮದಲ್ಲಿ ಭಾಗ ವಹಿಸುವರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.